UPSC Recruitment 2020: ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳ ನೇಮಕಾತಿ

UPSC Recruitment 2020: ಅಭ್ಯರ್ಥಿಗಳು ಆನ್​ಲೈನ್​​​ ಮೂಲಕ ಅರ್ಜಿ ಸಲ್ಲಿಬೇಕಾಗಿದ್ದು,  ಏಪ್ರಿಲ್ 2,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

job

job

  • Share this:
    ಕೇಂದ್ರ ಲೋಕ ಸೇವಾ ಆಯೋಗ 85 ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಸೂಚನೆಗಳನ್ನು ಓದಿ, ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಆಸಕ್ತ ಅಭ್ಯರ್ಥಿಗಳು ಆನ್​ಲೈನ್​​​ ಮೂಲಕ ಅರ್ಜಿ ಸಲ್ಲಿಬೇಕಾಗಿದ್ದು,  ಏಪ್ರಿಲ್ 2,2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

    ವಿದ್ಯಾರ್ಹತೆ:

    ಪದವಿ, ಸ್ನಾತಕೋತ್ತರ ಪದವಿ, ಬಿ.ಇ/ಬಿ.ಟೆಕ್ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪಡೆದಿದ್ದ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ವೇತನದ ವಿವರ:

    ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,600/- ರಿಂದ 39,100/-ರೂ ವೇತನವನ್ನು ನೀಡಲಾಗುವುದು.

    ವಯೋಮಿತಿ:

    ಅಸಿಸ್ಟೆಂಟ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳಿಗನುಸಾರ ಗರಿಷ್ಟ 30, 35, 40 ಮತ್ತು 43 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ:

    ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 25 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

    ಆಯ್ಕೆ ಪ್ರಕ್ರಿಯೆ:

    ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.

    ಅರ್ಜಿ ಸಲ್ಲಿಸುವುದು ಹೇಗೆ:

    ಅಸಕ್ತರು ಮೊದಲಿಗೆ ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 2,2020 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು

    ಇದನ್ನೂ ಓದಿ: ವಾಟ್ಸ್ಆ್ಯಪ್​ ಬಳಕೆದಾರರೇ ಡಿಲೀಟ್ ಆಗಿರುವ ಮೆಸೇಜ್ ಮತ್ತೆ ನೋಡಬಹುದು! ಹೇಗೆ ಗೊತ್ತಾ?
    First published: