ಚಳಿಗಾಲದಲ್ಲಿ ತಲೆದೂರುವ ಕೆಮ್ಮು-ನೆಗಡಿ ಸಮಸ್ಯೆಗೆ ಅಡುಗೆ ಮನೆಯಲ್ಲೇ ಇದೆ ಪರಿಹಾರ..!
ಅರಿಶಿನ ಹಾಲು ಕುಡಿಯುವುದರಿಂದ ಶೀತ ಮತ್ತು ನೆಗಡಿಗೆ ಪರಿಹಾರ ಸಿಗುತ್ತದೆ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ-ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಇದರ ಆಂಟಿ-ಆಕ್ಸಿಡೆಂಟ್ ಅಂಶವು ಬ್ಯಾಕ್ಟೀರಿಯಾದಿಂದ ರಕ್ಷಿಸುತ್ತದೆ. ಅರಿಶಿನ ಕೂಡ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
news18-kannada Updated:January 14, 2021, 7:24 AM IST

ಸಾಂದರ್ಭಿಕ ಚಿತ್ರ
- News18 Kannada
- Last Updated: January 14, 2021, 7:24 AM IST
ಹವಾಮಾನ ಬದಲಾವಣೆಯಿಂದ ಆರೋಗ್ಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಕೆಮ್ಮು ಮತ್ತು ಶೀತದ ಸಮಸ್ಯೆಗಳು ಕಂಡು ಬರುತ್ತವೆ. ಇಂತಹ ಅನೇಕ ಸಮಸ್ಯೆಗಳಿಗೆ ಅಡುಗೆಮನೆಯಲ್ಲಿರುವ ಪದಾರ್ಥಗಳನ್ನೇ ಬಳಸಿ ಮನೆಮದ್ದುಗಳನ್ನು ಮಾಡಿಕೊಳ್ಳಬಹುದು. ಅಂತಹ ಕೆಲವು ಮನೆಮದ್ದುಗಳ ಬಗ್ಗೆ ಇಲ್ಲಿ ತಿಳಿಸಲಾಗಿದ್ದು, ಇದರಿಂದ ಶೀಘ್ರದಲ್ಲೇ ಕೆಮ್ಮು ಹಾಗೂ ಶೀತದಿಂದ ಮುಕ್ತಿ ಪಡೆಯಬಹುದು.
ಕರಿಮೆಣಸು: ಕರಿಮೆಣಸನ್ನು ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಹಾಗೆಯೇ ಇದು ಶೀತ ಮತ್ತು ಕೆಮ್ಮನ್ನು ತಡೆಯುತ್ತದೆ. ಇದು ದೇಹವನ್ನು ಬಾಹ್ಯ ಸೋಂಕಿನಿಂದ ರಕ್ಷಿಸುತ್ತದೆ. ಅರ್ಧ ಟೀಸ್ಪೂನ್ ಕರಿಮೆಣಸು ಪುಡಿಯನ್ನು ತುಪ್ಪದೊಂದಿಗೆ ಸೇವಿಸುವುದರಿಂದ ಕೆಮ್ಮು ಲೋಳೆ ಸಮಸ್ಯೆಯಿಂದ ಪಾರಾಗಬಹುದು. ಗ್ರಂಥಿಗಳಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳು ಗಂಟಲನ್ನು ಸ್ವಚ್ಛಗೊಳಿಸಿ ಮತ್ತು ಕಫವನ್ನು ಹೊರಹಾಕುತ್ತವೆ. ಉಪ್ಪು ಮತ್ತು ಶುಂಠಿ: ಶುಂಠಿಯನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಉಪ್ಪಿನ ಜೊತೆ ತಿನ್ನಿರಿ. ಶುಂಠಿ ರಸವು ಸಹ ಕೆಮ್ಮಿಗೆ ಪರಿಹಾರ ನೀಡುತ್ತದೆ. ಹಾಗೆಯೇ ಉಪ್ಪು ಬ್ಯಾಕ್ಟೀರಿಯಾವನ್ನು ನಿರ್ನಾಮ ಮಾಡುವುದರಿಂದ ಈ ಸಮಸ್ಯೆಯಿಂದ ಪಾರಾಗಬಹುದು.
ತುಳಸಿ ಎಲೆಗಳು: ತುಳಸಿ ಎಲೆ, ಶುಂಠಿ ಮತ್ತು ಕರಿಮೆಣಸಿನೊಂದಿಗೆ ಚಹಾ ಕುಡಿಯುವುದರಿಂದ ಕೆಮ್ಮು ಮತ್ತು ಶೀತದಲ್ಲಿ ತ್ವರಿತ ಪರಿಹಾರ ಸಿಗುತ್ತದೆ. ತುಳಸಿ-ಶುಂಠಿ ರಸದಲ್ಲಿ ಜೇನುತುಪ್ಪವನ್ನು ಬೆರೆಸಿ ಬೆಳಿಗ್ಗೆ ಮತ್ತು ಸಂಜೆ ಸೇವಿಸುವುದರಿಂದ ಕೆಮ್ಮು ಗುಣವಾಗುತ್ತದೆ. ದೇಹವು ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಸಹ ಅಭಿವೃದ್ಧಿಪಡಿಸುತ್ತದೆ.
ಜೇನುತುಪ್ಪ: ನಿಂಬೆ ಮತ್ತು ಸ್ವಲ್ಪ ಏಲಕ್ಕಿ ಪುಡಿಯ ಮೂಲಕ ಶೀತ ಮತ್ತು ಕೆಮ್ಮು ಸಮಸ್ಯೆಯನ್ನು ನಿವಾರಣೆ ಮಾಡಬಹುದು. ಇದಕ್ಕಾಗಿ ನೀವು ಜೇನುತುಪ್ಪ, ನಿಂಬೆ ಮತ್ತು ಏಲಕ್ಕಿ ಪುಡಿಯನ್ನು ಬೆರೆಸಿ ಸಿರಪ್ ತಯಾರಿಸಿ. ಅದರಲ್ಲಿ ಒಂದು ಚಮಚವನ್ನು ದಿನಕ್ಕೆ ನಾಲ್ಕು ಬಾರಿ ಸೇವಿಸುವುದರಿಂದ ಪರಿಹಾರ ಸಿಗುತ್ತದೆ.
ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳಿಗೆ ಜಾಯಿಕಾಯಿ ಮತ್ತು ಒಣ ಶುಂಠಿಯನ್ನು ದೇಸಿ ತುಪ್ಪದಲ್ಲಿ ಪುಡಿ ಮಾಡಿ. ಅತಿಯಾದ ಕೆಮ್ಮಿನಿಂದ ಪರಿಹಾರ ಪಡೆಯಲು ಜಾಯಿಕಾಯಿ ರುಬ್ಬಿ ಮತ್ತು ಅದಕ್ಕೆ ಜೇನುತುಪ್ಪ ಸೇರಿಸಿ.
ಕೆಮ್ಮು,ಗಂಟಲು ನೋವು ಮತ್ತು ಜ್ವರ ಬಂದಾಗ, ನೆಲ್ಲಿಕಾಯಿ ರಸದ ಕಷಾಯವನ್ನು ಕುಡಿಯಬೇಕು. ನೆಲ್ಲಿಕಾಯಿಯಲ್ಲಿರುವ ಆಂಟಿ-ಆಕ್ಸಿಡೆಂಟ್ಗಳು ದೇಹದ ಪ್ರತಿರಕ್ಷೆಯನ್ನು ಹೆಚ್ಚಿಸುತ್ತವೆ. ಅಲ್ಲದೆ, ಇದರಲ್ಲಿರುವ ವಿಟಮಿನ್ ಸಿ ದೇಹದ ರಕ್ತ ಪರಿಚಲನೆ ಸುಧಾರಿಸುತ್ತದೆ.
ಅರಿಶಿನ ಹಾಲು ಕುಡಿಯುವುದರಿಂದ ಶೀತ ಮತ್ತು ನೆಗಡಿಗೆ ಪರಿಹಾರ ಸಿಗುತ್ತದೆ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿ-ವೈರಲ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಇದರ ಆಂಟಿ-ಆಕ್ಸಿಡೆಂಟ್ ಅಂಶವು ಬ್ಯಾಕ್ಟೀರಿಯಾದಿಂದ ರಕ್ಷಿಸುತ್ತದೆ. ಅರಿಶಿನ ಕೂಡ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಕರಿಮೆಣಸು: ಕರಿಮೆಣಸನ್ನು ಬೆಚ್ಚಗಿನ ನೀರಿನಲ್ಲಿ ಮಿಶ್ರಣ ಮಾಡಿ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದು. ಹಾಗೆಯೇ ಇದು ಶೀತ ಮತ್ತು ಕೆಮ್ಮನ್ನು ತಡೆಯುತ್ತದೆ. ಇದು ದೇಹವನ್ನು ಬಾಹ್ಯ ಸೋಂಕಿನಿಂದ ರಕ್ಷಿಸುತ್ತದೆ. ಅರ್ಧ ಟೀಸ್ಪೂನ್ ಕರಿಮೆಣಸು ಪುಡಿಯನ್ನು ತುಪ್ಪದೊಂದಿಗೆ ಸೇವಿಸುವುದರಿಂದ ಕೆಮ್ಮು ಲೋಳೆ ಸಮಸ್ಯೆಯಿಂದ ಪಾರಾಗಬಹುದು. ಗ್ರಂಥಿಗಳಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳು ಗಂಟಲನ್ನು ಸ್ವಚ್ಛಗೊಳಿಸಿ ಮತ್ತು ಕಫವನ್ನು ಹೊರಹಾಕುತ್ತವೆ.