World Blood Donor Day 2019: ವಿಶ್ವ ರಕ್ತದಾನ ದಿನ : ರಕ್ತಹೀನತೆಯ ಸಮಸ್ಯೆಗೆ ಇಲ್ಲಿದೆ ಪರಿಹಾರ

ವಿಟಮಿನ್​ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಗಳು ಕೂಡ ರಕ್ತಹೀನತೆಯ ಸಮಸ್ಯೆಗೆ ಪ್ರಮುಖ ಆಹಾರವಾಗಿದೆ. ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿರುವ ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್, ಕಬ್ಬಿಣಾಂಶ ಹೆಚ್ಚಾಗಿದ್ದು, ಇದನ್ನು ಪ್ರತಿನಿತ್ಯ ತಿಂದರೆ ರಕ್ತದ ಕೊರತೆಗೆ ಪರಿಹಾರ ಕಂಡುಕೊಳ್ಳಬಹುದು.

zahir | news18
Updated:June 14, 2019, 4:35 PM IST
World Blood Donor Day 2019: ವಿಶ್ವ ರಕ್ತದಾನ ದಿನ : ರಕ್ತಹೀನತೆಯ ಸಮಸ್ಯೆಗೆ ಇಲ್ಲಿದೆ ಪರಿಹಾರ
@redcrossyouth.org
  • News18
  • Last Updated: June 14, 2019, 4:35 PM IST
  • Share this:
ಜೂನ್​ 14 ಅನ್ನು ವಿಶ್ವ ರಕ್ತದಾನ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ರಕ್ತದಾನವನ್ನು ಜೀವದಾನ ಎಂದು ಪರಿಗಣಿಸಲಾಗುತ್ತದೆ. ಒಂದು ಬಾರಿ ರಕ್ತದಾನ ಮಾಡಿದರೆ ಕನಿಷ್ಠ ಪಕ್ಷ ಎರಡು ಅಥವಾ ಮೂರು ಜೀವಗಳನ್ನು ಉಳಿಸಿಕೊಳ್ಳಬಹುದು. ಆದರೆ ಇಂದು ರಕ್ತಹೀನತೆಯೇ ಬಹು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ದೇಹದಲ್ಲಿ ರಕ್ತದ ಕೊರತೆಯಾದರೆ ಅನೇಕ ಸಮಸ್ಯೆಗಳು ತಲೆದೂರುತ್ತವೆ. ಇದು ಪೋಷಕಾಂಶಗಳ ಕೊರತೆ ಅಥವಾ ವಂಶ ಪಾರಂಪರ್ಯದ ಕಾರಣಗಳಿಂದ ಉಂಟಾಗಬಹುದು. ರಕ್ತದಲ್ಲಿ ಹಿಮೊಗ್ಲೊಬಿನ್ ಮಟ್ಟ ಕಡಿಮೆಯಾದರೆ ದಣಿವು, ನಿರಾಸಕ್ತಿ, ಆರೋಗ್ಯದಲ್ಲಿ ಏರು ಪೇರು ಮುಂತಾದ ರಕ್ತಹೀನತೆಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ.

ಒಬ್ಬ ಆರೋಗ್ಯವಂತನು ವೈದ್ಯಕೀಯ ಪರೀಕ್ಷೆಯ ಮೂಲಕ  2 ತಿಂಗಳಿಗೊಮ್ಮೆ ರಕ್ತದಾನವನ್ನು ಮಾಡಬಹುದು. ಹೆಣ್ಣು ಗಂಡೆಂಬ ಬೇಧವಿಲ್ಲದೆ 18 ರಿಂದ 60 ವರ್ಷದೊಳಗಿನವರು ರಕ್ತದಾನ ಮಾಡಿ ಜೀವ ಉಳಿಸುವಂತಹ ಕಾರ್ಯಕ್ಕೆ ಕೈ ಜೋಡಿಸಬಹುದಾಗಿದೆ. ಇಲ್ಲಿ ಪುರುಷರು 3 ತಿಂಗಳಿಗೊಮ್ಮೆ ಹಾಗೂ ಮಹಿಳೆಯರು 4 ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ಉತ್ತಮ.

ಆದರೆ ರಕ್ತದಾನ ಮಾಡುವ ಮೊದಲು ನಿಮ್ಮ ದೇಹದ ರಕ್ತದಲ್ಲಿ ಹಿಮೋಗ್ಲೊಬಿನ್ ಪ್ರಮಾಣ 12.05ಗಿಂತ ಹೆಚ್ಚಿರಬೇಕು. ಕೆಲ ಆಹಾರಗಳನ್ನು ಪ್ರತಿ ನಿತ್ಯ ಸೇವಿಸುವುದರಿಂದ ಈ  ಪ್ರಮಾಣವನ್ನು ಹೆಚ್ಚಿಸಕೊಳ್ಳಬಹುದು. ಹಾಗೆಯೇ ರಕ್ತಹೀನತೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಅಂತಹ ಕೆಲ ಆಹಾರಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.


ಬೀಟ್​ ರೂಟ್​ : ಬೀಟ್​ ರೂಟ್​ ಎನ್ನುವುದು ರಕ್ತಹೀನತೆಗೆ ಪರಿಣಾಮಕಾರಿ ಆಹಾರ. ಸಾಮಾನ್ಯ ರಕ್ತ ಕೊರತೆ ಉಂಟಾದರೆ ವೈದ್ಯರು ಕೂಡ ಮೊದಲು ಬೀಟ್ ರೂಟ್​ ಸೇವನೆಗೆ ಸಲಹೆ ನೀಡುತ್ತಾರೆ. ಇದರಲ್ಲಿ ಕಂಡು ಬರುವ ಕಬ್ಬಿಣಾಂಶ, ಫೋಲಿಕ್ ಆ್ಯಸಿಡ್, ಫೈಬರ್ ಮತ್ತು ಪೊಟಾಶಿಯಂ ಅಂಶಗಳು ದೇಹದಲ್ಲಿ ರಕ್ತವನ್ನು ಹೆಚ್ಚಿಸುತ್ತದೆ.


 
ದಾಳಿಂಬೆ : ದಾಳಿಂಬೆ ತಿಂದರೆ ಶೀಘ್ರದಲ್ಲೇ ರಕ್ತಹೀನತೆಯ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಇದರಲ್ಲಿರುವ ಕಬ್ಬಿಣಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಕಾರ್ಬೋಹೈಡ್ರೇಟ್​ಗಳು ಮತ್ತು ಫೈಬರ್ ಅಂಶಗಳು ಹಿಮೋಗ್ಲೊಬಿನ್ ಪ್ರಮಾಣವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ.


ನೆಲ್ಲಿಕಾಯಿ : ವಿಟಮಿನ್​ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಗಳು ಕೂಡ ರಕ್ತಹೀನತೆಯ ಸಮಸ್ಯೆಗೆ ಪ್ರಮುಖ ಆಹಾರವಾಗಿದೆ. ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿರುವ ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ವಿಟಮಿನ್, ಕಬ್ಬಿಣಾಂಶ ಹೆಚ್ಚಾಗಿದ್ದು, ಇದನ್ನು ಪ್ರತಿನಿತ್ಯ ತಿಂದರೆ ರಕ್ತದ ಕೊರತೆಗೆ ಪರಿಹಾರ ಕಂಡುಕೊಳ್ಳಬಹುದು.


ಸೇಬು (ಆ್ಯಪಲ್) : ಪ್ರತಿನಿತ್ಯ ಸೇಬನ್ನು ತಿನ್ನುವುದರಿಂದ ಹಿಮೋಗ್ಲೊಬಿನ್ ಮಟ್ಟವನ್ನು ಹೆಚ್ಚಿಸಬಹುದು. ಆ್ಯಪಲ್ ತಿನ್ನುವುದರಿಂದ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ. ಇದರ ಸೇವನೆಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಬಹುದು.
First published:June 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ