ಮಂಡ್ಯ: ಎಲ್ಲಿ ನೋಡಿದ್ರೂ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ (Bengaluru Mysuru Expressway) ಸುದ್ದಿಯೇ ಚರ್ಚೆಯಾಗ್ತಿದೆ. ಸದ್ಯ ಭಾರೀ ಚರ್ಚೆಯಲ್ಲಿರುವ ಈ ಹೆದ್ದಾರಿಯ ಹೆಸರಿನ ಕುರಿತು ಇದೀಗ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಸದ್ಯಕ್ಕೆ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಗೆ ರಾಷ್ಟ್ರೀಯ ಹೆದ್ದಾರಿಗೆ (Bengaluru Mysuru Expressway Name) ಯಾವುದೇ ಹೆಸರನ್ನು ಇಡುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಸ್ಪಷ್ಟನೆ ನೀಡಿದ್ದಾರೆ.
ಇಡಿ ದೇಶದಲ್ಲಿ ಹೆದ್ದಾರಿಗೆ ಯಾವುದೇ ವ್ಯಕ್ತಿಯ ಹೆಸರನ್ನು ಇಟ್ಟ ಉದಾಹರಣೆ ಇಲ್ಲ. ಮಂಡ್ಯ, ಬೆಂಗಳೂರು, ಮೈಸೂರು ಜನರು ಸುಭಿಕ್ಷೆಯಿಂದ ಇರಲು ಕಾವೇರಿ ನದಿ ಕಾರಣವಾಗಿದೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಗೆ ಕಾವೇರಿ ನದಿಯ ಹೆಸರಿಡಲು ನಾನು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ರಾಜಕಾರಣಿಗಳ ಹೆಸರು ಇಡುವ ಚಾನ್ಸೇ ಇಲ್ಲ!
ಕೆಲವು ರಾಜಕಾರಣಿಗಳು ವ್ಯಕ್ತಿಯ ಹೆಸರಿಡಬೇಕು ಎಂದಿದ್ದಾರೆ. ಈಗಾಗಲೇ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮುಂದಿನ ದಿನಗಳಲ್ಲಿ ಕಾವೇರಿ ಎಕ್ಸ್‌ಪ್ರೆಸ್ ವೇ ಎಂದು ನಾಮಕರಣ ಮಾಡಲು ಚಿಂತಿಸಲಾಗುವುದುಎಂದು ಅವರು ತಿಳಿಸಿದ್ದಾರೆ.
ಕಾವೇರಿ ಮಾತೆಯ ಫೋಟೋ ಮನೆಲಿರುತ್ತೆ
ಮಂಡ್ಯ ಭಾಗದಲ್ಲಿ ಮನೆ ದೇವರ ಫೋಟೋ ಜೊತೆಗೆ ಕಾವೇರಿ ಮಾತೆಯ ಫೋಟೋ ಇಟ್ಟು ಪೂಜೆ ಮಾಡಲಾಗುತ್ತದೆ. ಈ ಭಾಗದ ಜನರ ಭಾವನೆ ಅರ್ಥ ಮಾಡಿಕೊಂಡು ಕಾವೇರಿ ಎಕ್ಸ್‌ಪ್ರೆಸ್ ವೇ ಎಂದು ನಾಮಕರಣ ಮಾಡಿದರೆ ಒಳ್ಳೆಯದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಇದನ್ನೂ ಓದಿ: Bengaluru Mysuru Expressway ಲೋಕಾರ್ಪಣೆ, ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಎಷ್ಟು ಲೇನ್ಗಳಿವೆ?
ಸದ್ಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಎಷ್ಟು ಲೇನ್ಗಳಿಗೆ ಎಂಬ ಕುರಿತು ಚರ್ಚೆಗಳು ನಡೆದಿದ್ದವು. ಇದೀಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು (Nitin Gadkari) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ರಸ್ತೆಗಳ ಕುರಿತು ಸ್ಪಷ್ಟ ಚಿತ್ರಣ ನೀಡಿದ್ದಾರೆ.
ಇದನ್ನೂ ಓದಿ: Bengaluru Traffic ಪರಿಹಾರಕ್ಕೆ ಈ ಯೋಜನೆಯೇ ರಾಮಬಾಣ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ 6 ಮುಖ್ಯ ಪಥಗಳು ಹಾಗೂ ಎರಡು ಸರ್ವೀಸ್ ರಸ್ತೆಗಳು ಇವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ