• Home
 • »
 • News
 • »
 • mandya
 • »
 • Mandya Maha Kumbh Mela: ಮಂಡ್ಯದಲ್ಲಿ ಮಹಾ ಕುಂಭಮೇಳ; ಧಾರ್ಮಿಕ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

Mandya Maha Kumbh Mela: ಮಂಡ್ಯದಲ್ಲಿ ಮಹಾ ಕುಂಭಮೇಳ; ಧಾರ್ಮಿಕ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ

ಮಹಾ ಕುಂಭಮೇಳ

ಮಹಾ ಕುಂಭಮೇಳ

ಭಕ್ತರಿಗೆ 4 ದಿನಗಳ ಕಾಲ ನಿರಂತರ ಊಟದ ವ್ಯವಸ್ಥೆ ಮಾಡಲಾಗಿದ್ದು, 200ಕ್ಕೂ ಹೆಚ್ಚು ಬಯೋ ಟಾಯ್ಲೆಟ್ ವ್ಯವಸ್ಥೆ ನಿರ್ಮಿಸಲಾಗಿದೆ. ಜೊತೆಗೆ ಯಾತ್ರಾರ್ಥಿಗಳಿಗೆ ಉಚಿತ ವೈಫೈ ಇಂಟರ್​ನೆಟ್ ವ್ಯವಸ್ಥೆ ಮಾಡಲಾಗಿದೆ.

 • Share this:

  ಮಂಡ್ಯ: ಅಕ್ಟೋಬರ್ 13 ರಿಂದ 16 ರವರೆಗೆ ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ (Triveni Sangam) ಮಹಾ ಕುಂಭ ಮೇಳ (Maha Kumbh Mela) ನಡೆಯಲಿದೆ. ಕುಂಭ ಮೇಳದಲ್ಲಿ ಮಲೆ ಮಹದೇಶ್ವರ ಜಯಂತಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಮಂಡ್ಯ ಜಿಲ್ಲಾ ಉತ್ಸವ ಆಯೋಜನೆ ಮಾಡಿದೆ. ಅಕ್ಟೋಬರ್ 13 ರಂದು ತ್ರಿವೇಣಿ ಸಂಗಮದಲ್ಲಿ ಸೇರಲಿರುವ ಮಲೆ ಮಹದೇಶ್ವರ ಬೆಟ್ಟದಿಂದ 3 ಜ್ಯೋತಿಗಳು (Male Mahadeshwara Hills) ಹೊರಡುತ್ತವೆ. ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭ ಮೇಳದ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ.


  13 ರಂದು ಮಧ್ಯಾಹ್ನ 3 ಗಂಟೆಗೆ ಕೆ.ಆರ್. ಪೇಟೆಯಲ್ಲಿ ಜಿಲ್ಲಾ ಉತ್ಸವದ ಮೆರವಣಿಗೆಗೆ ಚಾಲನೆ ದೊರೆಯಲಿದೆ.  ನಂತರ ಸಂಜೆ  6 ಗಂಟೆಗೆ ಜಿಲ್ಲಾ ಉತ್ಸವದ ಉದ್ಘಾಟನೆ ನೆರವೇರಲಿದೆ.


  14 ರಂದು ಬೆಳಗ್ಗೆ 11 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಂದ ಕುಂಭ ಮೇಳ ಕಾರ್ಯಕ್ರಮ ಉದ್ಘಾಟನೆ ನಡೆಯಲಿದೆ.


  15 ರಂದು ಬೆಳಗ್ಗೆ 11 ಗಂಟೆಗೆ ಕುಂಭ ಮೇಳದ ಧಾರ್ಮಿಕ ಸಭೆ ಉದ್ಘಾಟನೆ ನಡೆಯಲಿದೆ.


  16 ರಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮಹಾ ಕುಂಭಮೇಳ ಸಮಾರೋಪ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ.


  ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಸಚಿವರಾದ ನಾರಾಯಣ ಗೌಡ ಮತ್ತು ಕೆ. ಗೋಪಾಲಯ್ಯ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.


  ಇದನ್ನೂ ಓದಿ: Siddi Community: ಬರ್ತಿದೆ ಸಿದ್ದಿ ಸಮುದಾಯದ ಸಿನಿಮಾ!


  ಪ್ರತಿದಿನ 2 ಲಕ್ಷದಂತೆ ಒಟ್ಟು 6 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ
  16 ರಂದು ಬೆಳಗ್ಗೆ 9.30ಕ್ಕೆ ಮಹಾಕುಂಭ ಮೇಳದ ಪುಣ್ಯ ಸ್ನಾನ ನೆರವೇರಲಿದೆ. ಕುಂಭ ಮೇಳದಲ್ಲಿ 300ಕ್ಕೂ ಹೆಚ್ಚು ಧಾರ್ಮಿಕ ಗುರುಗಳು, 3 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಭಾಗಿಯಾಗುವ ನಿರೀಕ್ಷೆಯಿದೆ.   ಅಲ್ಲದೇ ಪ್ರತಿದಿನ 2 ಲಕ್ಷದಂತೆ ಒಟ್ಟು 6 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.  ನಿರ್ಮಲಾನಂಧನಾಥ ಸ್ವಾಮೀಜಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ ಸೇರಿದಂತೆ 30ಕ್ಕೂ ಹೆಚ್ಚು ಸ್ವಾಮೀಜಿಗಳು ಕುಂಭ ಮೇಳದಲ್ಲಿ ಭಾಗವಹಿಸಲಿದ್ದಾರೆ. ಸ್ವಾಮೀಜಿಗಳು, ಸಾಧು ಸಂತರು, ಅತಿ ಗಣ್ಯ ವ್ಯಕ್ತಿಗಳು ಹಾಗೂ ಭಕ್ತರಿಗೆ ಪ್ರತ್ಯೇಕ ಸ್ನಾನ ಘಟ್ಟದ ವ್ಯವಸ್ಥೆ ಮಾಡಲಾಗಿದೆ.  


  ಉಚಿತ ವೈಫೈ ವ್ಯವಸ್ಥೆ
  ಭಕ್ತರಿಗೆ 4 ದಿನಗಳ ಕಾಲ ನಿರಂತರ ಊಟದ ವ್ಯವಸ್ಥೆ ಮಾಡಲಾಗಿದ್ದು, 200ಕ್ಕೂ ಹೆಚ್ಚು ಬಯೋ ಟಾಯ್ಲೆಟ್ ವ್ಯವಸ್ಥೆ ನಿರ್ಮಿಸಲಾಗಿದೆ. ಜೊತೆಗೆ ಯಾತ್ರಾರ್ಥಿಗಳಿಗೆ ಉಚಿತ ವೈಫೈ ಇಂಟರ್​ನೆಟ್ ವ್ಯವಸ್ಥೆ ಮಾಡಲಾಗಿದೆ.


  ಇದನ್ನೂ ಓದಿ: Shor Gumbaz: ಇದು ಶೋರ್ ಗುಂಬಜ್ ಚೋರ್ ಗುಂಬಜ್ ಆದ ಕಥೆ!


  ಭದ್ರತೆಗಾಗಿ 2000 ಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆ
  200 ಸಾಧುಗಳ ವಾಸ್ತವ್ಯಕ್ಕೆ ಟೆಂಟ್ ನಿರ್ಮಾಣ ಮಾಡಲಾಗಿದ್ದು ಭದ್ರತೆಗಾಗಿ 2000 ಕ್ಕೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸಂಗಮದಲ್ಲಿ ನುರಿತ ಈಜುಗಾರರು, ಮುಳುಗು ತಜ್ಞರ ನಿಯೋಜಿಸಿ ನದಿಯಲ್ಲಿ ಯಾತ್ರಾರ್ಥಿಗಳ ಸುರಕ್ಷತೆಗೆ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಮಹಾಕುಂಭಮೇಳಕ್ಕೆ ರಾಜ್ಯ ಸರ್ಕಾರದಿಂದ 2 ಕೋಟಿ ರೂ. ಅನುದಾನ ಬಿಡುಗಡೆ  ಮಾಡಲಾಗಿದೆ.  

  Published by:ಗುರುಗಣೇಶ ಡಬ್ಗುಳಿ
  First published: