ಮಂಗಳೂರು: 2022 ನೇ ಸಾಲಿನ ವಿಶೇಷ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿಕಲಚೇತನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ (Scholarship) ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada News) ವ್ಯಾಪ್ತಿಯಲ್ಲಿ ಬರುವ ವಿಶೇಷ ಚೇತನ ವಿದ್ಯಾರ್ಥಿಗಳು ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ಚೇತನರು ಅರ್ಜಿ ಸಲ್ಲಿಸುವ ವಿಧಾನ ಹೇಗೆ? ಹಾಗೂ ಕೊನೆ ದಿನಾಂಕದ ವಿವರ ಇಲ್ಲಿದೆ ನೋಡಿ. ಅಗತ್ಯವುಳ್ಳ ಅರ್ಹರು ಸುಲಭವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ರಾಜ್ಯ ಸರಕಾರದ ಅಧಿಕೃತ ಸುವಿಧಾ ಸೇವೆಗಳ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ವೆಬ್ಸೈಟ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ. ಅರ್ಜಿದಾರರು ವೆಬ್ ಸೈಟ್ ಮೂಲಕ ಲಾಗಿನ್ ಆಗಿ ಅಲ್ಲಿ ವಿವರಗಳನ್ನು ಭರ್ತಿ ಮಾಡಬೇಕಾಗುತ್ತದೆ. ತಮ್ಮ ಜಿಲ್ಲೆ, ಪ್ರವರ್ಗ ಹಾಗೂ ವಿಕಲಚೇತನರು ತಮ್ಮ ವಿಶೇಷ ಚೇತನದ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ.
ಪ್ರತಿಯನ್ನು ಇಲ್ಲಿ ನೀಡಿ
ಆನ್ ಲೈನ್ ಮೂಲಕ ಸಲ್ಲಿಸಿ ಪಡೆಯಲಾದ ಅರ್ಜಿಯ ಮೂಲ ಪ್ರತಿಯನ್ನು ಸಂಬಂಧಿಸಿದ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಿ.ಆರ್.ಡಬ್ಲ್ಯೂ, ಎಂ.ಆರ್.ಡಬ್ಲೂ ಹಾಗೂ ಯು.ಆರ್. ಡಬ್ಲೂರವರಿಗೆ ಸಲ್ಲಿಸಬಹುದು ಅಥವಾ ನೇರವಾಗಿ ಇಲಾಖೆಗೆ ಸಲ್ಲಿಸಬಹುದು.
ಇದನ್ನೂ ಓದಿ: Vijayapura: ಕೈಬೀಸಿ ಕರೆಯುವ ಪುಟ್ಟಪುಟ್ಟ ಜಲಪಾತಗಳು! ವೀಡಿಯೋ ನೋಡಿ
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ
ಅರ್ಹ ಆಸಕ್ತ ವಿದ್ಯಾರ್ಥಿಗಳು ಪ್ರಿ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಸೆಪ್ಟೆಂಬರ್ 30 ಹಾಗೂ ಟಾಪ್ ಕ್ಲಾಸ್ ವಿಶೇಷ ಚೇತನ ವಿದ್ಯಾರ್ಥಿಗಳು ಅಕ್ಟೋಬರ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಇಲಾಖೆಯ ವೆಬ್ಸೈಟ್ ವೀಕ್ಷಿಸಬಹುದು. ವೆಬ್ಸೈಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ. ಅಥವಾ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 0824-2458173, 0824-2455999 ಅನ್ನು ಸಂಪರ್ಕಿಸಬಹುದು ಎಂದು ವಿಶೇಷ ಚೇತನರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Belagavi: ಆಸ್ಪತ್ರೆ ಎಂದರೆ ಮಕ್ಕಳು ಖುಷ್! ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಏನಿದು ಜಾದೂ?
ಪ್ರಿ ಮೆಟ್ರಿಕ್ ಹಾಗೂ ಟಾಪ್ ಕ್ಲಾಸ್ ವಿಕಲ ಚೇತನ ವಿದ್ಯಾರ್ಥಿಗಳಿಂದ ಸ್ಕಾಲರ್ ಶಿಪ್ ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ನಿಗದಿತ ದಿನಾಂಕದ ಒಳಗಾಗಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ