• ಹೋಂ
  • »
  • ನ್ಯೂಸ್
  • »
  • ಮಂಗಳೂರು
  • »
  • Dakshina Kannada Rain Helpline: ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮಳೆ ಸಮಸ್ಯೆಗಳಿಗೆ ಈ ನಂಬರ್​ಗೆ ಫೋನ್ ಮಾಡಿ

Dakshina Kannada Rain Helpline: ದಕ್ಷಿಣ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮಳೆ ಸಮಸ್ಯೆಗಳಿಗೆ ಈ ನಂಬರ್​ಗೆ ಫೋನ್ ಮಾಡಿ

ಎಚ್ಚರ

ಎಚ್ಚರ

Dakshina Kannada Rain Updates: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ. ಸಮುದ್ರ, ನದಿ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತವು ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.

  • Share this:

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಎಡೆಬಿಡದೆ ಮಳೆಯಾಗುತ್ತಿದೆ. ಎರಡು ದಿನಗಳ ನಿರಂತರ ಮಳೆಯಿಂದಾಗಿ ಜನಜೀವನ (Dakshina Kannada News) ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಮನೆಗಳು ಜಲಾವೃತವಾಗಿವೆ.  ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada Rains) ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯ, ಉಪ್ಪಿನಂಗಡಿ, ಉಳ್ಳಾಲ, ಪುತ್ತೂರು, ಮೂಡಬಿದ್ರಿ, ಮುಲ್ಕಿ, ಸುಳ್ಯ, ಬಂಟ್ವಾಳ ಮುಂತಾದೆಡೆ ವಿಪರೀತ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ಕುಮಾರಧಾರ, ನೇತ್ರಾವತಿ, ಫಲ್ಗುಣಿ, ಶಾಂಭವಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯ ಮಟ್ಟವನ್ನು ಮೀರುವ ಆತಂಕ ಎದುರಾಗಿದೆ. ಇನ್ನೊಂದೆಡೆ ಉಳ್ಳಾಲ ಸೋಮೇಶ್ವರ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದೆ.


ಶಾಲಾ ಕಾಲೇಜಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುತ್ತಿರುವ ಹಿನ್ನೆಲೆ ಇಂದು (ಜುಲೈ 5) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ರಜೆ ನೀಡಿ ಆದೇಶಿಸಿದ್ದಾರೆ.


ಸಹಾಯವಾಣಿ ಸಂಖ್ಯೆ
ಯಾವುದೇ ಸಂದರ್ಭದಲ್ಲೂ ಜಿಲ್ಲೆಯ ಜನರು ನೆರೆ ಭೀತಿ, ಅಪಾಯದ ಸ್ಥಿತಿಯಲ್ಲಿ ಸಿಲುಕಿಕೊಳ್ಳುವ ಆತಂಕ ಎದುರಾದಲ್ಲಿ ಈ ಕೆಳಗಿನ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.
ತುರ್ತು ಸಹಾಯವಾಣಿ ಸಂಖ್ಯೆ - 1077
ಮೆಸ್ಕಾಂ – 1912 (ವಿದ್ಯುತ್ ಸಂಬಂಧಿತ ದೂರು)
ಪೊಲೀಸ್ – 100
ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ: 0824-2442590, 2220319, 9483908000


ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ
ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ ಇಲಾಖಾ ಅಧಿಕಾರಿಗಳಿಗೆ ಒಂದಿಷ್ಟು ಸೂಚನೆಗಳನ್ನು ಜಿಲ್ಲಾಡಳಿತವು ರವಾನಿಸಿದೆ.


1. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ಹಾಗೂ ಸಮುದ್ರ ತೀರ ಪ್ರದೇಶಗಳಿಗೆ ಮಕ್ಕಳು ತೆರಳದಂತೆ ಪಾಲಕರು ಮುಂಜಾಗರೂಕತೆ ವಹಿಸಬೇಕು.
2. ಮೀನುಗಾರರು ಕೂಡಾ ಸಮುದ್ರಕ್ಕೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ
3. ಸಾರ್ವಜನಿಕರು, ಪ್ರವಾಸಿಗರು ನದಿ, ಸಮುದ್ರ ಪ್ರದೇಶಗಳಿಗೆ ತೆರಳದಂತೆ ಸೂಚನೆ


ಇದನ್ನೂ ಓದಿ: Vijayapura Jaggery Tea: ಕುಡಿದೋನೆ ಬಲ್ಲ ವಿಜಯಪುರ ಬೆಲ್ಲದ ಚಹಾದ ಸ್ವಾದ! ವಿಡಿಯೋ ನೋಡಿ


ಅಧಿಕಾರಿಗಳಿಗೆ ಸೂಚನೆ
1. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಪಾಲಿಸುವುದು.
2. ಜಿಲ್ಲಾಡಳಿತವು ನೇಮಿಸಿರುವಂತಹ ನೋಡಲ್ ಅಧಿಕಾರಿಗಳು, ಆಯಾಯ ಪ್ರದೇಶಗಳಲ್ಲಿದ್ದು ಸಾರ್ವಜನಿಕರ ದೂರಿಗೆ ಸ್ಪಂದಿಸುವುದು ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ಜೊತೆ ನಿಯಂತ್ರಣ ಸಂಪರ್ಕದಲ್ಲಿರುವುದು.
3. ಸಂಬಂಧ ಪಟ್ಟ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿಡುವುದು.


ಇದನ್ನೂ ಓದಿ: Belagavi Police Museum: ಬೆಳಗಾವಿ ಪೊಲೀಸ್ ಮ್ಯೂಸಿಯಂ ನೋಡಿದ್ದೀರಾ? ವಿಡಿಯೋ ನೋಡಿ!


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ. ಸಮುದ್ರ, ನದಿ ಪ್ರದೇಶಗಳಿಗೆ ತೆರಳದಂತೆ ಜಿಲ್ಲಾಡಳಿತವು ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ.

top videos
    First published: