• Home
  • »
  • News
  • »
  • mangaluru
  • »
  • Dharmasthala: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ 55 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಹೀಗಿತ್ತು

Dharmasthala: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ 55 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಹೀಗಿತ್ತು

ಡಾ.ವೀರೇಂದ್ರ ಹೆಗ್ಗಡೆ

ಡಾ.ವೀರೇಂದ್ರ ಹೆಗ್ಗಡೆ

ಧಾರವಾಡದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ.

  • Share this:

    ಮಂಗಳೂರು: ಧರ್ಮಸ್ಥಳ ಕ್ಷೇತ್ರದ (Dharmasthala) ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ, ಡಾ.ವೀರೇಂದ್ರ ಹೆಗ್ಗಡೆ ಅವರ 55 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭವು ಸಂಭ್ರಮದಿಂದ ನಡೆಯಿತು. ಡಾ.ವೀರೇಂದ್ರ ಹೆಗ್ಗಡೆ ಅವರ (Dr. Veerendra Heggade) ಬೀಡಿನಿಂದ ಕ್ಷೇತ್ರದ ಸಂಪ್ರದಾಯದಂತೆ ಭವ್ಯ ಮೆರವಣಿಗೆ ಮೂಲಕ ಸಭಾಭವನದವರೆಗೆ ಗಣ್ಯರನ್ನು ಕರೆದೊಯ್ಯಲಾಯಿತು. ಶೃಂಗಾರಗೊಂಡ ಆನೆಗಳು, ಕೊಂಬು, ಕಹಳೆ, ವಾದ್ಯ ಮೂಲಕ ಗಣ್ಯರನ್ನು ಸ್ವಾಗತಿಸಲಾಯಿತು.


    ಧರ್ಮಸ್ಥಳದ ಹೊಸ ಯೋಜನೆಗಳು
    ಗ್ರಾಮೀಣ ಪ್ರದೇಶಗಳಲ್ಲಿ ಆಪತ್ತು ಸಂಭವಿಸಿದಾಗ ತುರ್ತು ನೆರವು ಮತ್ತು ರಕ್ಷಣೆಗಾಗಿ ಮೂರು ಸಾವಿರ " ಶೌರ್ಯ " ಸ್ವಯಂ ಸೇವಕರ ತಂಡಗಳನ್ನು ರಚಿಸಲಾಗಿದೆ. ಸದ್ಯದಲ್ಲಿಯೇ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಉದ್ಘಾಟಿಸಲಿದ್ದಾರೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಇದೇ ಸಂದರ್ಭ ತಿಳಿಸಿದರು.


    ಸೇವಾ ಕೇಂದ್ರಗಳ ಆರಂಭ
    ಸರ್ಕಾರದ ಸೇವೆಗಳನ್ನು ಜನರಿಗೆ ತಲುಪಿಸಲು ಈಗಾಗಲೇ 6500 ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಿದ್ದು, ಈ ವರ್ಷ ಇನ್ನೂ ಒಂದು ಸಾವಿರ ಸಾಮಾನ್ಯ ಸೇವಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.


    ಮಹಿಳೆಯರಿಗಾಗಿ ಕಾರ್ಯಕ್ರಮ
    ಕಳೆದ ವರ್ಷ 6 ಕೋಟಿ ರೂ. ವೆಚ್ಚದಲ್ಲಿ ಮೂರು ಆಸ್ಪತ್ರೆಗಳಿಗೆ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡಿದ್ದು , ಈ ವರ್ಷ ಇನ್ನೂ ಮೂರು ಸಿ.ಟಿ. ಸ್ಕ್ಯಾನ್ ಯಂತ್ರಗಳನ್ನು ನೀಡುವುದು.


    ಸರ್ಕಾರಿ ಶಾಲೆಗೆ ಕೊಡುಗೆ
    365 ಸರ್ಕಾರಿ ಶಾಲೆಗಳಿಗೆ 2700 ಬೆಂಚು - ಡೆಸ್ಕುಗಳನ್ನು ವಿತರಿಸುವುದು ಸಹ ಮುಂದಿನ ಯೋಜನೆಯಲ್ಲಿ ಸೇರಿದೆ.


    ನೀರಾವರಿಗಾಗಿ ಹೊಸ ಯೋಜನೆ
    100 ಕೆರೆಗಳ ಹೂಳೆತ್ತಿ ಪುನಶ್ವೇತನಕ್ಕೆ ಯೋಜನೆ, 40 ಶುದ್ಧಗಂಗಾ ಘಟಕಗಳ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವುದು, ಉಜಿರೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ 47 ಲಕ್ಷ ರೂ. ನೆರವು ನೀಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.


    ಇದನ್ನೂ ಓದಿ: Dose Habba: ದೀಪಾವಳಿಗೆ ದೋಸೆಹಬ್ಬ! ಬೆಳ್ತಂಗಡಿಯಲ್ಲಿ ದೋಸೆ ಸವಿದ ಸಾವಿರಾರು ಜನ!


    ಅನಾಥರಿಗೆ ಆಶಾಕಿರಣ
    ಅನಾಥ ಹಿರಿಯ ನಾಗರಿಕರ ಪಾಲನೆ ಮತ್ತು ಪೋಷಣೆಗಾಗಿ ಐದು ಕೋಟಿ ರೂ . ವೆಚ್ಚದಲ್ಲಿ 500 ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೆಗ್ಗಡೆ ಅವರು ಪ್ರಕಟಿಸಿದ್ದಾರೆ.


    ಧಾರವಾಡದಲ್ಲಿ ಕ್ಯಾನ್ಸರ್ ಆಸ್ಪತ್ರೆ
    ಧಾರವಾಡದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಸದ್ಯದಲ್ಲಿಯೇ ಪ್ರಾರಂಭಗೊಳ್ಳಲಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ತಿಳಿಸಿದ್ದಾರೆ.


    ಇದನ್ನೂ ಓದಿ: Dharmasthala: ರಾಷ್ಟ್ರೀಯ ಹೆದ್ದಾರಿಯಾಗಲಿವೆ ಧರ್ಮಸ್ಥಳವನ್ನು ಸಂಪರ್ಕಿಸುವ ಈ ರಸ್ತೆಗಳು


    ಧರ್ಮಸ್ಥಳಕ್ಕೆ ವಿನೂತನ ಸ್ಪರ್ಶ
    ಧರ್ಮಸ್ಥಳದಲ್ಲಿ ಭಕ್ತಾದಿಗಳ ಸೇವೆ ಮತ್ತು ಅನುಕೂಲಕ್ಕಾಗಿ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

    Published by:ಗುರುಗಣೇಶ ಡಬ್ಗುಳಿ
    First published: