Lokayukta In Dakshina Kannada: ದಕ್ಷಿಣ ಕನ್ನಡದಲ್ಲಿ ಲೋಕಾಯುಕ್ತ ಪ್ರವಾಸ! ನೀವೂ ಕಂಪ್ಲೇಂಟ್ ಕೊಡಬಹುದು

ಸಾರ್ವಜನಿಕರಿಂದ ದೂರು ಸ್ವೀಕರಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಪ್ರವಾಸ ಕೈಗೊಂಡಿದೆ. ತಾಲೂಕುವಾರು ಪ್ರವಾಸದಲ್ಲಿ ವಿವಿಧ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸಲಿದೆ.

ಸಾಂಕೇತಿಕ ಚಿತ್ರ

ಸಾಂಕೇತಿಕ ಚಿತ್ರ

  • Share this:
    ಮಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ಅನುಭವಿಸುತ್ತಿದ್ದೀರೆ? ದಾಖಲೆಗಳಿಗಾಗಿ ಆಮಿಷ ಎದುರಿಸುತ್ತಿರುವಿರೋ? ಹಾಗಿದ್ರೆ ಅಂತಹ ಎಲ್ಲ ಸಮಸ್ಯೆಗಳಿಗೆ ಲೋಕಾಯುಕ್ತದ (Karnataka Lokayukta) ಮೂಲಕ ಪರಿಹಾರ ಕಂಡುಕೊಳ್ಳಿ. ಅನಗತ್ಯ ಅಲೆದಾಟ ನಡೆಸುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ (Mangaluru News) ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸಿದ್ಧರಾಗಿದ್ದಾರೆ. ಈ ದಿನಾಂಕಗಳಂದು ತಾವು ತಮ್ಮ ದೂರು, ಅಹವಾಲನ್ನು ಸಲ್ಲಿಸುವ ಮೂಲಕ ತಮ್ಮ ಸಮಸ್ಯೆಯನ್ನು  ಬಗೆಹರಿಸಿಕೊಳ್ಳಬಹುದಾಗಿದೆ. ಹೇಗೆ ಸಮಸ್ಯೆ ಬಗೆಹರಿಸಿಕೊಳ್ಳುವುದು? ವಿವರ ಇಲ್ಲಿದೆ. 

    ಲೋಕಾಯುಕ್ತ ತಾಲೂಕು ಪ್ರವಾಸ
    ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಜುಲೈ 19 ರಿಂದ ಜುಲೈ 21ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಂಚರಿಸಿ ಸಾರ್ವಜನಿಕರ ಅಹವಾಲು, ದೂರುಗಳನ್ನು ಸ್ವೀಕರಿಸಲಿದ್ದಾರೆ.

    ಯಾವ ದಿನಾಂಕದಂದು ಎಲ್ಲಿ?
    ಜುಲೈ 19 - ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಸಭಾಂಗಣ
    ಜುಲೈ 20 - ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೂಡಬಿದ್ರೆ ತಾಲೂಕು ಕಚೇರಿ
    ಜು.21 - ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಳ್ಳಾಲ ತಾಲೂಕಿನ ನಗರಸಭಾ ಸಭಾಂಗಣ

    ಕಚೇರಿಗೂ ಭೇಟಿ ನೀಡಬಹುದು
    ಉಳಿದಂತೆ ಇತರೆ ದಿನಗಳಲ್ಲಿಯೂ ಕಚೇರಿ ವೇಳೆಯಲ್ಲಿ ಸಾರ್ವಜನಿಕರು ಅಹವಾಲು, ದೂರುಗಳನ್ನು ನೀಡಬಹುದಾಗಿದೆ. ಅಂತಹ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಮಂಗಳೂರು ನಗರದಲ್ಲಿರುವ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಕಚೇರಿಗೆ ಅಥವಾ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀಧಿಯಲ್ಲಿರುವ ಬಹು ಮಹಡಿ ಕಟ್ಟಡದ ಲೋಕಾಯುಕ್ತ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ
    ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ: 0824-2950997, 9243456629,
    ಪೊಲೀಸ್ ಉಪಾಧೀಕ್ಷಕರ-1 ಕಚೇರಿ ದೂರವಾಣಿ ಸಂಖ್ಯೆ: 0824-2453420, 9448635348

    ಇದನ್ನೂ ಓದಿ: Krishna River Origin Video: ಕೃಷ್ಣಾ ನದಿ ಉಗಮದ ಅಪರೂಪದ ವಿಡಿಯೋ ಇಲ್ಲಿದೆ, ಕಣ್ತುಂಬಿಸಿಕೊಳ್ಳಿ!

    ಪೊಲೀಸ್ ಉಪಾಧೀಕ್ಷಕರ- 2 ಕಚೇರಿ ದೂರವಾಣಿ ಸಂಖ್ಯೆ: 0824-2453420, 7019967061
    ಪೊಲೀಸ್ ನಿರೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ: 0824-2427237, 9448461816 ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

    ಇದನ್ನೂ ಓದಿ: Kittur Rani Chennamma: ಕಿತ್ತೂರು ರಾಣಿ ಚೆನ್ನಮ್ಮ ಜನ್ಮಸ್ಥಳ ಪಾಳುಬಿದ್ದಿದೆ! ಇಲ್ಲಿದೆ ನೋಡಿ ವಿಡಿಯೋ

    ಸಾರ್ವಜನಿಕರಿಂದ ದೂರು ಸ್ವೀಕರಿಸುವ ನಿಟ್ಟಿನಲ್ಲಿ ಲೋಕಾಯುಕ್ತ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನಗಳ ಪ್ರವಾಸ ಕೈಗೊಂಡಿದೆ. ತಾಲೂಕುವಾರು ಪ್ರವಾಸದಲ್ಲಿ ವಿವಿಧ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸಲಿದೆ.
    Published by:guruganesh bhat
    First published: