Mangaluru News: ಏಕಲವ್ಯ, ಕ್ರೀಡಾ ಪೋಷಕ ಪ್ರಶಸ್ತಿಗೆ ಈಗಲೇ ಅರ್ಜಿ ಹಾಕಿ!

ಕರ್ನಾಟಕ ರಾಜ್ಯ ಸರಕಾರ ನೀಡುವ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು? ಹೇಗೆ ಅರ್ಜಿ ಸಲ್ಲಿಸುವುದು? ಎಲ್ಲ ವಿವರ ಇಲ್ಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಮಂಗಳೂರು: ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಗುರುತಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಏಕಲವ್ಯ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 2021ನೇ ಸಾಲಿನಲ್ಲಿ ಕ್ರೀಡೆಯಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಕರ್ನಾಟಕ (Karnataka) ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ (Ekalavya Award) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಸರಕಾರ ನೀಡುವ ಕ್ರೀಡಾ ಪ್ರಶಸ್ತಿಗಳಿಗೆ (Sports Award) ಅರ್ಜಿ ಆಹ್ವಾನಿಸಿದೆ. ಅರ್ಹ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಶೇಷ ಸಾಧನೆಗೈದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. 

    ಅರ್ಹತೆಗಳೇನು?
    ರಾಜ್ಯ ಸರಕಾರ ನೀಡುವ 'ಏಕಲವ್ಯ' ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಆಸಕ್ತ ಕ್ರೀಡಾಪಟುಗಳು ಕರ್ನಾಟಕದ ನಿವಾಸಿಯಾಗಿರಬೇಕು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿರಬೇಕು ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ‌ ಸಲ್ಲಿಸಬಹುದಾಗಿದೆ.

    'ಕ್ರೀಡಾ ಪೋಷಕ' ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಕ್ರೀಡೆಯ ಅಭಿವೃಧ್ದಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?
    ಆಸಕ್ತ ಹಾಗೂ ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ನಗರದ ಲೇಡಿಹಿಲ್‍ನಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ (ಮಂಗಳ ಕ್ರೀಡಾಂಗಣ) ಕಚೇರಿಯಲ್ಲಿ ಪಡೆದು ಬಳಿಕ ವಿವರಗಳನ್ನು ಭರ್ತಿ ಮಾಡಿ ಅಲ್ಲಿಯೇ ಸಲ್ಲಿಸಬೇಕಾಗುತ್ತದೆ.

    ಇದನ್ನೂ ಓದಿ: Vijayapura: ಕೈಬೀಸಿ ಕರೆಯುವ ಪುಟ್ಟಪುಟ್ಟ ಜಲಪಾತಗಳು! ವೀಡಿಯೋ ನೋಡಿ

    ಅರ್ಜಿ ಸಲ್ಲಿಕೆ ಕೊನೆ‌ ದಿನಾಂಕ
    ಅರ್ಹ ಅಭ್ಯರ್ಥಿಗಳು ಏಕಲವ್ಯ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಮುಂದಿನ ತಿಂಗಳು ಅಂದರೆ ಆಗಸ್ಟ್ 8ರ ಒಳಗಾಗಿ ಸಲ್ಲಿಸಬೇಕಾಗುತ್ತದೆ.

    ಇದನ್ನೂ ಓದಿ: Bengaluru Mysuru Mangaluru Trains: ಬೆಂಗಳೂರು-ಮೈಸೂರು-ಮಂಗಳೂರು ಪ್ರಯಾಣಿಕರಿಗೆ ಶುಭಸುದ್ದಿ!

    ಕರ್ನಾಟಕ ರಾಜ್ಯ ಸರಕಾರ ನೀಡುವ ಕ್ರೀಡಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ವಿಶೇಷ ಸಾಧನೆಗೈದಿರಬೇಕು.
    Published by:guruganesh bhat
    First published: