Mysuru News: ಮಹತ್ವದ ಆದೇಶ ಪ್ರಕಟಿಸಿದ ಮೈಸೂರು ಜಿಲ್ಲಾಧಿಕಾರಿ, ಇಲ್ಲಿದೆ ವಿವರ

ಮೈಸೂರು ಅರಮನೆ (ಸಾಂದರ್ಭಿಕ ಚಿತ್ರ)

ಮೈಸೂರು ಅರಮನೆ (ಸಾಂದರ್ಭಿಕ ಚಿತ್ರ)

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮೈಸೂರುನಲ್ಲಿ ನಾಳೆಯಿಂದ ನಿಷೇಧಾಜ್ಞೆ ಜಾರಿ.

  • News18 Kannada
  • 3-MIN READ
  • Last Updated :
  • Mysore, India
  • Share this:

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Elections 2023) ಮೇ 10ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಾದ್ಯಂತ (Mysuru News) ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಅ‌ನ್ವಯಿಸುವಂತೆ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.


ಯಾವಾಗಿನಿಂದ ನಿಷೇಧಾಜ್ಞೆ?
ಮೇ 8ರ ಸೋಮವಾರದಿಂದ ಸಂಜೆ 6 ಗಂಟೆಯಿಂದ ಮೇ 10ರಂದು ಮತದಾನ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಮೈಸೂರು ಜಿಲ್ಲೆಯಲ್ಲಿ ಬರುವ 11 ವಿಧಾನಸಭಾ ಕ್ಷೇತ್ರಗಳಿಗೂ ಈ ಆದೇಶ ಅನ್ವಯವಾಗಲಿದೆ.


Hubballi Dharwad Smart City, Smart Bicycle Recharge, Hubballi Dharwad Smart Bicycle, Voting Awareness, karnataka elections, kannada news, karnataka news, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ, ಸ್ಮಾರ್ಟ್ ಬೈಸಿಕಲ್ ರೀಚಾರ್ಜ್, ಮತದಾನ ಜಾಗೃತಿ


ಮಾರಕಾಸ್ತ್ರಗಳಿಗೆ ನಿಷೇಧ
ಶಸ್ತ್ರ, ಬಡಿಗೆ, ಭರ್ಜಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.


Hubballi Dharwad Smart City, Smart Bicycle Recharge, Hubballi Dharwad Smart Bicycle, Voting Awareness, karnataka elections, kannada news, karnataka news, ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ, ಸ್ಮಾರ್ಟ್ ಬೈಸಿಕಲ್ ರೀಚಾರ್ಜ್, ಮತದಾನ ಜಾಗೃತಿ


ಸೈಬರ್ ಕೆಫೆಗಳಿಗೆ ನಿರ್ಬಂಧ
ಮತಗಟ್ಟೆಗಳ 100 ಮೀಟರ್ ಒಳಗೆ ಪ್ರಚಾರ ನಿಷೇಧಿಸಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಬಂಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.


karnataka vidhana sabha general election constituency profile hebbal bengaluru city
ಸಾಂದರ್ಭಿಕ ಚಿತ್ರ


ಇದನ್ನೂ ಓದಿ: Mylari Hotel Mysuru: ಪ್ರಿಯಾಂಕಾ ಗಾಂಧಿ ದೋಸೆ ಹುಯ್ದ ಮೈಸೂರು ಮೈಲಾರಿ ಹೋಟೆಲ್ ಸ್ಪೆಷಾಲಿಟಿ!


ಸಾರ್ವಜನಿಕ ಶಾಂತಿಗೆ ಆದ್ಯತೆ
ಸಾರ್ವಜನಿಕವಾಗಿ ಅಭ್ಯರ್ಥಿಗಳು‌ ಇಲ್ಲವೇ ಅವರ ಬೆಂಬಲಿಗರು ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಂಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.




ಶುಭ ಕಾರ್ಯಕ್ರಮಕ್ಕೆ ನಿರಾತಂಕ
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ 19 ಕಾರ್ಯಗಳಿಗೆ ಆದೇಶ ಅನ್ವಯಿಸುವುದಿಲ್ಲ. ಮತಗಟ್ಟೆಗಳ ಸುತ್ತ 100 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್, ಸ್ಯಾಟ್​ಲೈಟ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: Hakki Pikki Community: ಆಫ್ರಿಕಾದಲ್ಲಿ ಹಕ್ಕಿ ಪಿಕ್ಕಿ ಸಮುದಾಯದವರೇ ಡಾಕ್ಟರ್ಸ್!

top videos


    ಜಾತ್ರೆ, ಉತ್ಸವ ಮುಂದೂಡಿಕೆ
    ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆ ದಿನ ನಡೆಯುವ ಜಾತ್ರೆ, ಉತ್ಸವಗಳನ್ನು ಮುಂದೂಡುವಂತೆ ಮೈಸೂರು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

    First published: