ನವದೆಹಲಿ; ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2021-22ರ ಕೇಂದ್ರ ಬಜೆಟ್ ಮಂಡನೆ ಮಾಡಿದರು. ರೈಲ್ವೆಗೆ ದಾಖಲೆಯ 1,10,055 ಕೋಟಿ ರೂಪಾಯಿ ದಾಖಲೆ ಅನುದಾನವನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಈ ಪೈಕಿ 1,07,100 ಕೋಟಿ ರೂ. ಬಂಡವಾಳ ವೆಚ್ಚವಾಗಿರಲಿದೆ. 2023ರ ಡಿಸೆಂಬರ್ ಒಳಗೆ ಎಲ್ಲ ಬ್ರಾಡ್ಗೇಜ್ ರೈಲು ಮಾರ್ಗಗಳ ವಿದ್ಯುದೀಕರಣ ಪೂರ್ಣಗೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದರು.
22ನೇ ಹಣಕಾಸು ವರ್ಷದಲ್ಲಿ 1.75 ಲಕ್ಷ ಕೋಟಿ ಹೂಡಿಕೆ ಹಿಂಪಡೆತದ ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು. ಬಿಪಿಸಿಎಲ್, ಏರ್ ಇಂಡಿಯಾ, ಶಿಪ್ಪಿಂಗ್ ಕಾರ್ಪ್, ಬಿಇಎಂಎಲ್, ಪವನ್ ಹಾನ್ಸ್, ನಿಲಂಚಲ್ ಇಸ್ಪಾತ್ ಕಂಪನಿಗಳ ಹೂಡಿಕೆ ಹಿಂಪಡೆತ ಯೋಜನೆ 22ನೇ ಹಣಕಾಸು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಎಲ್ಐಸಿ ಐಪಿಒ ಈ ವರ್ಷ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಕಳೆದ ವರ್ಷ ಸರ್ಕಾರವು 1.2 ಲಕ್ಷ ಕೋಟಿ ರೂ. ಹೂಡಿಕೆ ಹಿಂಪಡೆತದ ಗುರಿ ಹಾಕಿಕೊಂಡಿತ್ತು. ಈ ವರ್ಷ 1.75 ಲಕ್ಷ ಕೋಟಿ ಹೂಡಿಕೆ ಹಿಂಪಡೆತದ ಗುರಿ ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದರು.
ಇದನ್ನು ಓದಿ: Union Budget 2021: ವಿಮಾ ಕಂಪನಿಗಳ ಮೇಲಿನ ಎಫ್ಡಿಐ ಮಿತಿ ಹೆಚ್ಚಿಸಿದ ಕೇಂದ್ರ ಸರ್ಕಾರ
ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ
ಪ್ರಯಾಣಿಕರ ಅನುಕೂಲ ಮತ್ತು ಸುರಕ್ಷತೆಗೆ ಕೆಲ ಕ್ರಮಗಳನ್ನು ವಹಿಸಲಾಗಿದೆ. ಪ್ರವಾಸಿ ಮಾರ್ಗಗಳಲ್ಲಿ ಪ್ರಯಾಣಿಕರಿಗೆ ಉತ್ತಮ ಪ್ರಯಾಣದ ಅನುಭವ ನೀಡಲು ಕಲಾತ್ಮಕವಾಗಿ ವಿನ್ಯಾಸಗೊಳಿಸಲಾದ ವಿಸ್ಟಾ ಡೋಮ್ ಎಲ್ಎಚ್ಬಿ ಕೋಚ್ಗಳನ್ನು ಪರಿಚಯಿಸುತ್ತೇವೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ