HOME » NEWS » National-international » 10 ARRESTED IN CONNECTION WITH ALLEGED MOLESTATION OF STUDENTS DURING CULTURAL FESTIVAL AT DELHIS GARGI COLLEGE LG

ದೆಹಲಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; 10 ಜನರ ಬಂಧನ

ಈ ಘಟನೆ ನಡೆದಾಗಿನಿಂದ ಗರ್ಗಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿದ್ದು, ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪಿಗಳ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

news18-kannada
Updated:February 13, 2020, 8:35 AM IST
ದೆಹಲಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; 10 ಜನರ ಬಂಧನ
ಗರ್ಗಿ ಮಹಿಳಾ ಕಾಲೇಜು
  • Share this:
ನವದೆಹಲಿ(ಫೆ.13): ಕಳೆದ ವಾರ ದೆಹಲಿಯ ಮಹಿಳಾ ಗರ್ಗಿ ಕಾಲೇಜಿನಲ್ಲಿ ಸಾಂಸ್ಕೃತಿಕ ಹಬ್ಬ ನಡೆಯುವ ವೇಳೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು 18 ಮತ್ತು 25 ವರ್ಷ ವಯಸ್ಸಿನೊಳಗಿನವರು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 6ರಂದು ಕಾಲೇಜಿನಲ್ಲಿ ಹಬ್ಬ ನಡೆಯುತ್ತಿದ್ದ ವೇಳೆ, ಯುವಕರ ಗುಂಪೊಂದು ಗೇಟ್​ ಹತ್ತಿ ಕಾಲೇಜಿನೊಳಗೆ ನುಗ್ಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆ ಪುಂಡರು ಹುಡುಗಿಯರಿಗೆ ಕಿರುಕುಳ ನೀಡುತ್ತಿದ್ದರೂ ಭದ್ರತಾ ಸಿಬ್ಬಂದಿಗಳು ಸುಮ್ಮನೆ ನೋಡುತ್ತಾ ನಿಂತಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಈ ಸಂಬಂಧ ಫೆ.10ರಂದು ಹೌಜ್​ ಖಾಸ್​ ಪೊಲೀಸ್​ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರೆಲ್ಲರೂ ದೆಹಲಿ ಮತ್ತು ಎನ್​ಸಿಆರ್​​​ನ ಖಾಸಗಿ ಮತ್ತು ಪಬ್ಲಿಕ್​ ಯೂನಿವರ್ಸಿಟಿಗಳ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾಲೇಜಿನ ಹೊರಭಾಗದಲ್ಲಿ ಕಾರನ್ನು ಧ್ವಂಸ ಮಾಡಿದ ಆರೋಪಿಗಳು ಬಳಿಕ ಒಳಗೆ ನುಗ್ಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

Karnataka Bandh: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್​ಗೆ ಕರೆ; ಯಾವೆಲ್ಲ ಸೇವೆಗಳು ಅಬಾಧಿತ?

ದಕ್ಷಿಣ ದೆಹಲಿ ಪೊಲೀಸ್​ ಆಯುಕ್ತ ಎ.ಠಾಕೂರ್ ಮಾತನಾಡಿ, ಈ ಪ್ರಕರಣ ಕುರಿತು 11 ಪೊಲೀಸ್​ ತಂಡಗಳು ತನಿಖೆ ನಡೆಸುತ್ತಿವೆ. ತಾಂತ್ರಿಕ ಮಾಹಿತಿಗಳನ್ನು ಕಲೆಹಾಕುತ್ತಿದ್ದು, ಎನ್​ಸಿಆರ್​​ ವ್ಯಾಪ್ತಿಯಲ್ಲಿ ಶಂಕಿತರಿಗಾಗಿ ಹುಡಕಾಟ ನಡೆಸುತ್ತಿದ್ದಾರೆ. ತನಿಖಾಧಿಕಾರಿಗಳು ಕಾಲೇಜು ಆಡಳಿತ ಮಂಡಳಿಯ ಜೊತೆ ಪ್ರಕರಣ ಕುರಿತು ಮಾತನಾಡಿದ್ದಾರೆ. ಮತ್ತಷ್ಟು ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.

ಹಲವು ಮಂದಿಯನ್ನು ವಿಚಾರಣೆಗೊಳಪಡಿಸಿದ್ದು, ಶಂಕಿತರನ್ನು ಗುರುತಿಸಲಾಗಿದೆ. ಆರೋಪಿಗಳು ಕಾಲೇಜಿನ ಗೇಟ್​ ಮುರಿದು ಒಳಗೆ ನುಗ್ಗಿರುವ ದೃಶ್ಯ ಸಿಸಿಟಿವಿಯಲ್ಲಿ ಲಭ್ಯವಾಗಿದೆ. ಕಾಲೇಜು ಸಿಬ್ಬಂದಿ ಹಾಕಿದ್ದ ಬ್ಯಾರಿಕೇಡ್​​ಗಳನ್ನು ಜಂಪ್​ ಮಾಡಿ ಆರೋಪಿಗಳು ಒಳ ನುಗ್ಗಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.

ಈ ಘಟನೆ ನಡೆದಾಗಿನಿಂದ ಗರ್ಗಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ತರಗತಿಗಳನ್ನು ಬಹಿಷ್ಕರಿಸಿದ್ದು, ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಒತ್ತಾಯಿಸಿದ್ದಾರೆ.ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪಿಗಳ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಮಹಾರಾಷ್ಟ್ರ ಸರ್ಕಾರಿ ನೌಕರರಿಗೆ ಗುಡ್​ನ್ಯೂಸ್; ವಾರದಲ್ಲಿ ಐದು ದಿನ ಮಾತ್ರ ಕೆಲಸ

ಎಂಎಲ್​ ಶರ್ಮಾ ಎಂಬುವರು ಸುಪ್ರೀಂ ಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದು, ಸಿಬಿಐ ತನಿಖೆ ನಡೆಸುವಂತೆ ಅರ್ಜಿಯಲ್ಲಿ ಹೇಳಿದ್ದಾರೆ. ಜೊತೆಗೆ ತನಿಖಾ ಸಂಸ್ಥೆ ಕಾಲೇಜು ಆವರಣದಲ್ಲಿರುವ ಎಲ್ಲಾ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಹಾಗೂ ವಿಡಿಯೋ ರೆಕಾರ್ಡಿಂಗ್ಸ್​ಗಳನ್ನು ವಶಕ್ಕೆ ಪಡೆಯಬೇಕೆಂದಿದ್ದಾರೆ.

ಇತ್ತೀಚೆಗೆ ದೆಹಲಿ ವಿಶ್ವವಿದ್ಯಾಲಯವು ಈ ಕೃತ್ಯವನ್ನು ಖಂಡಿಸಿ, ಈ ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿತ್ತು. ಮಹಿಳಾ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಯೂನಿವರ್ಸಿಟಿ ಎಲ್ಲಾ ಪ್ರಾಂಶುಪಾಲರಿಗೆ ಆದೇಶಿಸಿದೆ.
First published: February 13, 2020, 8:35 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories