ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 10 ಮಂದಿ ಸಾವು

ಅಪಘಾತದಲ್ಲಿ ಗಾಯಾಗೊಂಡ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

G Hareeshkumar | news18-kannada
Updated:September 23, 2019, 6:03 PM IST
ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 10 ಮಂದಿ ಸಾವು
ರಸ್ತೆ ಅಪಘಾತ
  • Share this:
ಅಸ್ಸಾಂ(ಸೆ.23) : ಬಸ್​ ಮತ್ತು ಟೆಂಪೋ ಟ್ರಾವೆಲರ್​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿರುವ ಘಟನೆ ಅಸ್ಸಾಂ ರಾಜ್ಯದ ರಾಷ್ಟ್ರೀಯ ಹೆದ್ದಾರಿ 13ರ ಸಿಬ್​ಸಾಗರ್​ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ಇಲ್ಲಿನ ಸಿಬ್​​​ಸಾಗರ್​ ಜಿಲ್ಲೆಯ ಡಿಮೋ ಗ್ರಾಮದ ಬಳಿ ಬಸ್​ ಚಾಲಕ ನಿಯಂತ್ರಣ ಕಳೆದುಕೊಂಡಿದ್ದು, ಎದುರಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್​​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಾಗೊಂಡ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಈ ಘಟನೆ ಕುರಿತು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಸ್​-ಟ್ರಕ್​ ನಡುವೆ ಭೀಕರ ಅಪಘಾತ; 8 ಮಂದಿ ಸಾವು, 20 ಜನರಿಗೆ ಗಾಯ

First published:September 23, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading