ಉತ್ತರ ಪ್ರದೇಶ(ಜ.30): ಉತ್ತರ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸುಮಾರು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಗ್ರಾ-ಮೊರಾದಾಬಾದ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಈ ಭೀಕರ ದುರಂತ ನಡೆದಿದೆ. ದಟ್ಟ ಮಂಜು ಕವಿದಿದ್ದರಿಂದ ಬಸ್ ಮತ್ತು ಟ್ರಕ್ ಪರಸ್ಪರ ಡಿಕ್ಕಿ ಹೊಡೆದಿವೆ. ಪರಿಣಾಮ ಸ್ಥಳದಲ್ಲೇ 10 ಜನರು ಅಸುನೀಗಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಬಸ್, ಟ್ರಕ್ ಹಾಗೂ ಮತ್ತೊಂದು ವಾಹನ ಪರಸ್ಪರ ಡಿಕ್ಕಿ ಹೊಡೆದಿವೆ. ದಟ್ಟ ಮಂಜು ಕವಿದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಆದರೆ ಓವರ್ ಟೇಕ್ ಮಾಡಲು ಹೋಗಿ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದಲಿತ ಯುವಕನನ್ನು ಥಳಿಸಿ, ಮೂತ್ರ ವಿಸರ್ಜನೆ ಮಾಡಿದ ಕಿಡಿಗೇಡಿಗಳು
ಇನ್ನು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಕುರಿತಾಗಿ ವಿಷಾದ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ ನೀಡಿದ್ದಾರೆ. ಇದರ ಜೊತೆಗೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು, ಸಿಎಂ ಯೋಗಿ ಆದಿತ್ಯನಾಥ್ ಘಟನೆ ಕುರಿತಾಗಿ ತನಿಖೆಗೆ ಆದೇಶಿಸಿದ್ದಾರೆ.
ಈ ಘಟನೆ ಹುಸೇನ್ಪುರ್ದ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ