ಸೂರತ್​ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ 57 ಅಗ್ನಿಶಾಮಕ ವಾಹನಗಳು ದೌಡು

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ವರದಿಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಇದೇ ಕಟ್ಟಡದ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ಸಹ ತಿಳಿದು ಬಂದಿಲ್ಲ.

news18-kannada
Updated:January 21, 2020, 9:56 AM IST
ಸೂರತ್​ನ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ; ಸ್ಥಳಕ್ಕೆ 57 ಅಗ್ನಿಶಾಮಕ ವಾಹನಗಳು ದೌಡು
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿ
  • Share this:
ಗುಜರಾತ್​(ಜ.21): ಸೂರತ್​​ನ ರಘುವಿರ್​​ ಟೆಕ್ಸ್​ಟೈಲ್​ ಮಾರ್ಕೆಟ್​​​ನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ 57 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಬೆಂಕಿಯ ಕೆನ್ನಾಲಿಗೆಗೆ ಸರೋಲಿ ಪ್ರದೇಶದಲ್ಲಿರುವ 10 ಮಹಡಿಯ ರಘುವಿರ್ ಟೆಕ್ಸ್​ಟೈಲ್​​​ ಕಟ್ಟಡ ಧಗಧಗ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅಮೆರಿಕ ರಾಯಭಾರಿ ಕಚೇರಿ ಬಳಿ ಅಪ್ಪಳಿಸಿದ​​ 3 ರಾಕೆಟ್​ಗಳು; ಇರಾನ್ ಪ್ರತೀಕಾರ?

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ವರದಿಗಳು ತಿಳಿಸಿವೆ. ಕೆಲವು ದಿನಗಳ ಹಿಂದೆ ಇದೇ ಕಟ್ಟಡದ 4ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿ ಅವಘಡಕ್ಕೆ ಕಾರಣ ಏನೆಂಬುದು ಇನ್ನೂ ಸಹ ತಿಳಿದು ಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

(ಮತ್ತಷ್ಟು ಮಾಹಿತಿ ಶೀಘ್ರದಲ್ಲಿ)
 
First published:January 21, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ