ಮದುವೆ ಸಮಾರಂಭದಲ್ಲಿ ಊಟ ಮಾಡಿದ 100 ಮಂದಿಗೆ ವಾಂತಿ-ಭೇದಿ; ಆಸ್ಪತ್ರೆಗೆ ದಾಖಲು

ಮದುವೆಯಲ್ಲಿ ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಅನೇಕ ಜನರಿಗೆ ವಾಂತಿ-ಭೇದಿ ಶುರುವಾಯಿತು. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆ

ಆಸ್ಪತ್ರೆ

 • Share this:
  ಜೈಪುರ(ಸೆ.2): ಮದುವೆ ಸಮಾರಂಭದಲ್ಲಿ ಊಟ ಮಾಡಿದ ಸುಮಾರು 100 ಮಂದಿಯ ಆರೋಗ್ಯ ಏರುಪೇರಾಗಿರುವ ಘಟನೆ ರಾಜಸ್ಥಾನದ ಚುರು ಎಂಬಲ್ಲಿ ನಡೆದಿದೆ. 100 ಜನರಲ್ಲಿ 45 ಮಂದಿ ಮಕ್ಕಳೇ ಇದ್ದು, ಸದ್ಯ ಎಲ್ಲರನ್ನೂ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೋಭಸರ್ ಗ್ರಾಮದಲ್ಲಿ ನಡೆದ ಮದುವೆ ಸಮಾಂಭದಲ್ಲಿ ಈ ಘಟನೆ ಸಂಭವಿಸಿದೆ. ಅಲ್ಲಿ ಊಟ ಮಾಡಿದ ಜನರು ಕಳೆದ ರಾತ್ರಿ ವಾಂತಿಯಾಗುತ್ತಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಮಾರು 90 ಜನರಿಗೆ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

  ಆಸ್ಪತ್ರೆಯು ಚಿಕ್ಕದಾಗಿದ್ದರಿಂದ ಸುಮಾರು 100 ಮಂದಿಗೆ ಆಸ್ಪತ್ರೆಯಲ್ಲಿ ಬೆಡ್ ಕೊಡಲು ಸಾಧ್ಯವಾಗಲಿಲ್ಲ. ಹೀಗಾಗಿ ರೋಗಿಗಳು ನೆಲದಲ್ಲೇ ಮಲಗಿ ಚಿಕಿತ್ಸೆ ಪಡೆದರು. ಇನ್ನೂ ಕೆಲವರು ಇಬ್ಬರು ಒಂದು ಹಾಸಿಗೆಯನ್ನು ಹಂಚಿಕೊಂಡಿದ್ದರು.


  ಮದುವೆಯು ಸರ್ದಾರ್​ಶಹರ್​​ನ ವಾರ್ಡ್​ ನಂಬರ್ 44ರಲ್ಲಿ ನಡೆಯಿತು. ಅಲ್ಲಿ ಒಬ್ಬ ಕಾಲು ಕುಚಮುನಿಯು ತನ್ನ ನಾಲ್ವರು ಹೆಣ್ಣುಮಕ್ಕಳನ್ನು ಒಂದೇ ದಿನದಲ್ಲಿ ಮದುವೆ ಮಾಡಿದನು. ಮದುವೆ ಸಮಾರಂಭವು ಬುಧವಾರ ಮುಂಜಾನೆ 4 ಗಂಟೆಯವರೆಗೂ ನಡೆಯಿತು.

  ಮದುವೆಯಲ್ಲಿ ಊಟ ಮಾಡಿದ ಕೆಲವೇ ಗಂಟೆಗಳಲ್ಲಿ ಅನೇಕ ಜನರಿಗೆ ವಾಂತಿ-ಭೇದಿ ಶುರುವಾಯಿತು. ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ಯಲಾಯಿತು.

  ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಂತೆ ಆಸ್ಪತ್ರೆಯಲ್ಲಿ ಸ್ಥಳಾವಕಾಶ ಇಲ್ಲದೇ ಹೋಯಿತು. ಆಗ ಕೆಲವರನ್ನು ಖಾಸಗಿ ಆಸ್ಪತ್ರೆಗಳಿಗೆ ಸೇರಿಸಲಾಯಿತು.  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:Latha CG
  First published: