ಚೈನ್ನೈ (ಫೆ. 12): ತಮಿಳುನಾಡಿದನ ವಿರುಧನಗರದಲ್ಲಿನ ಪಟಾಕಿ ಫ್ಯಾಕ್ಟರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಈ ಅವಘಡದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಇಲ್ಲಿನ ಸಾತೂರ್ ಬಳಿಯ ಆಚಂಗುಲಂ ಪ್ರದೇಶದಲ್ಲಿ ಈ ಖಾಸಗಿ ಫ್ಯಾಕ್ಟರಿ ಇತ್ತು. ಈ ಭಾರೀ ಅನಾಹುತದಲ್ಲಿ 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟಾಕಿ ತಯಾರಿಸುವ ವೇಳೆ ಕೆಲವು ರಾಸಾಯನಿಕ ಮಿಶ್ರಣ ಮಾಡುವಾಗ ಈ ಅನಾಹುತ ನಡೆದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ 10 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ಮುಂದಾಗಿದೆ.
ಇನ್ನು ಈ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವಿಷಾದ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
Fire at a firecracker factory in Virudhunagar, Tamil Nadu is saddening. In this hour of grief, my thoughts are with the bereaved families. I hope those injured recover soon. Authorities are working on the ground to assist those affected: PM @narendramodi
— PMO India (@PMOIndia) February 12, 2021
ಇದನ್ನು ಓದಿ: ಮೇ 24ರಿಂದ ದ್ವಿತೀಯ ಪಿಯು ಪರೀಕ್ಷೆ; ಅಧಿಕೃತ ವೇಳಾಪಟ್ಟಿ ಪ್ರಕಟ
ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಸಾವನ್ನಪ್ಪಿದ ಕುಟುಂಬದವರಿಗೆ ತಲಾ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಪಳನಿಸ್ವಾಮಿ, ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ಮತ್ತು ವೈದ್ಯಕೀಯ ತಜ್ಞರಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ಕುಟುಂಬದವರಿಗೆ ಈ ಸಂಬಂಧ ಅಗತ್ಯ ಮಾಹಿತಿ ನೀಡುವ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ ಎಂದಿದ್ದಾರೆ.
ಘಟನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ವಿಷಾದ ವ್ಯಕ್ತಪಡಿಸಿದ್ದು, ಘಟನಾ ಸಂತ್ರಸ್ತರಿಗೆ ತಕ್ಷಣ ರಕ್ಷಣೆ , ಬೆಂಬಲ ಮತ್ತು ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ
(ವರದಿ: ಬಿ ಶಿವಕುಮಾರ್)
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ