Fire Accident: ಹೊತ್ತಿ ಉರಿದ ಕಟ್ಟಡದೊಳಗೆ 12 ಮಂದಿ ಸಜೀವ ದಹನ! ಘಟನೆಯಲ್ಲಿ ಹಲವು ಮಂದಿಗೆ ಗಾಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಬಹುಮಹಡಿ ಕಟ್ಟಡದೊಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದೆ ಓದಿ ...
  • News18 Kannada
  • 2-MIN READ
  • Last Updated :
  • Jharkhand, India
  • Share this:

ಧನಬಾದ್, ಜಾರ್ಖಂಡ್: ಭೀಕರ ಅಗ್ನಿ ಅವಘಡದಲ್ಲಿ 8 ಮಂದಿ ಸಜೀವವಾಗಿ ದಹನಗೊಂಡು (burnt alive), ಅನೇಕ ಮಂದಿ ಗಾಯಗೊಂಡಿರುವ ಘಟನೆ ಜಾರ್ಖಂಡ್ (Jharkhand) ರಾಜ್ಯದ ಧನಬಾದ್ ನಗರದಲ್ಲಿ (Dhanbad city) ನಡೆದಿದೆ. ಧನ್‌ಬಾದ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ (multi-storey building) ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಬಹುಮಹಡಿ ಕಟ್ಟಡದೊಳಗೆ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇಡೀ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡು ಅನಾಹುತ


ರಾಜ್ಯ ರಾಜಧಾನಿ ರಾಂಚಿಯಿಂದ ಸುಮಾರು 160 ಕಿಮೀ ದೂರದಲ್ಲಿರುವ ಧನ್‌ಬಾದ್‌ನ ಜೋರಾಫಟಕ್ ಪ್ರದೇಶದ ಆಶೀರ್ವಾದ್ ಟವರ್‌ನಲ್ಲಿ ಸಂಜೆ 6 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ತೀವ್ರತೆಯಿಂದ ಇಡೀ ಕಟ್ಟಡವೇ ಹೊತ್ತಿ ಉರಿದಿದೆ ಎನ್ನಲಾಗಿದೆ.ಮದುವೆ ವೇಳೆಯೇ ನಡೆಯಿತು ಅಗ್ನಿದುರಂತ


ಪ್ರಾಥಮಿಕ ಮಾಹಿತಿಯ ಪ್ರಕಾರ, ಬೆಂಕಿ ಕಾಣಿಸಿಕೊಂಡಿರುವ ಕಟ್ಟಡದ ನಾಲ್ಕನೇ ಮಹಡಿಯಲ್ಲಿರು ಅಲ್ಲಿನ ನಿವಾಸಿಯೊಬ್ಬರ ಮದುವೆ ಕಾರ್ಯಕ್ರಮ ನಡೆಯುತ್ತಿತ್ತಂತೆ. ಆದರೆ ಆಗಲೆ ಬೆಂಕಿ ಹೊತ್ತಿಕೊಂಡು ಇಡೀ ಕಟ್ಟಡವನ್ನು ಆವರಿಸಿದೆ.


ಇದನ್ನೂ ಓದಿ: Asaram Bapu: ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ! ಜೈಲಿನಲ್ಲಿರುವ ಸ್ವಯಂ ಘೋಷಿತ ದೇವಮಾನವನಿಗೆ ಮತ್ತೊಂದು ಶಾಕ್!


ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಎಂದು ಧನ್‌ಬಾದ್‌ನ ಜಿಲ್ಲಾಧಿಕಾರಿ ತಿಳಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಸದ್ಯ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


ಗಾಯಾಳುಗಳಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ


“ಧನ್‌ಬಾದ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ 10 ಮಹಿಳೆಯರು, 3 ಮಕ್ಕಳು ಮತ್ತು ಒಬ್ಬ ಪುರುಷ ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಧನಬಾದ್‌ನ ಉಪ ಆಯುಕ್ತರು ಖಚಿತಪಡಿಸಿದ್ದಾರೆ. ರಕ್ಷಿಸಲ್ಪಟ್ಟ 18 ಜನರನ್ನು ಅಧಿಕಾರಿಗಳು ಹತ್ತಿರದ ಪಟ್ಲಿಪುತ್ರ ನರ್ಸಿಂಗ್ ಹೋಮ್‌ಗೆ ರವಾನಿಸಿದ್ದು ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಅಂತ ಮೂಲಗಳು ತಿಳಿಸಿವೆ.


ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಂತಾಪ


ಪ್ರಸ್ತುತ, ಕಟ್ಟಡದ ಆರನೇ ಮತ್ತು ಏಳನೇ ಮಹಡಿಯಲ್ಲಿ ಸಿಲುಕಿರುವ ನಿವಾಸಿಗಳನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ತೊಡಗಿದ್ದಾರೆ. ಇನ್ನು ಅಪಾರ್ಟ್ಮೆಂಟ್‌ಗೆ ಬೆಂಕಿ ಹತ್ತಿಕೊಂಡು ಅನೇಕ ಜನ ಮೃತಪಟ್ಟಿದಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಂತಾಪ ಸೂಚಿಸಿದ್ದಾರೆ. "ಇದು ಅತ್ಯಂತ ಹೃದಯ ವಿದ್ರಾವಕ" ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಬಣ್ಣಿಸಿದ್ದಾರೆ. "ಜಿಲ್ಲಾಡಳಿತವು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಮತ್ತು ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ನಾನು ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಬೆಳವಣಿಗೆಗಳನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದೇನೆ ಅಂತ ಮುಖ್ಯಮಂತ್ರಿ ಹೇಳಿದ್ದಾರೆ. ಅಗಲಿದ ಆತ್ಮಗಳಿಗೆ ದೇವರು ಶಾಂತಿ ನೀಡಲಿ ಮತ್ತು ದುಃಖತಪ್ತ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಅವರು ಟ್ವೀಟ್ ಮೂಲಕ ಪ್ರಾರ್ಥಿಸಿದ್ದಾರೆ.ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ


ಕಟ್ಟಡದ ಒಳಗೆ ಹಲವರು ಸಿಕ್ಕಿಬಿದ್ದಿರುವ ಭಯವಿದೆ ಎಂದು ಧನ್‌ಬಾದ್‌ನ ಕಾನೂನು ಮತ್ತು ಸುವ್ಯವಸ್ಥೆಯ ಡಿಎಸ್‌ಪಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. "ಕೆಲವು ಸಾವುಗಳು ವರದಿಯಾಗಿವೆ. ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಿರುವುದರಿಂದ ನಿಖರವಾದ ಸಂಖ್ಯೆಯನ್ನು ಪರಿಶೀಲಿಸಲು ಸಾಧ್ಯವಿಲ್ಲ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Published by:Annappa Achari
First published: