HOME » NEWS » National-international » 13 KILLED IN GUJARAT AS TRUCK RUNS OVER LABOURERS SLEEPING ON FOOTPATH NEAR SURAT MAK

ಗುಜರಾತ್​: ಫುಟ್​ಪಾತ್​​ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್​, 13 ಜನ ಸಾವು!

ಕಬ್ಬು ತುಂಬಿದ ಟ್ರಾಕ್ಟರ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಫುಟ್​ಪಾತ್​ ಮೇಲೆ ಚಲಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದಿದೆ. 18ಕ್ಕೂ ಹೆಚ್ಚು ಜನ ಅಲ್ಲಿ ಮಲಗಿದ್ದು ಅದರಲ್ಲಿ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

news18-kannada
Updated:January 19, 2021, 9:44 AM IST
ಗುಜರಾತ್​: ಫುಟ್​ಪಾತ್​​ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್​, 13 ಜನ ಸಾವು!
ಸಾಂದರ್ಭಿಕ ಚಿತ್ರ.
  • Share this:
ಸೂರತ್​ (ಜನವರಿ 19); ಗುಜರಾತ್‌ನ ಸೂರತ್‌ ಬಳಿಯ ಕಿಮ್‌ ಚಾರ್‌ ರಾಸ್ತಾದಲ್ಲಿ ಮಂಗಳವಾರ ಬೆಳಗಿನ ಜಾವದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ 18 ಜನರ ಗುಂಪಿನ ಮೇಲೆ ಟ್ರಕ್‌ ಹರಿದ ಪರಿಣಾಮ 13 ಜನ ಸಾವನ್ನಪ್ಪಿರುವ ದುರ್ಘಟನೆ ಇಂದು ನಡೆದಿದೆ. ಸಂತ್ರಸ್ತರು, ರಾಜಸ್ಥಾನದ ಬನ್ಸ್ವಾರ ಜಿಲ್ಲೆಯ ದಿನಗೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ.

ಕಬ್ಬು ತುಂಬಿದ ಟ್ರಾಕ್ಟರ್ ಮತ್ತೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಫುಟ್​ಪಾತ್​ ಮೇಲೆ ಚಲಿಸಿದ ಕಾರಣ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಟ್ರಕ್​ ಹರಿದಿದೆ. 18ಕ್ಕೂ ಹೆಚ್ಚು ಜನ ಅಲ್ಲಿ ಮಲಗಿದ್ದು ಅದರಲ್ಲಿ 13 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದವರು ಗಂಭೀರ ಗಾಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯಾಗಿದೆ.

ಅಪಘಾತದಲ್ಲಿ ಮೃತಪಟ್ಟವರಿಗಾಗಿ ಬಿಜೆಪಿ ಮುಖಂಡ ಓಂ ಬಿರ್ಲಾ ಸಂತಾಪ ಸೂಚಿಸಿದ್ದಾರೆ. "ಗುಜರಾತ್‌ನ ಸೂರತ್‌ನಲ್ಲಿ ಸಂಭವಿಸಿದ ದುರಂತ ಅಪಘಾತದ ಸುದ್ದಿಯಿಂದ ದುಖಿಃತನಾಗಿದ್ದೇನೆ. ಅಪಘಾತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರೆಲ್ಲರಿಗೂ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಬೇಕೆಂದು ನಾನು ಬಯಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Indo-China Conflict: ಅರುಣಾಚಲ ಪ್ರದೇಶದ ಗಡಿಯಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ಹಾಗೂ ಗಾಯಗೊಂಡಿರುವವರಿಗೆ 50,000 ರೂ. ಘೋಸಿದ್ದಾರೆ. ಅಲ್ಲದೆ "ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತ ದುರಂತ ಘಟನೆಯಾಗಿದೆ. ದುಖಿಃತ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇವೆ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Published by: MAshok Kumar
First published: January 19, 2021, 8:31 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories