ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಡುಕ್ಕಿ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಿಂದ ಕನಿಷ್ಠ 15 ಮಂದಿ ಮೃತಪಟ್ಟಿದ್ದು, 50 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶುಕ್ರವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದಾಗಿ ಪೆಟ್ಟುಮುಡಿಯಲ್ಲಿ ವಾಸವಿದ್ದ ಟೀ ಎಸ್ಟೇಟ್ ಕಾರ್ಮಿಕರ ಗುಡಿಸಲುಗಳು ಭೂ ಕುಸಿತದಿಂದ ಭೂ ಗರ್ಭ ಸೇರಿವೆ.
ಟೀ ಎಸ್ಟೇಟ್ನಲ್ಲಿ ಕೆಲಸ ಮಾಡುವ ಕಾರ್ಮಿಕರ ಸಾಲು ಮನೆಗಳ ಮೇಲೆ ದೊಡ್ಡದಾದ ಗುಡ್ಡ ಕುಸಿದು ಬಿದ್ದಿದೆ. ಇದರಿಂದ ಇಬ್ಬರು ಮಕ್ಕಳು ಹಾಗೂ ಐದು ಮಂದಿ ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ನೆರೆಯ ತಮಿಳುನಾಡಿನ ಕಾರ್ಮಿಕರಾಗಿದ್ದಾರೆ.
ಈವರೆಗೂ ಮಣ್ಣಿನಡಿ ಸಿಲುಕಿ ಮೃತಪಟ್ಟ 15 ದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಐದು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಟಾಟಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಈ ಭಾಗದ ಆಸ್ಪತ್ರೆಗಳಲ್ಲಿ ಗಾಯಾಳುಗಳ ಚಿಕಿತ್ಸೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಡಳಿತ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಹಾಗೆಯೇ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ಗಳನ್ನು ಕಳುಹಿಸಿಕೊಡುವಂತೆ ಕೋರಿದೆ.
ಭೂ ಕುಸಿತದಿಂದ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ಪರಿಹಾರಧನ ಘೋಷಿಸಲಾಗಿದೆ. ಹಾಗೆಯೇ ನೆರೆಯಿಂದ ಸಂಬಂಧಿತ ಘಟನೆಯಿಂದ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರಧನ ಘೋಷಿಸಿರುವುದಾಗಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
Pained by the loss of lives due to a landslide in Rajamalai, Idukki. In this hour of grief, my thoughts are with the bereaved families. May the injured recover quickly. NDRF and the administration are working on the ground, providing assistance to the affected.
— Narendra Modi (@narendramodi) August 7, 2020
ಇದನ್ನು ಓದಿ: Flood Update: ಭಾರತದಲ್ಲಿ ಮುಂದುವರೆದ ಪ್ರವಾಹ; 500ಕ್ಕೂ ಹೆಚ್ಚು ಸಾವು, 1.26 ಕೋಟಿ ಜನ ನಿರಾಶ್ರಿತರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ