Minor Girl Rape: 8 ತಿಂಗಳಿನಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ; 24 ಮಂದಿ ಬಂಧನ

15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಬಾಯ್ ಫ್ರೆಂಡ್​ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದ. ಈ ಘಟನೆಯನ್ನು ಆತ ವಿಡಿಯೋದಲ್ಲಿ ಸೆರೆ ಹಿಡಿದಿದ್ದ. ಈ ವಿಡಿಯೋವನ್ನು ತೋರಿಸಿ ಆತನ ಸ್ನೇಹಿತರು ಮತ್ತು ಪರಿಚಯಸ್ಥರು ಆಕೆಗೆ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ.

  • Share this:
    ಮುಂಬೈ (ಸೆ. 23):  ಸಾಕಿನಾಕ ಅತ್ಯಾಚಾರ ಘಟನೆ ಮಾಸುವ ಮುನ್ನವೇ ಮಹಾರಾಷ್ಟ್ರದ ಥಾಣೆಯಲ್ಲಿ ಮತ್ತೊಂದು ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.  ಅಪ್ರಾಪ್ತ ಬಾಲಕಿ ಮೇಲೆ ಕಳೆದ ಏಂಟು ತಿಂಗಳಿನಿಂದ ಸರಿ ಸುಮಾರು 30ಕ್ಕೂ ಹೆಚ್ಚು ಮಂದಿ  ಹಲವಾರು ಬಾರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕಳೆದ ಜನವರಿಯಿಂದ ಸೆಪ್ಟೆಂಬರ್​ವರೆಗೂ ಅನೇಕ ಮಂದಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಸದ್ಯ 24 ಜನರ ಬಂಧಿಸಿದ್ದು,  ಇಬ್ಬರು ಅಪ್ರಾಪ್ತರನ್ನು ಕೂಡ  ಪೊಲೀಸರು ವಶಕ್ಕೆ ಪಡೆದಿದ್ದಾರೆ.

    15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಬಾಯ್ ಫ್ರೆಂಡ್​ ಜನವರಿಯಲ್ಲಿ ಅತ್ಯಾಚಾರ ಎಸಗಿದ್ದ. ಈ ಘಟನೆಯನ್ನು ಆತ ವಿಡಿಯೋದಲ್ಲಿ ಸೆರೆ ಹಿಡಿದಿದ್ದ. ಈ ವಿಡಿಯೋವನ್ನು ತೋರಿಸಿ ಆತನ ಸ್ನೇಹಿತರು ಮತ್ತು ಪರಿಚಯಸ್ಥರು ಆಕೆಗೆ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ.

    ಬಾಲಕಿಯ ಗೆಳೆಯ ಆಕೆಯ ಮೇಲೆ ಅತ್ಯಾಚಾರ ನಡೆಸಿದಾಗಿನಿಂದ ಆಕೆಯ ಮೇಲೆ ನಿರಂತರ ಅತ್ಯಾಚಾರ ಆಗಿದೆ. ಆತನ ಸ್ನೇಹಿತರು ಬಾಲಕಿ ಮೇಲೆ ಥಾಣೆಯ ಡೊಂಬಿವಿಲಿ, ಬದ್ಲಾಪುರ, ಮುರ್ಬಾದ್ ಮತ್ತು ರಬಾಲೆ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಬಾರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ದತ್ತಾತ್ರಯ್ ಕರಾಳೆ ತಿಳಿಸಿದ್ದಾರೆ.

    ಇದನ್ನು ಓದಿ: ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಜ್ವರದ ಬೆನ್ನಲ್ಲೆ ಕತ್ತೆ ಹಾಲಿಗೆ ಹೆಚ್ಚಿದ ಬೇಡಿಕೆ

    ಪ್ರಕರಣ ಕುರಿತು ಕಡೆಗೂ ಬಾಲಕಿ ದೂರು ದಾಖಲಿಸಿದ್ದು, ಬಾಲಕಿಯ ದೂರಿನ ಆಧಾರದ ಮೇಲೆ ಕಲ್ಯಾಣದ ಡೊಂಬಿವಲಿಯಲ್ಲಿರುವ ಮನ್ಪದ ಪೊಲೀಸರು 33 ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), 376 (ಎನ್) (ಪುನರಾವರ್ತಿತ ಅತ್ಯಾಚಾರ), 376 (ಡಿ) (ಸಾಮೂಹಿಕ ಅತ್ಯಾಚಾರ) ಹಾಗೂ 376 (3) (ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.
    ಜನವರಿ 29 ರಿಂದ ಸೆಪ್ಟೆಂಬರ್​ 22ರವರೆಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂದು ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.

    ಇದನ್ನು ಓದಿ: ಸಾಫ್ಟ್​ವೇರ್​ ಕೆಲಸ​ ಹುಡುಕುತ್ತಿರುವವರಿಗೆ ಸುವರ್ಣಾವಕಾಶ; ವರ್ಷಕ್ಕೆ 10 ಲಕ್ಷ ರೂ ಪ್ಯಾಕೇಜ್​​

    ಪ್ರಕರಣದ ತನಿಖೆಗಾಗಿ ಎಸಿಪಿ ಸೋನಾಲಿ ಧೋಲೆ ಅವರ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಲಾಗಿದೆ ಘಟನೆ ಕುರಿತು 33 ವ್ಯಕ್ತಿಗಳ ಕುರಿತು ತಿಳಿಸಿದ್ದಾಳೆ. . ಈ ಪೈಕಿ 24 ಜನರನ್ನು ಬಂಧಿಸಲಾಗಿದೆ ಜೊತೆಗೆ ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. . ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

    ಶಿರಡಿಯಿಂದ ಮರಳುತ್ತಿದ್ದ ಅಪ್ರಾಪ್ತೆ ಅತ್ಯಾಚಾರ

    ಕಳೆದ ಹದಿನೈದು ದಿನಗಳ ಹಿಂದೆ  ಥಾಣೆ ಜಿಲ್ಲೆಯ ಉಲ್ಲಾಸ್​ ನಗರದ ರೈಲ್ವೆ ಸ್ಟೇಷನ್ ಆವರಣದಲ್ಲಿ 14 ವರ್ಷದ ಬಾಲಕಿ ಮೇಲೆ 35 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಶಿರಡಿಗೆ ತೆರಳಿದ್ದ ಆಕೆ ಮನೆಗೆ ವಾಪಸ್ಸಾಗುತ್ತಿದ್ದಳು. ಆ ವೇಳೆ ಅಲ್ಲಿಗೆ ಬಂದ ವ್ಯಕ್ತಿಯೊಬ್ಬ ಬಾಲಕಿಯನ್ನು ಹೆದರಿಸಿ, ಒತ್ತಾಯಪೂರ್ವಕವಾಗಿ ಎಳೆದುಕೊಂಡು ಹೋಗಿದ್ದಾನೆ. ರೈಲ್ವೆ ನಿಲ್ದಾಣದ ಆವರಣದಲ್ಲೇ ಜನನಿಬಿಡ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಅಲ್ಲಿಂದ ಪರಾರಿಯಾಗಿದ್ದ. ಪ್ರಕರಣ ಸಂಬಂಧ ಶ್ರೀಕಾಂತ್ ಗಾಯಕ್ವಾಡ್​ ಅಲಿಯಾಸ್ ದಾದಾ  ಎಂಬ ಆರೋಪಿ ಬಂಧಿಸಲಾಗಿತ್ತು.

    ಸಾಕಿನಾಕ ಘಟನೆ

    ಸೆಪ್ಟೆಂಬರ್ 9ರಂದು ಅತ್ಯಾಚಾರಕ್ಕೊಳಗಾದ 34 ವರ್ಷದ ಮಹಿಳೆ ಸಾಕಿನಾಕ ಪ್ರದೇಶದ ಖೈರಾನಿ ರಸ್ತೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕಬ್ಬಿಣದ ರಾಡ್​​​ನಿಂದ ಅಮಾನುಷವಾಗಿ ಹಲ್ಲೆಗೊಳಗಾಗಿದ್ದ ಮಹಿಳೆಯ ಸ್ಥಿತಿ ತೀರಾ ಗಂಭೀರವಾಗಿತ್ತು ಎಂದು ಪೊಲೀಸರು ತಿಳಿಸಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಳು.
    Published by:Seema R
    First published: