ಮಧ್ಯಪ್ರದೇಶ ರಾಜಕೀಯ ಮೇಲಾಟ; ಇಂದು ಸಂಜೆ ಬೆಂಗಳೂರು ರೆಸಾರ್ಟ್​ನಿಂದ 19 ರೆಬೆಲ್ ಶಾಸಕರು ಭೋಪಾಲ್​ಗೆ ಸ್ಥಳಾಂತರ

ಕಾಂಗ್ರೆಸ್ ರೆಬೆಲ್ ಶಾಸಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಜಿತು ಪತ್ವಾರಿ ಹಾಗೂ ಇತರರು ಇಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜ್ಯೋತಿರಾದಿತ್ಯ ಸಿಂಧಿಯಾ- ಕಮಲನಾಥ್

ಜ್ಯೋತಿರಾದಿತ್ಯ ಸಿಂಧಿಯಾ- ಕಮಲನಾಥ್

  • Share this:
ಬೆಂಗಳೂರು: ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಂಡಾಯ ಎದ್ದು, ಒಂದು ವಾರದಿಂದ ಬೆಂಗಳೂರಿನಲ್ಲಿ ಬೀಡುಬಿಟ್ಟಿದ್ದ 19 ಕಾಂಗ್ರೆಸ್ ಶಾಸಕರು ಇಂದು ಭೋಪಾಲ್​ಗೆ ವಾಪಸ್ಸಾಗಲಿದ್ದಾರೆ.

ಆರು ಮಂದಿ ಸಚಿವರು ಸೇರಿ 19 ಮಂದಿ ಶಾಸಕರು ವಾರದ ಹಿಂದೆ ಬೆಂಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದಾರೆ. ಒಂದು ಸಂಜೆ ಅವರೆಲ್ಲಾ ಭೋಪಾಲ್​ಗೆ ತೆರಳಲಿದ್ದಾರೆ. ಜ್ಯೋತಿರಾಧಿತ್ಯ ಸಿಂಧಿಯಾ ಅವರು ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದ ಬಳಿಕ ಅವರ ಬೆಂಬಲಿಗ 22 ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಸಿಂಧಿಯಾ ಬೆಂಬಲವಾಗಿ ನಿಂತಿದ್ದಾರೆ. ಶಾಸಕರ ರಾಜೀನಾಮೆಯಿಂದಾಗಿ ಕಮಲನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಸರ್ಕಾರ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಭೋಪಾಲ್ ವಿಮಾನನಿಲ್ದಾಣದಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿಯ ನೂರಾರು ಕಾರ್ಯಕರ್ತರು ಜಮಾಯಿಸಿದ್ದರಿಂದ ಸ್ಥಳದ ಸುತ್ತಮುತ್ತ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಕಾಂಗ್ರೆಸ್ ರೆಬೆಲ್ ಶಾಸಕರು ಬೆಂಗಳೂರಿನಲ್ಲಿ ಬೀಡುಬಿಟ್ಟಿರುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಜಿತು ಪತ್ವಾರಿ ಹಾಗೂ ಇತರರು ಇಂದು ಎಡಿಜಿಪಿ ಅಮರ್ ಕುಮಾರ್ ಪಾಂಡೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇದನ್ನು ಓದಿ: ಕೊರೋನಾ ವೈರಸ್ ರಾಜ್ಯದಲ್ಲಿಲ್ಲ, ರಾಜಕಾರಣದಲ್ಲಿದೆ; ಮಧ್ಯಪ್ರದೇಶ ಸಿಎಂ ಕಮಲನಾಥ್

ಇದೇ ಮಾರ್ಚ್​ 16ರಿಂದ ಮಧ್ಯಪ್ರದೇಶ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಮಧ್ಯಪ್ರದೇಶದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟಿನ ಲಾಭ ಪಡೆಯಲು ಯತ್ನಿಸುತ್ತಿರುವ ಬಿಜೆಪಿ, ಆಡಳಿತರೂಢ ಪಕ್ಷ ಸದನದಲ್ಲಿ ಬಹುಮತ ಸಾಬೀತು ಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದೆ. ಆದರೆ, ದೇಶವ್ಯಾಪಿ ಕೊರೋನಾ ಮಹಾಮಾರಿ ವ್ಯಾಪಿಸಿರುವ ಕಾರಣ ಸದನ ಮುಂದೂಡುವಂತೆ ಸಿಎಂ ಮನವಿ ಮಾಡಿದ್ದಾರೆ. ಹಾಗೊಂದು ವೇಳೆ ಕಲಾಪ ಮುಂದೂಡಿಕೆಯಾದರೆ ಬಂಡಾಯ ಎದ್ದು ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆಗೆ ಕಮಲನಾಥ್ ಸರ್ಕಾರಕ್ಕೆ ಸಮಯಾವಕಾಶ ಸಿಕ್ಕಂತಾಗುತ್ತದೆ.


First published: