Murder And Rape: 60 ವರ್ಷದ ವೃದ್ಧೆ ಕೊಲೆಗೈದು ಮೃತದೇಹದ ಮೇಲೆ ಅತ್ಯಾಚಾರ ಎಸಗಿದ 19 ವರ್ಷದ ಕಾಮುಕ!

ಮಂಡಿಯಾ ಈ ಕೃತ್ಯ ಎಸಗುವ ಹಿಂದಿನ ದಿನ ಸಹ ಆಕೆಯ ಮೇಲೆ ಕಿರುಕುಳ ನೀಡಿದ್ದಾನೆ. ಮತ್ತು ಆಕೆ ಮೊಬೈಲ್ ಸಹ ಕಸಿದುಕೊಂಡು ಹೋಗಿದ್ದ ಎಂದು ಸಂತ್ರಸ್ತೆಯ ಸೋದರ ಮಾವ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. "ವಿಚಾರಣೆಯ ಸಮಯದಲ್ಲಿ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಂಧಿತ ರೇಪ್ ಆರೋಪಿ ಮಂಡಿಯಾ

ಬಂಧಿತ ರೇಪ್ ಆರೋಪಿ ಮಂಡಿಯಾ

 • Share this:
  19 ವರ್ಷದ ಹುಡುಗ 60 ವರ್ಷದ ವೃದ್ಧ ಮಹಿಳೆಯನ್ನು ಕೊಲೆ (Murder Old Women And Rape Dead Body) ಮಾಡಿ ನಂತರ ಮೃತದೇಹದ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಜಸ್ಥಾನದ ಹನುಮಾನ್​ಗರ್ ಜಿಲ್ಲೆಯಲ್ಲಿ ( Rajasthan’s Hanumangarh district) ವರದಿಯಾಗಿದೆ. ರಾಜಸ್ಥಾನ ಪೊಲೀಸರ ಪ್ರಕಾರ, ಪಿಲಿಬಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ದುಲ್ಮನಾ ಗ್ರಾಮದಲ್ಲಿ ಗುರುವಾರ ತಡರಾತ್ರಿ 19 ವರ್ಷದ ಬಾಲಕ 60 ವರ್ಷದ ವಿಧವೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಇದಕ್ಕೆ ವಿಧವೆ ವಿರೋಧಿಸಿದಾಗ ಕಾಮುಕ ಯುವಕ ಆಕೆಯನ್ನು ಕೊಂದು ನಂತರ ಮೃತ ದೇಹದೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ತಿಳಿಸಿದ್ದಾರೆ.

  60 ವರ್ಷದ ವೃದ್ಧೆಯನ್ನು ಕೊಲೆ ಮಾಡಿ ಮೃತದೇಹದ ಮೇಲೆ ಅತ್ಯಾಚಾರ ಎಸಗಿದ ಕಾಮುಕ 19 ವರ್ಷದ ಆರೋಪಿಯನ್ನು ಸುರೇಂದರ್ ಅಲಿಯಾಸ್ ಮಂಡಿಯಾ ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲೆ ಮತ್ತು ಮೃತ ದೇಹದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಕ್ಕಾಗಿ ನೆಕ್ರೋಫಿಲಿಯಾ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಕಾಯ್ದೆಗಳ ಅಡಿಯಲ್ಲಿ ಮಂಡಿಯಾ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಈಗಾಗಲೇ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪಿಲಿಬಂಗಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  "ವಯಸ್ಸಾದ ವಿಧವೆಯನ್ನು ಕೊಲೆಗೈದು ಮತ್ತು ನೆಕ್ರೋಫಿಲಿಯಾ ಕೃತ್ಯವನ್ನು ಎಸಗಿದ ನಂತರ ಆ ಹುಡುಗ ಕೊಲೆಯಾದ ವೃದ್ಧೆಯ ಸೋದರ ಮಾವನ ಬಳಿಗೆ ಹೋಗಿದ್ದಾನೆ. ಆ ಬಳಿಕ ಮಹಿಳೆಯನ್ನು ಹೇಗೆ ಮತ್ತು ಏಕೆ ಕೊಲೆ ಮಾಡಿದೆ ಎಂದು ವಿವರಿಸಿದ್ದಾನೆ." ಎಂದು ಪೋಲಿಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

  ಮಂಡಿಯಾ ಈ ಕೃತ್ಯ ಎಸಗುವ ಹಿಂದಿನ ದಿನ ಸಹ ಆಕೆಯ ಮೇಲೆ ಕಿರುಕುಳ ನೀಡಿದ್ದಾನೆ. ಮತ್ತು ಆಕೆ ಮೊಬೈಲ್ ಸಹ ಕಸಿದುಕೊಂಡು ಹೋಗಿದ್ದ ಎಂದು ಸಂತ್ರಸ್ತೆಯ ಸೋದರ ಮಾವ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. "ವಿಚಾರಣೆಯ ಸಮಯದಲ್ಲಿ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ" ಎಂದು ಅಧಿಕಾರಿಗಳು ಹೇಳಿದ್ದಾರೆ.

  ಈ ವಾರದ ಆರಂಭದಲ್ಲಿ ಬಿಡುಗಡೆಯಾದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದತ್ತಾಂಶದ ಪ್ರಕಾರ ಉತ್ತರಪ್ರದೇಶ ಹಾಗೂ ಮಧ್ಯಪ್ರದೇಶದ ನಂತರ ರಾಜಸ್ಥಾನವು 2020ರಂದು ದೇಶದಲ್ಲಿ ಅತ್ಯಧಿಕ ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದ ರಾಜ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದೆ.

  ಎನ್‌ಸಿಆರ್‌ಬಿ ಬಿಡುಗಡೆ ಮಾಡಿದ 2020 ರ ಅಪರಾಧ ಮಾಹಿತಿಯ ಪ್ರಕಾರ, ರಾಜಸ್ಥಾನ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 5310 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ, ರಾಜಸ್ಥಾನದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಎಂಎಲ್ ಲಾಥರ್ ಅವರು 2020 ರಲ್ಲಿ ರಾಜ್ಯ ಪೊಲೀಸರ ಉಚಿತ ಎಫ್‌ಐಆರ್ ನೋಂದಣಿ ಉಪಕ್ರಮದಿಂದಾಗಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

  ಇದನ್ನು ಓದಿ: Explained: ಕ್ಯಾ. ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ್ದು ಏಕೆ? ಮುಂದಿನ ಪಂಜಾಬ್ ಸಿಎಂ ಯಾರು?

  ರಾಜ್ಯದ ಉನ್ನತ ಪೋಲಿಸ್ ಕೂಡ ತನಿಖೆಯ ಸಮಯದಲ್ಲಿ 43 ಪ್ರತಿಶತ ಅತ್ಯಾಚಾರ ಪ್ರಕರಣಗಳು ಸುಳ್ಳು ಮತ್ತು ವೈಯಕ್ತಿಕ ದ್ವೇಷದ ಕಾರಣದಿಂದ ದಾಖಲಾಗಿರುವುದನ್ನು ಕಂಡುಕೊಂಡಿದ್ದೇವೆ ಎಂದು ಹೇಳಿದ್ದಾರೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: