ನವದೆಹಲಿ (ಮೇ 24 ಸೋಮವಾರ): ಕಪ್ಪುಶಿಲೀಂಧ್ರ (ಬ್ಲ್ಯಾಕ್ ಫಂಗಸ್) ರೋಗದ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರವು ಇಂದು ವಿವಿಧ ರಾಜ್ಯಗಳಿಗೆ 19,420 ಸೀಸೆ (ವಯಲ್ಸ್) ಲಿಪೋಸೊಮಾಲ್ ಎಂಫೋಟೆರಿಸಿನ್- ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ ವಿ ಸದಾನಂದ ಗೌಡ ಅವರು ತಿಳಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಈ ಪೈಕಿ ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ, ಮೊನ್ನೆ 1270 ವಯಲ್ಸ್ ಹಾಗೂ ಅದಕ್ಕೂ ಮುನ್ನ ಮೂರು ಕಂತುಗಳಲ್ಲಿ 1660 ವಯಲ್ಸ್ ಒದಗಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.
ದೇಶದಲ್ಲಿಯೇ ತ್ವರಿತವಾಗಿ ಲಿಪೋಸೊಮಾಲ್ ಎಂಫೋಟೆರಿಸಿನ್- ಬಿ ಉತ್ಪಾದನೆ ಹೆಚ್ಚಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ ದೇಶದ ಐದು ಫಾರ್ಮಾ ಕಂಪನಿಗಳು ಇದರ ಉತ್ಪಾದನೆ ಮಾಡುತ್ತಿದ್ದು ಈಗ ಹೊಸದಾಗಿ ಮತ್ತೆ ಐದು ಕಂಪನಿಗಳಿಗೆ ಲೈಸನ್ಸ್ ನೀಡಲಾಗಿದೆ. ಈ ಸ್ವದೇಶಿ ಕಂಪನಿಗಳು ಮೇ ತಿಂಗಳಲ್ಲಿ 1.63 ಲಕ್ಷ ಸೀಸೆ ಹಾಗೂ ಜೂನ್ ತಿಂಗಳಲ್ಲಿ 2.55 ಸೀಸೆ ಲಿಪೋಸೊಮಾಲ್ ಎಂಫೋಟೆರಿಸಿನ್ ಬಿ ಉತ್ಪಾದನೆ ಮಾಡಲಿವೆ ಎಂದು ಸಚಿವ ಸದಾನಂದಗೌಡ ಅವರು ತಿಳಿಸಿದರು.
ಇದನ್ನು ಓದಿ: ಕೋವಿಡ್ ರಿಸಲ್ಟ್ ನೀಡಲು ವಿಳಂಬ ಮಾಡಿದ 40 ಲ್ಯಾಬ್‌ಗಳ ಮೇಲೆ ದಂಡ; ಡಿಸಿಎಂ ಅಶ್ವತ್ಥ್ ನಾರಾಯಣ
ಇದನ್ನು ಓದಿ: Sputnik-V: ದೆಹಲಿಯಲ್ಲೇ ಆರಂಭವಾಯ್ತು ಸ್ಪುಟ್ನಿಕ್ ಲಸಿಕೆ ಉತ್ಪಾದನೆ; ವರ್ಷಕ್ಕೆ 100 ಮಿಲಿಯನ್ ಡೋಸ್ ಉತ್ಪಾದನೆ ಗುರಿ
#BlackFungus #AmphotericinB
ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ.
ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ. ಆಮದಿನ ಜೊತೆಗೇ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ pic.twitter.com/t5blCv1aE7
— Sadananda Gowda (@DVSadanandGowda) May 24, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ