Delhi's Rohini Court shoot out Case: ಮೂವರ ಸಾವಿಗೆ ಕಾರಣವಾದ ದೆಹಲಿ ಕೋರ್ಟ್​ ಶೂಟೌಟ್ ಪ್ರಕರಣ; ಇಬ್ಬರ ಬಂಧನ!

ದೆಹಲಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆಸಿರುವ ದೃಶ್ಯ.

ದೆಹಲಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆಸಿರುವ ದೃಶ್ಯ.

ಉಮಂಗ್ ಮತ್ತು ವಿನಯ್ ವಕೀಲರಂತೆ ವೇಷ ಧರಿಸಿ ಸಿನಿಮೀಯ ರೀತಿಯಲ್ಲಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆಸಿ ಪಾತಕಿ ಜೀತೇಂದರ್ ಗೋಗಿಯನ್ನು ಕೊಲೆಗೈದಿದ್ದರು. ಎರಡು ದಿನಗಳ ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆದಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂದೆ ಓದಿ ...
 • Share this:

  ದೆಹಲಿಯ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಗುಂಡಿನ ಚಕಮಕಿ ನಡೆದಿದ್ದು, ಈ ಗಲಭೆ ವೇಳೆ ಒಬ್ಬ ಗ್ಯಾಂಗ್​ ಸ್ಟರ್​ ಮತ್ತು ಇತರೆ ಮೂವರು ಸಾವನ್ನಪ್ಪಿದ್ದರು. ಮೋಸ್ಟ್​ ವಾಂಟೆಂಡ್ ಕ್ರಿಮಿನಲ್ ಆಗಿದ್ದ ಜೀತೇಂದರ್ ಗೋಗಿ (Gangster Jitender Gogi) ಹಲವು ಕ್ರಿಮಿನಲ್ ಪ್ರಕರಣಗಳಿಗಾಗಿ ಬಂಧಿಸಿ ತಿಹಾರ್​ (Tihar Jail) ಜೈಲಿನಲ್ಲಿಡಲಾಗಿತ್ತು. ಶುಕ್ರವಾರ ವಿಚಾರಣೆಗಾಗಿ ಆತನನ್ನು ಕೋರ್ಟ್​ಗೆ ಹಾಜರುಪಡಿಸಿದ್ದ ವೇಳೆ ಗುಂಡಿನ ದಾಳಿಯಾಗಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ದೆಹಲಿಯ ರೋಹಿಣಿ ನ್ಯಾಯಾಲಯದ ( Delhi’s Rohini court) ಆವರಣದಲ್ಲಿ ಈ ಗುಂಡಿನ ದಾಳಿ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರ ತಂಡ ಸಹ ಗುಂಡಿನ ದಾಳಿ ನಡೆಸಿತ್ತು. ಆದರೆ, ದಾಳಿಕೋರರು ತಪ್ಪಿಸಿಕೊಂಡಿದ್ದರು. ಆದರೆ, ಪ್ರಕರಣ ನಡೆದು 2 ದಿನಗಳ ಬಳಿಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಮಂಗ್ (Umang) ಮತ್ತು ವಿನಯ್ (Vinay) ಎಂದು ಗುರುತಿಸಲಾಗಿದೆ.


  ಉಮಂಗ್ ಮತ್ತು ವಿನಯ್ ವಕೀಲರಂತೆ ವೇಷ ಧರಿಸಿ ಸಿನಿಮೀಯ ರೀತಿಯಲ್ಲಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆಸಿ ಪಾತಕಿ ಜೀತೇಂದರ್ ಗೋಗಿಯನ್ನು ಕೊಲೆಗೈದಿದ್ದರು. ಎರಡು ದಿನಗಳ ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆದಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.


  ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಇಬ್ಬರೂ ಆರೋಪಿಗಳನ್ನೂ ಶೀಘ್ರವಾಗಿ ಬಂಧಿಸಲಾಗಿದೆ. ಈ ಎರಡೂ ಗ್ಯಾಂಗ್​ಗಳ ನಡುವಿನ ಘರ್ಷಣೆಯಿಂದಾಗಿ ಈವರೆಗೆ ಸುಮಾರು 25ಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆ ಎಂದು ದೆಹಲಿ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನ ತಿಳಿಸಿದ್ದಾರೆ.


  ಹಲವಾರು ಕ್ರಿಮಿನಲ್​ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಜಿತೇಂದರ್​ ಗೋಗಿ ಅನಾರೋಗ್ಯಕ್ಕೆ ಒಳಗಾಗಿದ್ದ. ಆತನನ್ನು ಇಂದು ನ್ಯಾಯಾಲಯಕ್ಕೆ ಕರೆತರುವ ವಿಷಯ ತಿಳಿಯುತ್ತಿದ್ದಂತೆ ಆತನ ವಿರೋಧಿ ಗುಂಪು ಆತನ ಮೇಲೆ ಹಲ್ಲೆಗೆ ಸಂಚು ರೂಪಿಸಿತು. ವಕೀಲರ ವೇಷ ತೊಟ್ಟು ಬಂದ ವರು ನ್ಯಾಯಾಲಯಕ್ಕೆ ಗೋಗಿ ಬರುತ್ತಿದ್ದಂತೆ ಗುಂಡಿನ ಮಳೆಗರೆದರು. ಈ ವೇಳೆ ತಕ್ಷಣಕ್ಕೆ ಎಚ್ಚೆತ್ತ ಪೊಲೀಸರು ಕೂಡ ಗುಂಡಿನ ದಾಳಿ ನಡೆಸಿದರು. ಇದರಿಂದ ನ್ಯಾಯಾಲಯದ ಆವರಣದಲ್ಲಿ ಆತಂಕ ಮೂಡಿಗ ಗುಂಡಿನ ಚಕಮಕಿಗೆ ಅಲ್ಲಿದ್ದ ಜನರು ಬೆಚ್ಚಿ ಬಿದ್ದರು.

  ಕೊಲೆ, ದರೋಡೆ, ಸುಲಿಗೆ ಸೇರಿದಂತೆ 19 ಪ್ರಕರಣಗಳ ಮೇಲೆ ಮಹಾರಾಷ್ಟ್ರ ಸಂಘಟಿತ ಅಪರಾಧ ಕಾಯ್ದೆ (MCOCA) ಅಡಿ ಕಳೆದ ಏಪ್ರಿಲ್​ನಲ್ಲಿ ಜಿತೇಂದರ್​ ಗೋಗಿಯನ್ನು ಬಂಧಿಸಲಾಗಿತ್ತು. 30 ವರ್ಷದ ಗೋಗಿ 2010ರಲ್ಲಿ ತನ್ನ ತಂದೆಯ ಸಾವಿನ ಬಳಿಕ ಶಾಲೆ ತೊರೆದು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ.


  ಇದನ್ನೂ ಓದಿ: Petrol Price| ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೈಲ ಬೆಲೆ ಅಲ್ಪ ಇಳಿಕೆ; ಉತ್ತರ ಕನ್ನಡದಲ್ಲಿ 1 ಲೀಟರ್ ಪೆಟ್ರೋಲ್ 95 ಪೈಸೆ ಅಗ್ಗ!


  ಗೋಗಿ 2010ರಲ್ಲಿ ಪ್ರವೀಣ್ ಎಂಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದ. ಬಳಿಕ ದೆಹಲಿ ವಿಶ್ವವಿದ್ಯಾನಿಲಯದ ಶ್ರದ್ಧಾನಂದ ಕಾಲೇಜಿನಲ್ಲಿ ನಡೆದ ಚುನಾವಣೆ ವೇಳೆ ಗೋಗಿ ಮತ್ತು ಸ್ನೇಹಿತರು ಸಂದೀಪ್ ಮತ್ತು ರವೀಂದರ್ ಎಂಬ ಇಬ್ಬರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿ, ಗುಂಡು ಹಾರಿಸಿದರು.


  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿ ಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದು ಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.

  Published by:MAshok Kumar
  First published:

  ಸುದ್ದಿ 18ಕನ್ನಡ ಟ್ರೆಂಡಿಂಗ್

  ಮತ್ತಷ್ಟು ಓದು