ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ಗುವಾಹಟಿ ಪೊಲೀಸರು; ಇಬ್ಬರು ಸಾವು

ಗುರುವಾರ ಪ್ರತಿಭಟನೆ ಮೇಘಾಲಯ ರಾಜಧಾನಿ ಶಿಲಾಂಗ್​ಗೂ ಹಬ್ಬಿದೆ. ತ್ರಿಪುರಾದಲ್ಲೂ ಪ್ರತಿಭಟನೆ ತೀವ್ರಗೊಂಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ, ಮುನ್ನೆಚ್ಚರಿಕೆಯಾಗಿ ಮೇಘಾಲಯದಲ್ಲಿ ಇಂಟರ್​ನೆಟ್ ಮತ್ತು ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

HR Ramesh | news18-kannada
Updated:December 13, 2019, 12:16 PM IST
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ ಗುವಾಹಟಿ ಪೊಲೀಸರು; ಇಬ್ಬರು ಸಾವು
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿ ಪ್ರತಿಭಟನೆಯಲ್ಲಿ ಸುಡಲಾಗಿರುವ ವಾಹನಗಳು.
  • Share this:
ಗುವಾಹಟಿ: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ಬೃಹತ್​ ಮಟ್ಟದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಗುರುವಾರ ಪ್ರತಿಭಟನಾನಿರತರ ಮೇಲೆ ಪೊಲೀಸರು ಹಾರಿಸಿದ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. 

ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿರುವ ಗುವಾಹಟಿ ವೈದ್ಯಕೀಯ ಕಾಲೇಜು, ಓರ್ವ ವ್ಯಕ್ತಿ ಆಸ್ಪತ್ರೆಗೆ ಕರೆತರುವ ಮುನ್ನವೇ ಮತ್ತೊಬ್ಬರು ಚಿಕಿತ್ಸೆ ನೀಡುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ. ಆದಾಗ್ಯೂ, ಮೃತರ ಹೆಸರನ್ನು ಬಹಿರಂಗಪಡಿಸಿಲ್ಲ.

ಪೌರತ್ವ ತಿದ್ದುಪಡಿ ಮಸೂದಗೆ ವಿರೋಧ ವ್ಯಕ್ತಪಡಿಸಿ ಅಸ್ಸಾಂನಲ್ಲಿ ಕಳೆದ ಮೂರು ದಿನಗಳಿಂದ ಪ್ರತಿಭಟನೆಗಳು ತಾರಕಕ್ಕೇರಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಹಲವೆಡೆ ಹಿಂಸಾರೂಪ ತಳೆದಿದೆ. ಮುನ್ನೆಚ್ಚರಿಕೆಯಾಗಿ ಹತ್ತು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ವಿಮಾನ ಹಾರಾಟವನ್ನು  ಸ್ಥಗಿತಗೊಳಿಸಲಾಗಿದೆ. ಇದೇ ವೇಳೆ ಕರ್ಫ್ಯೂ ಕೂಡ ಜಾರಿಗೊಳಿಸಲಾಗಿದೆ.

ಇದನ್ನು ಓದಿ: ಅಸ್ಸಾಂನಲ್ಲಿ ಮುಂದುವರಿದ ಬಿಗುವಿನ ಪರಿಸ್ಥಿತಿ; ರೈಲು, ವಿಮಾನ ಸೇವೆ ರದ್ದು

ಗುರುವಾರ ಪ್ರತಿಭಟನೆ ಮೇಘಾಲಯ ರಾಜಧಾನಿ ಶಿಲಾಂಗ್​ಗೂ ಹಬ್ಬಿದೆ. ತ್ರಿಪುರಾದಲ್ಲೂ ಪ್ರತಿಭಟನೆ ತೀವ್ರಗೊಂಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ, ಮುನ್ನೆಚ್ಚರಿಕೆಯಾಗಿ ಮೇಘಾಲಯದಲ್ಲಿ ಇಂಟರ್​ನೆಟ್ ಮತ್ತು ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
First published: December 12, 2019, 8:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading