HOME » NEWS » National-international » 2 INDIAN SOLDIERS KILLED IN TERROR ATTACK ON ARMY PATROL NEAR SRINAGAR HK

Terror Attack: ಶ್ರೀನಗರ ಬಳಿ ಉಗ್ರರ ದಾಳಿಗೆ ಇಬ್ಬರು ಭಾರತೀಯ ಸೈನಿಕರು ಹುತಾತ್ಮ

ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್‌ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ನಡೆದಿದೆ.

news18-kannada
Updated:November 26, 2020, 5:56 PM IST
Terror Attack: ಶ್ರೀನಗರ ಬಳಿ ಉಗ್ರರ ದಾಳಿಗೆ ಇಬ್ಬರು ಭಾರತೀಯ ಸೈನಿಕರು ಹುತಾತ್ಮ
ಸಾಂದರ್ಭಿಕ ಚಿತ್ರ
  • Share this:
ಶ್ರೀನಗರ(ನವೆಂಬರ್​. 26): ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದಲ್ಲಿರುವ ಎಚ್‌ಎಂಟಿ ಪ್ರದೇಶದ ಬಳಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಗಸ್ತಿನಲ್ಲಿ  ಸೈನಿಕರು ತಿರುತ್ತಿದ್ದರು ಈ ಸಮಯದಲ್ಲಿ ಭಯೋತ್ಪಾದಕರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಗ್ರೋಟಾ ಬಳಿಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಟ್ರಕ್‌ನಲ್ಲಿ ಅಡಗಿದ್ದ ನಾಲ್ವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ ಕೆಲ ದಿನಗಳ ನಂತರ ಈ ದಾಳಿ ಸಂಭವಿಸಿದೆ.

ನಾಗ್ರೋಟಾ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಭಯೋತ್ಪಾದಕರು ದೊಡ್ಡ ದಾಳಿಯನ್ನು ನಡೆಸಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜನೆಯಾದ ನಂತರ ಜಮ್ಮು ಮತ್ತು ಕಾಶ್ಮೀರವು ನವೆಂಬರ್ 28 ಮತ್ತು ಡಿಸೆಂಬರ್ 19 ರ ನಡುವೆ ಎಂಟು ಹಂತಗಳಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯನ್ನು ನಡೆಸಲಿದೆ. ಮತ್ತು ಡಿಸೆಂಬರ್ 22 ರಂದು ಮತ ಎಣಿಕೆ ನಡೆಯಲಿದೆ. ಈ ದಾಳಿಯಿಂದ ಭಯೋತ್ಪಾದಕರು ಚುನಾವಣೆಯನ್ನು ಅಡ್ಡಿಪಡಿಸಲು ಈ ರೀತಿಯ ದಾಳಿ ನಡೆಸುತ್ತಿದ್ದಾರೆ ಎಂದು ಸರ್ಕಾರ ಹೇಳಿದೆ.
Published by: G Hareeshkumar
First published: November 26, 2020, 5:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories