ಜಮ್ಮು (ಜೂ 10): ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಉಗ್ರರನ್ನು ಮಟ್ಟ ಹಾಕಲು ನಿರಂತರ ಕಾರ್ಯಾಚಾರಣೆ ನಡೆಸುತ್ತಿದೆ. ಪರಿಣಾಮ ಭಾನುವಾರದಿಂದ ಇಲ್ಲಿಯವರೆಗೆ ಒಟ್ಟು 11 ಉಗ್ರರರನ್ನು ಹತ್ಯೆ ಮಾಡಲಾಗಿದೆ.
ಶೋಫಿಯಾನಾ ಭಾಗದಲ್ಲಿ ಇಂದು ಮುಂಜಾನೆ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಸದ್ಯ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತಷ್ಟು ಉಗ್ರರನ್ನು ಹತ್ಯೆ ಮಾಡುವ ಸಾಧ್ಯತೆ ಇದೆ.
ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್), ರಾಷ್ಟ್ರೀಯ ರೈಫಲ್ಸ್ ಹಾಗೂ ವಿಶೇಷ ಕಾರ್ಯಾಚರಣೆ ತಂಡ ಶೋಫಿಯಾನಾ ಭಾಗದಲ್ಲಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಇದನ್ನೂ ಓದಿ: ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಸಿಬ್ಬಂದಿ
ಇತ್ತೀಚೆಗೆ ಕಣಿವೆ ರಾಜ್ಯದಲ್ಲಿ ಸ್ಫೋಟಕ ತುಂಬಿದ ಕಾರು ಪತ್ತೆ ಆಗಿತ್ತು. ಪುಲ್ವಾಮ ದಾಳಿ ಮಾದರಿಯಲ್ಲೇ ಮತ್ತೊಂದು ದಾಳಿ ನಡೆಸಲು ಉಗ್ರರು ಸಿದ್ಧತೆ ನಡೆಸಿದ್ದರು ಎನ್ನಲಾಗಿದೆ. ಹೀಗಾಗಿ ಸೇನೆ ಕಾಶ್ಮೀರದಲ್ಲಿ ಕಾರ್ಯಾಚರಣೆ ಆರಂಭಿಸಿದೆ.
11 ಉಗ್ರರು ಹತ:
ಭಾನುವಾರ ಶೋಫಿಯಾನಾ ಭಾಗದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದಿನ್ ಸಂಘಟನೆಯ ಐವರು ಉಗ್ರರನ್ನು ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದರು. ಸೋಮವಾರ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಇಂದು ಇಬ್ಬರನ್ನು ಹತ್ಯೆ ಗೈಯಲ್ಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ