Tamil Nadu: ನಿದ್ರೆ ಬರುವ ಮಾತ್ರೆ ನೀಡಿ ಚಲಿಸುವ ಕಾರಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ; ರಸ್ತೆಬದಿ ಎಸೆದ ಕಿರಾತಕರು

ಸೆಪ್ಟೆಂಬರ್ 9 ರಂದು ಎಫ್ಐಆರ್ ನಲ್ಲಿ ಹೆಸರಿಸಲಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ, ಮತ್ತೊಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  Tamil Nadu: ಎರಡು ದಿನಗಳ ಹಿಂದೆ ತಮಿಳುನಾಡಿನ ಚೆನ್ನೈ ಸಮೀಪದ ಕಾಂಚೀಪುರಂ (Kanchipuram) ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ  20 ವರ್ಷದ ಮಹಿಳೆ ಸಾಮೂಹಿಕ ಅತ್ಯಾಚಾರ (gang-raped) ನಡೆದಿದ್ದು. ಆ ಮಹಿಳೆಗೆ ಮಾದಕ ದ್ರವ್ಯವನ್ನು ಬಲವಂತವಾಗಿ ಸೇವನೆ ಮಾಡಿಸಿ,  ಐದು ಜನ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

  ಮೊಬೈಲ್ ಫೋನ್ ಅಂಗಡಿಯ ಉದ್ಯೋಗಿಯಾಗಿರುವ ಮಹಿಳೆಯ ಮೇಲೆ ಈ ಘೋರ ಅಪರಾಧದ ಎಸಗಿದ ನಂತರ ರಸ್ತೆ ಬದಿ ಎಸೆಯಲಾಯಿತು. ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

  ಬದುಕುಳಿದ ಈ ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.


  ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯು ಗುಣಶೀಲನ್ ಎಂಬ ಪರಿಚಯಸ್ಥರನ್ನು ಭೇಟಿಯಾಗಲು ತೆರಳಿದ್ದರು, ಪೊಲೀಸ್ ಮೂಲಗಳ ಪ್ರಕಾರ, ಆಕೆಗೆ ನಿದ್ರೆ ಬರುವ ಮಾತ್ರೆಗಳನ್ನು ಹಾಕಿದ ತಂಪು ಪಾನೀಯವನ್ನು ನೀಡಿ ಮತ್ತು ಬರುವಂತೆ ಮಾಡಿ, ಅವಳನ್ನು ಪ್ರಜ್ಞಾಹೀನನನ್ನಾಗಿ ಮಾಡಿ. ಇದಾದ ನಂತರ, ಗುಣಶೀಲನ್ ಮತ್ತು ಆತನ ಸ್ನೇಹಿತರು ಚಲಿಸುತ್ತಿರುವ ಕಾರಿನಲ್ಲಿ ಕಾಂಚೀಪುರಂ ನಗರದ ಬಳಿ ರಸ್ತೆಗಳಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದರು ಎಂದು ಪೊಲೀಸರು ಹೇಳಿದ್ದಾರೆ.


  ಸ್ವಲ್ಪ ಸಮಯದ ನಂತರ ಸಂತ್ರಸ್ತೆಗೆ ಪ್ರಜ್ಞೆ ಬಂದಾಗ, ಚಲಿಸುತ್ತಿದ್ದ ಕಾರಿನಲ್ಲಿದ್ದ ಎಲ್ಲ ಆರೋಪಿಗಳೊಂದಿಗೆ ತಪ್ಪಿಸಿಕೊಳ್ಳಲು  ಪ್ರಯತ್ನಿಸಿದಳು ಮತ್ತು ರಸ್ತೆಯಲ್ಲಿದ್ದ ಜನರ ಸಹಾಯಕ್ಕಾಗಿ ಕೂಗಿಕೊಂಡಳು. ಶಬ್ದ ಕೇಳಿದ ದಾರಿಹೋಕರು ಆಕೆಗೆ ಸಹಾಯ ಮಾಡಲು ಧಾವಿಸಿದ್ದು, ಜನರು ಬರುತ್ತಿರುವುದನ್ನು ಗಮನಿಸಿದ ಆರೋಪಿಗಳು ಆಕೆಯನ್ನು ರಸ್ತೆ ಬದಿ ಇಳಿಸಿ ಪರಾರಿಯಾಗಿದ್ದಾರೆ.


  ಸೆಪ್ಟೆಂಬರ್ 9 ರಂದು ಎಫ್ಐಆರ್ ನಲ್ಲಿ ಹೆಸರಿಸಲಾದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ, ಮತ್ತೊಬ್ಬರನ್ನು ಶುಕ್ರವಾರ ಬಂಧಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಸೇರಿದಂತೆ ಐಪಿಸಿ ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣಗಳನ್ನು ದಾಖಲಿಸಿದ್ದಾರೆ.

  ಸೆಪ್ಟೆಂಬರ್ 9 ರಂದು ಸಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ (Khairani Road in the Saki Naka ) ಅತ್ಯಾಚಾರಕ್ಕೊಳಗಾದ ನಂತರ ಪ್ರಜ್ಞೆ ತಪ್ಪಿ ಬಿದ್ದಿದ್ದ 30 ವರ್ಷದ ಮಹಿಳೆ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ಮುಂಬೈ ಪೊಲೀಸರು ಶನಿವಾರ  ತಿಳಿಸಿದ್ದಾರೆ.

  ಇದನ್ನೂ ಓದಿ:  Mumbai Rape Case: ಕಬ್ಬಿಣದ ರಾಡ್​ನಿಂದ ಅಮಾನುಷ ಹಲ್ಲೆಗೆ ಒಳಗಾಗಿದ್ದ ಅತ್ಯಾಚಾರ ಸಂತ್ರಸ್ತೆ ಸಾವು

  ಕಳೆದ ಒಂದು ತಿಂಗಳಿನಿಂದ ಇಡೀ ದೇಶದಲ್ಲಿ ಆಘಾತಕಾರಿಯಾಗಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು. ಒಂದಾದ ಮೇಲೆ ಒಂದರಂತೆ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ.  ಕರ್ನಾಟಕದ ಮೈಸೂರು, ಮಹಾರಾಷ್ಟ್ರ, ದೆಹಲಿ, ತಮಿಳುನಾಡು ಹೀಗೆ ಅನೇಕ ರಾಜ್ಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಈ ನೀಚ ಕೃತ್ಯಗಳು ನಡೆಯುತ್ತಲೇ ಇರುವುದು ವರದಿಯಾಗುತ್ತಲೇ ಇವೆ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಬಾರದೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹಾಗೂ ಗುಂಪುಗೂಡುವುದನ್ನು ಆದಷ್ಟು ನಿಯಂತ್ರಿಸಬೇಕಿದೆ. ಸರ್ಕಾರ ಕಾಲಕಾಲಕ್ಕೆ ಹೊರಡಿಸುತ್ತಿರುವ ಕೊರೋನಾ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕಿದೆ.
  Published by:HR Ramesh
  First published: