ಪಂಜಾಬ್ (ಆಗಸ್ಟ್ 08); ಅಮೇರಿಕ ತನ್ನ ಸೈನಿಕರನ್ನು ಹಿಂಪಡೆದುಕೊಂಡ ಬೆನ್ನಿಗೆ ಅಫ್ಘಾನಿಸ್ತಾನದಲ್ಲಿ ಪರಿಸ್ಥಿತಿ ಕೈಮೀರಿದೆ. ತಾಲಿಬಾನ್ ಬಂಡುಕೋರರು ಭಾನುವಾರ ಕಾಬೂಲ್ ಪ್ರವೇಶಿಸಿ ಇಡೀ ದೇಶವನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಅಘ್ಘಾನ್ ಅಧ್ಯಕ್ಷ ಅಶ್ರಫ್ ಘಾನಿ ಕೂಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಜಕಿಸ್ಥಾನಕ್ಕೆ ಪಲಾಯನ ಮಾಡಿದ್ದಾರೆ. ಅಘ್ಘಾನ್ನಲ್ಲಿ ಎದ್ದಿರುವ ಆಂತರಿಕ ಗಲಭೆಯಿಂದಾಗಿ ಅಲ್ಲಿ ನೆಲೆಸಿರುವ ಭಾರತೀಯ ರಾಯಭಾರ ಸಿಬ್ಬಂದಿಯನ್ನು ಮತ್ತು ನಾಗರಿಕರನ್ನು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಮುಂದಿನ 48 ಗಂಟೆಗಳಲ್ಲಿ ಎಲ್ಲರನ್ನು ಭಾರತಕ್ಕೆ ವಾಪಸ್ ಕರೆತರುವ ಕೆಲಸ ಪೂರ್ಣಗೊಳ್ಳಲಿದೆ ಎಂದು ವಿದೇಶಾಂಗ ಸಚಿವಾಲಯ ಭರವಸೆ ನೀಡಿದೆ.
ಇದರ ಬೆನ್ನಿಗೆ ಇಂದು ಕೇಂದ್ರ ಸರ್ಕಾರದ ಎದುರು ಮನವಿ ಸಲ್ಲಿಸಿರುವ ಪಂಜಾಬ್ ರಾಜ್ಯದ ಸಿಎಂ ಅಮರೀಂದರ್ ಸಿಂಗ್, "ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸಬೇಕು" ವಿನಂತಿಸಿಕೊಂಡಿದ್ದಾರೆ
ಈ ಬಗ್ಗೆ ಮಾತನಾಡಿರುವ ಕ್ಯಾಪ್ಟನ್ ಅಮರೀಂದರ್ ಸಿಂಗ್, "ಅಘ್ಘಾನಿಸ್ತಾನದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಇಡೀ ಆಘ್ಘನ್ ದೇಶವನ್ನು ತಾಲಿಬಾನಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಲ್ಲಿ ಸಿಲುಕಿರುವ ಭಾರತೀಯರನ್ನು ರಕ್ಷಿಸಬೇಕಾದದ್ದು ನಮ್ಮ ಕರ್ತವ್ಯ. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನಮ್ಮ ಸರ್ಕಾರ ಸಿದ್ಧವಿದೆ" ಎಂದು ಪಂಜಾಬ್ ಮುಖ್ಯಮಂತ್ರಿ ತಿಳಿಸಿದ್ದಾರೆ.
ರಾಜಧಾನಿ ಕಾಬೂಲ್ ತಾಲಿಬಾನ್ ಕೈಗೆ ಸಿಲುಕುವ ಮುನ್ನ ಅಧ್ಯಕ್ಷ ಅಶ್ರಫ್ ಘನಿ ದೇಶವನ್ನು ತೊರೆದಿದ್ದರಿಂದ ಅಫ್ಘಾನಿಸ್ತಾನವು ಅನಿಶ್ಚಿತತೆಯಲ್ಲಿ ಸಿಲುಕಿದೆ.
ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, "ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ" ಎಂದಿದ್ದಾರೆ.
ಭಾನುವಾರ ಕೂಡ ಈ ಕುರಿತು ಟ್ವೀಟ್ ಮಾಡಿದ್ದ ಅಮರಿಂದರ್ ಸಿಂಗ್, "ಅಫ್ಘಾನಿಸ್ತಾನವು ತಾಲಿಬಾನ್ ವಶಕ್ಕೆ ಹೋಗಿದ್ದು ನಮ್ಮ ದೇಶಕ್ಕೆ ಒಳ್ಳೆಯಲ್ಲ. ಇದು ಭಾರತದ ವಿರುದ್ಧ ಚೀನಾ ಮತ್ತು ಪಾಕ್ ನಂಟು ಬಲಪಡಿಸುತ್ತದೆ. (ಚೀನಾ ಈಗಾಗಲೇ ಉಯ್ಘರ್ ಮೇಲೆ ದಾಳಿ ನಡೆಸಲು ಸೇನೆಯ ಸಹಾಯವನ್ನು ಕೋರಿದೆ). ಈ ಸೂಚನೆಗಳು ಉತ್ತಮವಾಗಿಲ್ಲ, ನಮ್ಮ ಎಲ್ಲ ಗಡಿಗಳಲ್ಲಿ ನಾವೀಗ ಹೆಚ್ಚು ಜಾಗರೂಕರಾಗಿರಬೇಕು" ಎಂದಿದ್ದರು.
ಇದನ್ನೂ ಓದಿ: ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಅನ್ನೋ ಸಂಸ್ಕೃತಿ ಇಲ್ಲ, ಅಧಿಕಾರಕ್ಕೆ ಬಂದ್ಮೇಲೆ ನಿರ್ಧಾರ; ಜಿ. ಪರಮೇಶ್ವರ್
ಶನಿವಾರ, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯು, "ಅಫ್ಘಾನಿಸ್ತಾನದಲ್ಲಿ ವಾಸಿಸುವ ಸಿಖ್ಖರ ಸುರಕ್ಷತೆಯನ್ನು ಒಕ್ಕೂಟ ಸರ್ಕಾರ ಖಾತರಿಪಡಿಸಬೇಕು. ಭಾರತಕ್ಕೆ ಬರಲು ಬಯಸುವ ಸಿಖ್ಖರನ್ನು ಕರೆತರಲು ಬೇಷರತ್ತಾದ ವ್ಯವಸ್ಥೆ ಮಾಡಬೇಕು" ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ