HOME » NEWS » National-international » 2020 DELHI RIOTS COURT ORDERS IMMEDIATE RELEASE OF JNU AND JAMIA STUDENT ACTIVISTS FROM JAIL MAK

2020 ದೆಹಲಿ ಗಲಭೆ ಪ್ರಕರಣ| ಬಂಧಿತ ವಿದ್ಯಾರ್ಥಿನಿಯರನ್ನು ಕೂಡಲೇ ಬಿಡುಗಡೆಗೊಳಿಸಿ; ದೆಹಲಿ ಹೈಕೋರ್ಟ್ ಆದೇಶ

ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

news18-kannada
Updated:June 17, 2021, 6:16 PM IST
2020 ದೆಹಲಿ ಗಲಭೆ ಪ್ರಕರಣ| ಬಂಧಿತ ವಿದ್ಯಾರ್ಥಿನಿಯರನ್ನು ಕೂಡಲೇ ಬಿಡುಗಡೆಗೊಳಿಸಿ; ದೆಹಲಿ ಹೈಕೋರ್ಟ್ ಆದೇಶ
ದೇವಂಗಾನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ.
  • Share this:
ನವ ದೆಹಲಿ (ಜೂನ್ 17); ಈಶಾನ್ಯ ದೆಹಲಿಯಲ್ಲಿ 2020ರಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಹೊರಿಸಿ ಬಂಧಿಸಲಾದ್ದ ವಿದ್ಯಾರ್ಥಿ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಳಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಅವರಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಕೊನೆಗೂ ಜಾಮೀನು ನೀಡಿ ಆದೇಶಿಸಿದೆ. ಕೇಂದ್ರ ಸರ್ಕಾರದ ಜಾರಿಗೆ ತರಲು ಮುಂದಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಕಳೆದ ವರ್ಷ ದೇಶದಾದ್ಯಂತ ಹಲವೆಡೆ ಪ್ರತಿಭಟನೆಗಳು ನಡೆದಿದ್ದವು. ದೆಹಲಿಯ ಶಾಹೀನ್​ ಭಾಗ್ ಪ್ರತಿಭಟನೆ ಎಲ್ಲಾ ಪ್ರತಿಭಟನೆಗಳ ಕೇಂದ್ರವಾಗಿತ್ತು. ಈ ವೇಳೆ ಸಿಎಎ ಪರ ಹೋರಾಟಗಳೂ ಸಹ ಅದೇ ಕಣದಲ್ಲಿ ನಡೆದಿದ್ದವು. ನಂತರ ದಿನಗಳಲ್ಲಿ ಇದು ಕೋಮು ಗಲಭೆಯಾಗಿ ಬದಲಾಗಿ ಇಡೀ ಈಶಾನ್ಯ ದೆಹಲಿ ಹೊತ್ತಿ ಉರಿದದ್ದು ಇಂದು ಇತಿಹಾಸ.

ಆದರೆ, ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಂಜ್ರಾ ತೋಡ್ ಕಾರ್ಯಕರ್ತರಾದ ನತಾಶಾ, ದೇವಂಗಾನಾ ಮತ್ತು ವಿದ್ಯಾರ್ಥಿ ಹೋರಾಟಗಾರ ಆಸಿಫ್‌ ಅವರ ಕೈವಾಡವಿದೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬಂಧಿತರು ಜಾಮೀನಿಗಾಗಿ ಎಷ್ಟೇ ಓಡಾಡಿದ್ದರೂ ಸಹ ದೆಹಲಿ ಪೊಲೀಸರ ಕಾರಣಕ್ಕೆ ಸೆಷನ್ಸ್ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿರಲಿಲ್ಲ. ಇದರ ವಿರುದ್ದ ವಿದ್ಯಾರ್ಥಿನಿಯರು ಮತ್ತೆ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿ ಆದೇಶ ಬಿಡುಗಡೆ ಮಾಡಿರುವ ಕೋರ್ಟ್ ಕೂಡಲೇ ಇಬ್ಬರನ್ನೂ ಬಿಡುಗಡೆ ಮಾಡಬೇಕು ಎಂದು ಆದೇಶಿಸುವ ಮೂಲಕ ಒಂದು ವರ್ಷದ ಜೈಲುವಾಸಕ್ಕೆ ತೆರೆ ಎಳೆದಿದೆ.

" ಆಪಾದಿತರ ವಿಳಾಸ ಪರಿಶೀಲನೆ ಆಗದ ಕಾರಣ ಜಾಮೀನು ಜಾರಿಗೆ ತಡೆ ನೀಡಬೇಕು" ಎಂದು ದೆಹಲಿ ಪೋಲೀಸರು ನ್ಯಾಯಾಲಯವನ್ನು ಕೋರಿದ್ದರು.‌ ಆದರೆ, ಈ ಕೋರಿಕೆಯನ್ನು ಒಪ್ಪದ ಕೋರ್ಟ್‌ ಇಂದು ಸಂಜೆಯ ಒಳಗೆ ಬಿಡುಗಡೆ ಮಾಡಬೇಕು ಎಂದು ಆದೇಶ ನೀಡಿದೆ. ಅವರನ್ನು ಬಿಡುಗಡೆ ಮಾಡದೇ ಇರುವುದಕ್ಕೆ ಪೊಲೀಸರು ಪರಿಶೀಲನಾ ಪ್ರಕ್ರಿಯೆಯಲ್ಲಿ ವಿಳಂಬ ಮಾಡುವುದು ಸರಿಯಾದ ಕಾರಣವಲ್ಲ ಎಂದು ಕೋರ್ಟ್‌ ತಿಳಿಸಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ತನ್ನ ತಪ್ಪುಗಳನ್ನು ಒಪ್ಪಿ, ದೇಶವನ್ನು ಪುನರ್​ ನಿರ್ಮಿಸಲು ತಜ್ಞರಿಗೆ ಸಹಕರಿಸಬೇಕು; ರಾಹುಲ್ ಗಾಂಧಿ

ನತಾಶಾ ನರ್ವಾಲ್ ಮತ್ತು ದೇವಂಗನಾ ಕಾಳಿತಾ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳಾಗಿದ್ದಾರೆ. ಪಿಂಜ್ರಾ ತೋಡ್ ಎಂಬ ಸಂಘಟನೆಯ ಸದಸ್ಯರಾದ ಇವರು ಮೇ 2020 ರಿಂದಲೂ ಬಂಧನದಲ್ಲಿದ್ದಾರೆ. ಆಸಿಫ್ ಇಕ್ಬಾಲ್ ತನ್ಹಾ ಅವರು ಬಿ.ಎ. ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪದವಿ ಅಭ್ಯಾಸ ಮಾಡುತ್ತಿದ್ದಾರೆ.

ಉಮರ್ ಖಾಲಿದ್​ಗೆ ಇಲ್ಲ ಬಿಡುಗಡೆ:
ಈಶಾನ್ಯ ದೆಹಲಿ ಗಲಭೆಯಲ್ಲಿ ಪೂರ್ವ ನಿಯೋಜಿತ ಪಿತೂರಿ ಸೇರಿದಂತೆ ಅನೇಕ ಆರೋಪಗಳ ಮೇಲೆ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್‌ನನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್ ಕಳೆದ ಆಗಸ್ಟ್​ ತಿಂಗಳಲ್ಲಿ ಬಂಧಿಸಿತ್ತು. ಉಮರ್​ ಖಾಲಿದ್​ ಬಂಧನವನ್ನು ಹಲವು ಪ್ರಗತಿಪರರು ಇದು ರಾಜಕೀಯ ಪ್ರೇರಿತ ಎಂದು ಖಂಡಿಸಿದ್ದರು.
ಇದನ್ನೂ ಓದಿ: HD Kumaraswamy: ನಾಯಕತ್ವವೇ ಇಲ್ಲದ ಬಿಜೆಪಿ ಸರ್ಕಾರ ಇದ್ದೇನು ಉಪಯೋಗ, ವಿಸರ್ಜಿಸಿ ಮೊದಲು; ಕುಮಾರಸ್ವಾಮಿ ಕಿಡಿ

ಕಳೆದ 10 ತಿಂಗಳಿನಿಂದ ಉಮರ್ ಖಾಲಿದ್​ ಸಹ ಜಾಮೀನಿಗೆ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಈವರೆಗೆ ಜಾಮೀನು ಲಭ್ಯವಾಗಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹಲವು ನಾಯಕರು ದೆಹಲಿ ಜೈಲಿನಲ್ಲಿದ್ದಾರೆ.Youtube Videoನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 17, 2021, 6:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories