ಸಿಕ್ಕಿಂ: ಸಿಕ್ಕಿನಲ್ಲಿ (Sikkim) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) 16 ಮಂದಿ ಸೈನಿಕರು (Solider) ಪ್ರಾಣ ಕಳೆದುಕೊಂಡಿದ್ದಾರೆ. ಸಿಕ್ಕಿಂನಲ್ಲಿ ಸೈನಿಕರು ಪ್ರಯಾಣಿಸುತ್ತಿದ್ದ ಟ್ರಕ್ (Truck) ಕಮರಿಗೆ ಬಿದ್ದು ಮೂವರು ಅಧಿಕಾರಿಗಳು ಸೇರಿದಂತೆ 16 ಮಂದಿ ಸೈನಿಕರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆ (Indian Army) ತಿಳಿಸಿದೆ. ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು. ಟ್ರಕ್ ಇಂದು ಬೆಳಗ್ಗೆ ಚಾಟೆನ್ನಿಂದ (Chatten) ಥಾಂಗು ಕಡೆಗೆ ಹೊರಟಿತ್ತು. ಆದರೆ ಝೀಮಾ (Zema) ಮಾರ್ಗದ ಮಧ್ಯೆ ಅಪಘಾತಕ್ಕೀಡಾಗಿದೆ. ನಂತರ ಕೂಡಲೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಗಾಯಗೊಂಡ ನಾಲ್ವರು ಸೈನಿಕರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಮತ್ತು 13 ಸೈನಿಕರು ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಸೇನೆ ಹೇಳಿದೆ.
ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ಘಟನೆಯಲ್ಲಿ ಜೀವ ಕಳೆದುಕೊಂಡ ಸೈನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ನಮ್ಮ ವೀರ ಸೇನಾ ಸಿಬ್ಬಂದಿ ಪ್ರಾಣ ಕಳೆದುಕೊಂಡಿರುವ ವಿಚಾರ ಬಹಳ ದುಃಖವನ್ನು ತರಿಸಿದೆ. ಮೃತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Pained by the loss of lives of our brave army personnel due to a road mishap in Sikkim. Condolences to the bereaved families. May the injured recover soon: PM @narendramodi
— PMO India (@PMOIndia) December 23, 2022
ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ ರಾಜನಾಥ್ ಸಿಂಗ್
ಇನ್ನೂ ರಾಜನಾಥ್ ಸಿಂಗ್ ಅವರು, ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಭಾರತೀಯ ಸೇನೆಯ ಸಿಬ್ಬಂದಿ ಸಾವನ್ನಪ್ಪಿರುವ ವಿಚಾರದಿಂದ ತೀವ್ರ ಆಘಾತಕಾರಿಯಾಗಿದೆ. ಸೈನಿಕರು ದೇಶಕ್ಕಾಗಿ ಸಲ್ಲಿಸಿದ ಸೇವೆ ಮತ್ತು ಬದ್ಧತೆಗೆ ದೇಶವು ಕೃತಜ್ಞವಾಗಿರುತ್ತದೆ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
Deeply pained by the loss of lives of the Indian Army personnel due to a road accident in North Sikkim.
The nation is deeply grateful for their service and commitment. My condolences to the bereaved families. Praying for the speedy recovery of those who are injured.
— Rajnath Singh (@rajnathsingh) December 23, 2022
ಸದ್ಯ ಅಪಘಾತ ಸ್ಥಳದಿಂದ 16 ಮೃತ ದೇಹಗಳನ್ನು ಹೊರಗೆ ತೆಗೆಯಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರು ಸೇನಾ ಸಿಬ್ಬಂದಿ ಸ್ಥಿತಿ ಹೇಗಿದೆ ಎಂದು ಇನ್ನೂ ಮಾಹಿತಿ ತಿಳಿದುಬಂದಿಲ್ಲ. ಲಾಚೆನ್ನಿಂದ ಪೊಲೀಸ್ ತಂಡದೊಂದಿಗೆ ಸ್ಥಳದಲ್ಲಿದ್ದ ಚುಂಗ್ಥಾಂಗ್ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಅರುಣ್ ಥಾಟಲ್ ಹೇಳಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗ್ಯಾಂಗ್ಟಾಕ್ನ ಸರ್ಕಾರಿ ಎಸ್ಟಿಎನ್ಎಂ ಆಸ್ಪತ್ರೆಗೆ ಕೊಂಡೊಯ್ಯಲಾಗುತ್ತಿದ್ದು, ನಂತರ ಸೇನೆಗೆ ಹಸ್ತಾಂತರಿಸಲಾಗುವುದು. ಸಂತ್ರಸ್ತರ ರೆಜಿಮೆಂಟ್ ಇನ್ನೂ ಖಚಿತವಾಗಿಲ್ಲ.
ಕಳೆದ ವಾರ ಭಾರತ ಮತ್ತು ಚೀನಾ ಸೈನಿಕರ ಘರ್ಷಣೆ ಬಗ್ಗೆ ಮಾತನಾಡಿದ್ದ ರಾಜನಾಥ್ ಸಿಂಗ್
ಕಳೆದ ವಾರ ಲೋಕಸಭೆಯಲ್ಲಿ ರಾಜನಾಥ್ ಸಿಂಗ್ ಅವರು, ಭಾರತ ಮತ್ತು ಚೀನಾ ಸೈನಿಕರ ನಡುವೆ ತವಾಂಗ್ನ ಯಾಂಗ್ಟ್ಸೆ ಪ್ರದೇಶದಲ್ಲಿ ನಡೆದ ಘರ್ಷಣೆ ಕುರಿತಂತೆ ಮಾತನಾಡಿದರು. ಈ ವೇಳೆ ನಮ್ಮ ಸೈನಿಕರಿಗೆ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಿಲ್ಲ ಎಂದು ತಿಳಿಸಿದ್ದರು.
ಇದನ್ನೂ ಓದಿ: Covid 19: ಕೊರೊನಾದಿಂದ ವಿಶ್ವಕ್ಕೇ ಕಂಟಕ, ಚೀನಾಗಿಂತ ಕೆಟ್ಟದಾಗಿದೆ ಲ್ಯಾಟಿನ್ ಅಮೆರಿಕ ಸ್ಥಿತಿ
ನಮ್ಮ ಗಡಿಯೊಳಗೆ ಚೀನೀ ಸೈನಿಕರ ಉಲ್ಲಂಘನೆಯ ಪ್ರಯತ್ನವನ್ನು ನಿಲ್ಲಿಸಲು ನಮ್ಮ ಸಶಸ್ತ್ರ ಪಡೆಗಳು ಯಾವಾಗಲೂ ಸಿದ್ಧವಾಗಿವೆ. ನಮ್ಮ ಸಶಸ್ತ್ರ ಪಡೆಗಳು ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿವೆ, ನಮ್ಮ ಸಶಸ್ತ್ರ ಪಡೆಗಳ ಸಾಮರ್ಥ್ಯ, ಶೌರ್ಯ ಮತ್ತು ಬದ್ಧತೆಯನ್ನು ದೇಶದ ನಾಗರಿಕರು ಮತ್ತು ಸರ್ಕಾರ ಗೌರವಿಸುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ