ಭಾರತ -ಮ್ಯಾನ್ಮಾರ್ ಗಡಿಯ ಮಣಿಪುರ ಚಾಂಡೆಲ್ ಜಿಲ್ಲೆಯಲ್ಲಿ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಐವರು ಯೋಧರು ಗಾಯಗೊಂಡಿದ್ದಾರೆ.
ಭಾರತ-ಮ್ಯಾನ್ಮಾರ್ ಗಡಿಯಿಂದ 3 ಕಿ.ಮೀ ದೂರದಲ್ಲಿರುವ ಖೊಂಗ್ಟಾಲ್ನಲ್ಲಿ ಅಸ್ಸಾಂ ರೈಫಲ್ಸ್ನ ಪಡೆಗಳು ಅಂತರರಾಷ್ಟ್ರೀಯ ಗಡಿಯಲ್ಲಿ ಮೂರು ದಿನಗಳ ಕಾರ್ಯಾಚರಣೆಯ ನಂತರ ಮರಳುತ್ತಿದ್ದಾಗ ಸಂಜೆ 6: 30 ರಿಂದ 7:00 ರ ವೇಳೆಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮ್ಯಾನ್ಮಾರ್ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ.
ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ.
ಮೃತರನ್ನು ಹವಾಲ್ದಾರ್ ಪ್ರಣಯ್ ಕಲಿತಾ, ರೈಫಲ್ಮನ್ ವೈಎಂ ಕೊನ್ಯಾಕ್ ಮತ್ತು ರೈಫಲ್ಮನ್ ರತನ್ ಸಲೀಮ್ ಎಂದು ಗುರುತಿಸಲಾಗಿದೆ. ಸಣ್ಣ ಗಾಯಗಳಾಗಿರುವ ಐವರು ಜವಾನರನ್ನು ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಯಾವುದೇ ಉಗ್ರ ಸಂಘಟನೆಯು ಈ ದಾಳಿಯ ಹೊಣೆಯನ್ನು ಇನ್ನೂ ವಹಿಸಿಕೊಂಡಿಲ್ಲ. ಅಸ್ಸಾಂ ರೈಫಲ್ಸ್ ಅವರ ಅಧಿಕೃತ ಹೇಳಿಕೆ ಕಾಯಲಾಗುತ್ತಿದೆ.
Published by:G Hareeshkumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ