ದಲಿತ ಯುವಕನನ್ನು ಥಳಿಸಿ, ಮೂತ್ರ ವಿಸರ್ಜನೆ ಮಾಡಿದ ಕಿಡಿಗೇಡಿಗಳು

ಆರೋಪಿ ಪ್ರದೀಪ್ ದಲಿತ ಯುವಕನಿಗೆ ಅವಹೇಳನಕಾರಿ ಪದ ಬಳಸಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದಲಿತನನ್ನು ಎಳೆದಾಡಿ, ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

 • Share this:
  ತಮಿಳುನಾಡು(ಜ.30): ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಕಿರುಕುಳ ನೀಡಿದ ಹಿನ್ನೆಲೆ, ನಾಲ್ವರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯಲ್ಲಿ ನಡೆದಿದೆ. 18 ವರ್ಷದ ದಲಿತ ಯುವಕನ ಮೇಲೆ ನಾಲ್ವರು ಆರೋಪಿಗಳ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾರೆ.ಆರೋಪಿಗಳು ದಲಿತನಿಗೆ ಅವಹೇಳನಕಾರಿ ಪದ ಬಳಸಿದ ಹಿನ್ನೆಲೆ, ಯುವಕ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಆಗ ನಾಲ್ವರು ಆರೋಪಿಗಳು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಜೊತೆಗೆ ದಲಿತನ ಮೇಲೆ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿದ್ದಾರೆ.

  ಇದಾದ ಬಳಿಕ ಹಲ್ಲೆಗೊಳಗಾದ ದಲಿತ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

  ದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿ ಬಳಿ ಸ್ಫೋಟ; ವಿಮಾನ ನಿಲ್ದಾಣ, ಸರ್ಕಾರಿ ಕಟ್ಟಡಗಳಲ್ಲಿ ಹೈ ಅಲರ್ಟ್​

  ದಲಿತ ಯುವಕ ನೀಡಿರುವ ದೂರಿನಲ್ಲಿ, ದಲಿತ ಹಾಗೂ ಓರ್ವ ಆರೋಪಿ ಪ್ರದೀಪ್ ಎಂಬಾತನ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಜಗಳವೂ ನಡೆದಿದ್ದು, ಪ್ರದೀಪ್​ನ ಮೂವರು ಗೆಳೆಯರು ಸೇರಿ ದಲಿತನ ಮೇಲೆ ಹಲ್ಲೆ ನಡೆಸಿದ್ದಾರೆ. ಜೊತೆಗೆ ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿ ಅಮಾನುಷ ಕೃತ್ಯ ಎಸಗಿದ್ದಾರೆ ಎಂದು ಉಲ್ಲೇಖವಾಗಿದೆ.

  ಆರೋಪಿ ಪ್ರದೀಪ್ ದಲಿತ ಯುವಕನಿಗೆ ಅವಹೇಳನಕಾರಿ ಪದ ಬಳಸಿದ್ದ ಎಂದು ತಿಳಿದು ಬಂದಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದಲಿತನನ್ನು ಎಳೆದಾಡಿ, ಹಲ್ಲೆ ನಡೆಸಿ ಮೂತ್ರ ವಿಸರ್ಜನೆ ಮಾಡಿದ್ದಾರೆ.

  ಪ್ರಕರಣ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 365, 342, 506, 294 ಮತ್ತು 323 ಅಡಿಯಲ್ಲಿ ಕೇಸ್ ದಾಖಲಾಗಿದೆ. ಪೊಲೀಸರು ಪ್ರದೀಪ್ ಹಾಗೂ ಆತನ ಮೂರು ಗೆಳೆಯರನ್ನು ಬಂಧಿಸಿದ್ದಾರೆ.
  Published by:Latha CG
  First published: