ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ; ದೆಹಲಿಯಲ್ಲಿ 3 ಬಸ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ
ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯವಾಗಿದೆ. ದೆಹಲಿಯಸುಖದೇವ್ ವಿಹಾರ್ ಮತ್ತು ಆಶ್ರಮ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನವದೆಹಲಿ(ಡಿ.15): ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೇಶದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತಾರಕಕೇರಿದ್ದು, ಹಲವೆಡೆ ಹಿಂಸಾತ್ಮಕ ಕೃತ್ಯಗಳು ನಡೆದಿವೆ. ದೆಹಲಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ದಕ್ಷಿಣ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಯುನಿವರ್ಸಿಟಿ ಬಳಿ ಪ್ರತಿಭಟನಾಕಾರರು ಮೂರು ಬಸ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಜೊತೆಗೆ ಅಶ್ರವಾಯು ಬಳಸಿ ಪ್ರತಿಭಟನಾಕಾರರನ್ನು ಚದುರಿಸಿದ್ಧಾರೆ.
ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯವಾಗಿದೆ. ದೆಹಲಿಯಸುಖದೇವ್ ವಿಹಾರ್ ಮತ್ತು ಆಶ್ರಮ ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಬಸ್ಗೆ ಬೆಂಕಿ ಹಚ್ಚಿದ ಘಟನೆ ಬಳಿಕ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ನಾವು ಹಿಂಸಾತ್ಮಕ ಪ್ರತಿಭಟನೆಯಿಂದ ದೂರ ಉಳಿದಿದ್ದೇವೆ ಎಂದು ಹೇಳಿದ್ದಾರೆ.