ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಮೇಲೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ ಬಳಿಕ ದೆಹಲಿಯ ಮೂರು ಮೆಟ್ರೋ ನಿಲ್ದಾಣಗಳ ಸೇವೆಯನ್ನು ತಾತ್ಕಾಲಿಕವಾಗಿ ಮೊಟಕುಗೊಳಿಸಲಾಗಿದೆ. ಜಾಮಾ ಮಸೀದಿ, ಐಟಿಒ ಮತ್ತು ಡೆಲ್ಲಿ ಗೇಟ್ ನಿಲ್ದಾಣಗಳಿಗೆ ಪ್ರವೇಶ ಮತ್ತು ನಿರ್ಗಮನವನ್ನು ಮುಚ್ಚಲಾಗಿದೆ ಎಂದು ದೆಹಲಿ ಮೆಟ್ರೋ ರೈಲ್ ಕಾರ್ಪೋರೆಷನ್ ಮೂಲಗಳು ತಿಳಿಸಿವೆ.
ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗುಂಡು ಹಾರಿಸಿದಾತ ಗೋಪಾಲ್ ಎಂದು ಗುರುತಿಸಲಾಗಿದೆ. ದಾಳಿಕೋರನನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಗುಂಡಿನ ದಾಳಿಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಜಾಮಿಯಾ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಸಿಎಎ ವಿರೋಧಿಸಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಭದ್ರತೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ಪೊಲೀಸರು ಮತ್ತು ಮಾಧ್ಯಮ ಪ್ರತಿನಿಧಿಗಳು ಸ್ಥಳದಲ್ಲಿ ಇದ್ದರು. ಈ ವೇಳೆ ಗೋಪಾಲ್ ಎಂಬ ವ್ಯಕ್ತಿ ಅಲ್ಲಿ ಪ್ರತ್ಯಕ್ಷವಾಗಿ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ.
ಇದನ್ನು ಓದಿ: ದೆಹಲಿಯ ಜಾಮಿಯಾ ನಗರ್ ಬಳಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಫೈರಿಂಗ್; ವಿದ್ಯಾರ್ಥಿ ಕಾಲಿಗೆ ಗಂಭೀರ ಗಾಯ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ