ಲಕ್ನೋ(ಜ.24): ಲಕ್ನೋದ (Lucknow) ಹಜರತ್ಗಂಜ್ ಬಳಿ ಕಟ್ಟಡವೊಂದು ಕುಸಿದಿದೆ. ಮಾಹಿತಿ ಪ್ರಕಾರ, ಅವಶೇಷಗಳಡಿಯಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಹಗಲಿನಲ್ಲಿ ಉತ್ತರ ಭಾರತದಾದ್ಯಂತ (North India) ಭೂಕಂಪನದ (Earthquake) ಅನುಭವವಾಗಿದ್ದು, ಈ ಸಮಯದಲ್ಲಿ ಕಟ್ಟಡದಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಆದರೆ, ಭೂಕಂಪದಿಂದ ಕಟ್ಟಡ ಬಿರುಕು ಬಿಟ್ಟಿದೆ ಎಂಬುವುದನ್ನು ಅಧಿಕಾರಿಗಳು ಖಚಿತಪಡಿಸಿಲ್ಲ. ಕನಿಷ್ಠ ನಾಲ್ಕು ಕುಟುಂಬಗಳು ಅವಶೇಷಗಳಡಿ ಸಿಲುಕಿರುವ ಆತಂಕವಿದೆ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಮೂವರನ್ನು ರಕ್ಷಿಸಲಾಗಿದೆ. ಘಟನಾ ಸ್ಥಳದಲ್ಲಿ ಸ್ವತಃ ರಾಜ್ಯದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ (Brijesh Pathak) ಇದ್ದಾರೆ. ಪರಿಹಾರ ಮತ್ತು ರಕ್ಷಣೆಗಾಗಿ NDRF ಮತ್ತು SDRF ಅನ್ನು ನಿಯೋಜಿಸಲಾಗಿದೆ. ಇನ್ನೂ 8 ಮಂದಿ ಸಿಕ್ಕಿಬಿದ್ದಿರುವ ಶಂಕೆ ಇದೆ.
ಇದನ್ನೂ ಓದಿ: Kerala: ಇನ್ನಷ್ಟು ಸಿರಿವಂತನಾದ ಗುರುವಾಯೂರಪ್ಪ, ದೇಗುಲದ ಖಜಾನೆಯಲ್ಲಿದೆ 260 ಕೆಜಿ ಚಿನ್ನ, 271 ಎಕ್ರೆ ಜಮೀನು!
ಈ ಅವಘಡದ ಬಗ್ಗೆ ತಕ್ಷಣ ಗಮನ ಹರಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ ತಂಡಗಳನ್ನು ಸ್ಥಳಕ್ಕೆ ಕಳುಹಿಸಲು ಸೂಚಿಸಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ರಾಜ್ಯದ ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ.
ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. 3 ಮೃತದೇಹಗಳು ಪತ್ತೆಯಾಗಿದ್ದು, ಕೆಲ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಎನ್ಡಿಆರ್ಎಫ್, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: Delhi NCR Earthquake: ದೆಹಲಿ-ಎನ್ಸಿಆರ್ನಲ್ಲಿ ಪ್ರಬಲ ಭೂಕಂಪ, ಉತ್ತರಾಖಂಡದಲ್ಲೂ ನಡುಗಿದ ಭೂಮಿ!
ಹಜರತ್ಗಂಜ್ ಪ್ರದೇಶದಲ್ಲಿ ಹಲವು ಹಳೆಯ ಕಟ್ಟಡಗಳಿವೆ ಎಂಬುವುದು ಉಲ್ಲೇಖನೀಯ. ಇನ್ನು ಇಂದು ಕುಸಿದು ಬಿದ್ದ ಆಲಯ ಅಪಾರ್ಟ್ಮೆಂಟ್ ಎಂದು ಹೇಳಲಾಗಿದೆ. ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯ ಚಾಂದಿನಿ ಮಹಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಟ್ಟಡವೊಂದರ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿರುವುದು ಗಮನಾರ್ಹ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಇಪ್ಪತ್ತಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ತುರ್ಕಮನ್ ಗೇಟ್ನ ಪಹಾರಿ ರಾಜನ್ ಚಿಟ್ಲಿ ಕಬರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ