Union Budget 2022: 400 ವಂದೇ ಭಾರತ್ ರೈಲುಗಳ ಘೋಷಣೆ

Union Budget 2022: ಮುಂದಿನ 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು(New generation Vande Bharat trains)ಗಳನ್ನು ಸಿದ್ಧಪಡಿಸಲಾಗುವುದು ಎಂದು ಘೋಷಿಸಿದರು. ಅದೇ ಸಮಯದಲ್ಲಿ, 100 ಗತಿಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

  • Share this:
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2022 ಅನ್ನು ಮಂಡಿಸುವಾಗ, 2022 ರ ರೈಲು ಬಜೆಟ್ ಅನ್ನು ಸಹ ಘೋಷಿಸಿದರು. ಇದರಲ್ಲಿ ಮುಂದಿನ 3 ವರ್ಷಗಳಲ್ಲಿ 400 ಹೊಸ ತಲೆಮಾರಿನ ವಂದೇ ಭಾರತ್ ರೈಲು(New generation Vande Bharat trains)ಗಳನ್ನು ಸಿದ್ಧಪಡಿಸಲಾಗುವುದು ಎಂದು ಘೋಷಿಸಿದರು. ಅದೇ ಸಮಯದಲ್ಲಿ, 100 ಗತಿಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಿದರು.

ಕಳೆದ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿಯವರು ಭಾರತದ 75 ನಗರಗಳನ್ನು ಸಂಪರ್ಕಿಸಲು ಹೊಸ ವಂದೇ ಭಾರತ್ ರೈಲುಗಳನ್ನು ಓಡಿಸುವುದಾಗಿ ಘೋಷಿಸಿದ್ದರು. ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಈ ರೈಲುಗಳ ಘೋಷಣೆ ಮಾಡುವ ಸಾಧ್ಯತೆ ಇದೆ. ವಂದೇ ಭಾರತ್ ರೈಲುಗಳು ದೇಶದ ಹೆಚ್ಚಿನ ನಗರಗಳನ್ನು ಸಂಪರ್ಕಿಸುತ್ತವೆ. ಅಂದರೆ ಶತಾಬ್ದಿ ಹೊರತುಪಡಿಸಿ, ವಂದೇ ಭಾರತ್ ರೈಲುಗಳನ್ನು ಇಂಟರ್‌ಸಿಟಿ ರೈಲುಗಳಂತೆ ಅನೇಕ ಪ್ರಮುಖ ಮಾರ್ಗಗಳಲ್ಲಿ ಪ್ರಾರಂಭಿಸಲಾಗುವುದು.

ಇದನ್ನೂ ಓದಿ:  Union Budget 2022: ಮಹಿಳಾ ಸಬಲೀಕರಣಕ್ಕೆ ಒತ್ತು; ಬಜೆಟ್ ನಲ್ಲಿ ಮಹಿಳೆಯರಿಗೆ ಏನು ಲಾಭ-ನಷ್ಟ?

ಉತ್ಪನ್ನಗಳ ಪೂರೈಕೆಗೆ ಒಂದು ನಿಲ್ದಾಣ, ಒಂದು ಉತ್ಪನ್ನ

ಸಣ್ಣ ರೈತರು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ರೈಲ್ವೆ ಹೊಸ ಉತ್ಪನ್ನಗಳು ಮತ್ತು ಸಮರ್ಥ ಲಾಜಿಸ್ಟಿಕ್ಸ್ ಸೇವೆಯನ್ನು ಅಭಿವೃದ್ಧಿಪಡಿಸುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಸ್ಥಳೀಯ ಉತ್ಪನ್ನಗಳ ಪೂರೈಕೆ ಸರಪಳಿಯನ್ನು ಹೆಚ್ಚಿಸಲು 'ಒಂದು ನಿಲ್ದಾಣ, ಒಂದು ಉತ್ಪನ್ನ' (One Station, One Product) ಯೋಜನೆಯನ್ನು ಸಹ ಪ್ರಾರಂಭಿಸಲಾಗುವುದು. ಇದು ದೇಶದ ಅಭಿವೃದ್ಧಿಯನ್ನು ವೇಗಗೊಳಿಸುತ್ತದೆ. ಭಾರತೀಯ ರೈಲ್ವೆಯ ವೇಗಕ್ಕೆ 100 ಗತಿಶಕ್ತಿ ಸರಕುಗಳ ಯೋಜನೆಯೂ ಇದೆ.

ದೇಶದಲ್ಲಿ ಬಹು-ಮಾದರಿ ಸಂಪರ್ಕಕ್ಕಾಗಿ ಪ್ರಧಾನಮಂತ್ರಿ ಗತಿ ಶಕ್ತಿ-ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಹಣಕಾಸು ಸಚಿವರು ಹೇಳಿದರು. PM ಗತಿಶಕ್ತಿ ಮಾಸ್ಟರ್‌ಪ್ಲಾನ್ ಆರ್ಥಿಕ ರೂಪಾಂತರ, ತಡೆರಹಿತ ಮಲ್ಟಿ ಮೋಡಲ್ ಸಂಪರ್ಕ ಮತ್ತು ಲಾಜಿಸ್ಟಿಕ್ಸ್ ದಕ್ಷತೆಗಾಗಿ 7 ಎಂಜಿನ್‌ಗಳನ್ನು ಒಳಗೊಂಡಿರುತ್ತದೆ.

ರೈಲ್ವೇ ಮಾರ್ಗಗಳ ವಿದ್ಯೂದೀಕರಣ

ಭಾರತೀಯ ರೈಲ್ವೆಯ ವೇಗಕ್ಕೆ 100 ಗತಿಶಕ್ತಿ ಸರಕುಗಳ ಯೋಜನೆಯೂ ಇದೆ. ಹೊಸ ವಂದೇ ಭಾರತ್ ರೈಲುಗಳು ಮತ್ತು ಹೊಸ ವಿಸ್ಟಾಡೋಮ್ ಕೋಚ್‌ಗಳು ಭಾರತೀಯ ರೈಲ್ವೆ ಅಭಿವೃದ್ಧಿಗೊಳಿಸಿದೆ. ಕಳೆದ 7 ವರ್ಷಗಳಲ್ಲಿ 24,000 ಕಿ.ಮೀ ರೈಲ್ವೆ ಮಾರ್ಗವನ್ನು ವಿದ್ಯುದೀಕರಣಗೊಳಿಸಲಾಗಿದೆ. 2022-23ರ ನಡುವೆ ರಾಷ್ಟ್ರೀಯ ಹೆದ್ದಾರಿಯ ಉದ್ದವನ್ನು 25000 ಕಿ.ಮೀ.ಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರು ತಿಳಿಸಿದ್ದಾರೆ. ಹೆದ್ದಾರಿ ವಿಸ್ತರಣೆಗೆ 20 ಸಾವಿರ ಕೋಟಿ ರೂ. ವೆಚ್ಚ ತಗುಲಲಿದೆ.

ಇದನ್ನೂ ಓದಿ:  Union Budget 2022: ಕೇಂದ್ರ ಬಜೆಟ್ ನಲ್ಲಿ ರೈತರಿಗೆ ಸಿಕ್ಕಿದ್ದೇನು? ಕೃಷಿ ವಲಯಕ್ಕೆ ಸೇರಿದ ಘೋಷಣೆಗಳು ಇಲ್ಲಿವೆ

2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತದೆ


 ಹಳ್ಳಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಅಂಗನವಾಡಿಗಳಿಗೆ ಆಡಿಯೋ-ವಿಡಿಯೋ ವ್ಯವಸ್ಥೆ ಕೂಡ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು. ಡಿಜಿಟಲ್​ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಸಚಿವರು ಭರವಸೆ ನೀಡಿದರು. ಡ್ರೋನ್ ಪವರ್ ಕಾರ್ಯಕ್ರಮದ ಭಾಗವಾಗಿ ಸ್ಟಾರ್ಟ್‌ಅಪ್‌ಗಳನ್ನು ಪ್ರೋತ್ಸಾಹಿಸಲಾಗುವುದು. ಕೃಷಿ ವಿವಿಗಳಲ್ಲಿ ಪಠ್ಯಕ್ರಮದಲ್ಲಿ ಬದಲಾವಣೆ ತರಲಾಗುವುದು ಎಂದು ಸಚಿವರು ತಿಳಿಸಿದರು.

60 ಲಕ್ಷ ಉದ್ಯೋಗ ಸೃಷ್ಟಿ

ಶಿಕ್ಷಕರಿಗೆ ಡಿಜಿಟಲ್ ಕೌಶಲ್ಯದ ಬಗ್ಗೆ ತರಬೇತಿ ನೀಡಲಾಗುವುದು ಎಂದು ಸಚಿವರು ವಿವರಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಇ-ಕಂಟೆಂಟ್ ಲಭ್ಯವಾಗುವಂತೆ ಮಾಡಲಾಗುವುದು. ಡಿಜಿಟಲ್ ಎಜುಕೇಶನ್ ಶಿಕ್ಷಕರಿಗೆ ವಿಶ್ವ ದರ್ಜೆಯ ಸಾಧನಗಳನ್ನು ಒದಗಿಸುತ್ತದೆ. ನಿರುದ್ಯೋಗಿ ಯುವಕರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಬಜೆಟ್ ನಲ್ಲಿ ಶುಭ ಸುದ್ದಿ ನೀಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದ್ದಾರೆ.



ಮೂರು ಯೋಜನೆ ಪ್ರಸ್ತಾಪಿಸಿದ ಹಣಕಾಸು ಸಚಿವರು


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಾಧನೆಗಳನ್ನು ಉಲ್ಲೇಖಿಸಿದ ಸಚಿವರು, ದೇಶದ ಮಹಿಳಾ ಶಕ್ತಿಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಮಹಿಳೆಯರು ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ 3 ಯೋಜನೆಗಳನ್ನು ಪ್ರಾರಂಭಿಸಲಾಗಿದೆ. ಮಿಷನ್ ಶಕ್ತಿ, ಮಿಷನ್ ವಾತ್ಸಲ್ಯ ಯೋಜನೆ ಮತ್ತು ಸಕ್ಷಮ್ ಅಂಗನವಾಡಿ ಪೌಷ್ಟಿಕಾಂಶವನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಮೂಲಕ ಮಹಿಳೆಯರು ಮತ್ತು ಮಕ್ಕಳ ಆರೋಗ್ಯಕ್ಕೆ ವಿಶೇಷ ಗಮನ ನೀಡಲಾಗುತ್ತಿದೆ.
Published by:Mahmadrafik K
First published: