ದೆಹಲಿ (ಡಿಸೆಂಬರ್ 08): ರಾಷ್ಟ್ರ ರಾಜಧಾನಿ ದೆಹಲಿಯ ಝಾನ್ಸಿರಾಣಿ ರಸ್ತೆಯಲ್ಲಿರುವ ಕೃಷಿ ಮಾರುಕಟ್ಟೆ ಗೋದಾಮಿನ ಬಹುಮಹಡಿ ಕಟ್ಟಡದಲ್ಲಿ ಇಂದು ದಿಢೀರ್ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಗೆಗೆ 43 ಜನ ಸಾವನ್ನಪ್ಪಿದ್ದರೆ, 21 ಜನ ಗಂಭೀರ ಗಾಯಕ್ಕೆ ತುತ್ತಾಗಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಗಾಯಾಳುಗಳ ಪೈಕಿ ಅನೇಕರು ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇಂದು ಮುಂಜಾನೆ ಕಟ್ಟಡಲ್ಲಿ ಕಾಣಿಸಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಇಡೀ ಕಟ್ಟಡವನ್ನು ವ್ಯಾಪಿಸಿದ ಕಾರಣ ಜನ ನಿದ್ರೆಯಲ್ಲೇ ಬೆಂಕಿಗೆ ಆಹುತಿಯಾಗಿದ್ದಾರೆ. ಸುಮಾರು 30ಕ್ಕೂ ಹೆಚ್ಚು ಆಗ್ನಿ ಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಕೊನೆಗೂ ಬೆಂಕಿಯನ್ನು ನಂದಿಸಲಾಗಿದೆ. ಅಲ್ಲದೆ, ಸುಮಾರು 50ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.
ಕಟ್ಟಡದಲ್ಲಿ ಇನ್ನೂ ಅನೇಕರು ಸಿಲುಕಿರುವ ಸಾಧ್ಯತೆ ಇದ್ದು, ಎಲ್ಲರನ್ನೂ ರಕ್ಷಿಸಲಾಗುವುದು ಎಂದು ಅಗ್ನಿಶಾಮಕ ದಳದ ಸಿಬ್ಬಂಧಿ ತಿಳಿಸಿದ್ದಾರೆ. ಆದರೆ, ಈ ಅಗ್ನಿ ಅವಘಡಕ್ಕೆ ಕಾರಣ ನಿಖರ ಕಾರಣ ಏನು ಎಂಬುದು ಮಾತ್ರ ಈ ವರೆಗೆ ಸ್ಪಷ್ಟವಾಗಿಲ್ಲ.
ಈ ನಡುವೆ ಘಟನೆಯ ಕುರಿತು ರಾಷ್ಟ್ರ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ದೆಹಲಿ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಕುರಿತು ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮುಯ್ಯ "40ಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿರುವ ಅಗ್ನಿ ದುರಂತ ನನ್ನನ್ನು ತೀವ್ರ ಶೋಕಕ್ಕೆ ದೂಡಿದೆ ಮೃತರ ಆತ್ಮಕ್ಕೆ ಶಾಂತಿ ದೊರಕಲಿ. ಮೃತರ ಅಗಲಿಕೆಯನ್ನು ಬರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ" ಎಂದಿದ್ದಾರೆ.
The fire in Delhi’s Anaj Mandi on Rani Jhansi Road is extremely horrific. My thoughts are with those who lost their loved ones. Wishing the injured a quick recovery. Authorities are providing all possible assistance at the site of the tragedy.
— Narendra Modi (@narendramodi) December 8, 2019
V v tragic news. Rescue operations going on. Firemen doing their best. Injured are being taken to hospitals. https://t.co/nWwoNB4u3Q
— Arvind Kejriwal (@ArvindKejriwal) December 8, 2019
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ