Farmers Protest: ದೆಹಲಿ ಗಡಿಯಲ್ಲಿ 46ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಇಂದು 8ನೇ ಸುತ್ತಿನ ಸಭೆ

ಇಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯಿದೆ. ಇದು  8ನೇ ಸುತ್ತಿನ ಸಭೆಯಾಗಿದೆ. ನಿನ್ನೆ ಅಂದರೆ ಗುರುವಾರ ರೈತ ಸಂಘಟನೆಗಳು ಟ್ರ್ಯಾಕ್ಟರ್​ ರ್ಯಾಲಿಯನ್ನು ಹಮ್ಮಿಕೊಂಡಿದ್ದವು.  ಕೇಂದ್ರ ಸರ್ಕಾರವು ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್​ ಪಡೆಯಬೇಕೆಂದು ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ನಾಲ್ಕು ಕಡೆಗಳಲ್ಲಿ ಟ್ರ್ಯಾಕ್ಟರ್​ ರ್ಯಾಲಿ ನಡೆಸಿದ್ದರು.

ರೈತರ ಪ್ರತಿಭಟನೆ

ರೈತರ ಪ್ರತಿಭಟನೆ

  • Share this:
    ನವದೆಹಲಿ (ಜ. 8): ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಮೂರು ಕೃಷಿ ಕಾನೂನುಗಳನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಕಳೆದ ನವೆಂಬರ್ 26ರಿಂದ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ 46ನೇ ದಿನಕ್ಕೆ ಕಾಲಿಟ್ಟಿದೆ. ಈವರೆಗೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸರ್ಕಾರದ ನಡುವೆ 7 ಸಭೆಗಳಾಗಿದ್ದು 7 ಸಭೆಗಳೂ ವಿಫಲವಾಗಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ್ದ ಅನೌಪಚಾರಿಕ ಮಾತುಕತೆಯೂ ವಿಫಲವಾಗಿದೆ. ಮಾತುಕತೆಗಳು ವಿಫಲವಾದದ್ದರಿಂದ ದೆಹಲಿ ಗಡಿಗಳಲ್ಲಿ ರೈತರು ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ನಡುವೆ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಕೇಂದ್ರ ಸರ್ಕಾರದ ಮಧ್ಯೆ ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

    ಇಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯಿದೆ. ಇದು  8ನೇ ಸುತ್ತಿನ ಸಭೆಯಾಗಿದೆ. ನಿನ್ನೆ ಅಂದರೆ ಗುರುವಾರ ರೈತ ಸಂಘಟನೆಗಳು ಟ್ರ್ಯಾಕ್ಟರ್​ ರ್ಯಾಲಿಯನ್ನು ಹಮ್ಮಿಕೊಂಡಿದ್ದವು.  ಕೇಂದ್ರ ಸರ್ಕಾರವು ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್​ ಪಡೆಯಬೇಕೆಂದು ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ನಾಲ್ಕು ಕಡೆಗಳಲ್ಲಿ ಟ್ರ್ಯಾಕ್ಟರ್​ ರ್ಯಾಲಿ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಭಾರತೀಯ ಕಿಸಾನ್ ಸಂಘದ ವಕ್ತಾರ ರಾಕೇಶ್​ ಟಿಕೈತ್, ಜ.26ರ ಗಣರಾಜ್ಯೋತ್ಸದ ದಿನದಂದು ಇದೇ ರೀತಿಯಾಗಿ ಟ್ರ್ಯಾಕ್ಟರ್ ರ್ಯಾಲಿ ಮಾಡುತ್ತೇವೆ. ಅಂದು ನಡೆಯುವ ಪರೇಡ್​ನಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಹೇಳಿದ್ದರು.

    ಜನವರಿ 4ರ ಸಭೆ ವಿಫಲವಾದರೆ ಹರಿಯಾಣದಲ್ಲಿರುವ ಎಲ್ಲಾ ಶಾಪಿಂಗ್ ಮಾಲ್ ಗಳು ಟೋಲ್ ಫ್ಲಾಜಾಗಳನ್ನು ಬಂದ್ ಮಾಡಿಸುವುದಾಗಿ ಜೊತೆಗೆ ಗಣರಾಜ್ಯೋತ್ಸವದ ದಿನ‌ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಎಚ್ಚರಿಸಿದ್ದರು.

    Covid Vaccine - ಬೆಂಗಳೂರಿನ 8 ಕಡೆ ಸೇರಿದಂತೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಕ್ಸಿನ್ ಡ್ರೈ ರನ್

    ನವೆಂಬರ್ 26ರಿಂದಲೂ ಶಾಂತಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು ಡಿಸೆಂಬರ್ 8ರಂದು 'ಭಾರತ್ ಬಂದ್'ಗೆ ಕರೆ ಕೊಟ್ಟಿದ್ದರು. ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದರು. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಬಳಿಕ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದರು.

    ಡಿಸೆಂಬರ್ 14ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಡಿಸೆಂಬರ್ 21ರಿಂದ ರಿಲೇ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಅಂದರೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದು ಇದಾದ ಮೇಲೆ ಮತ್ತೆ 11 ಜನ ರೈತರ ತಂಡ 24 ಗಂಟೆ ಉಪವಾಸ ಇರುವುದಾಗಿದೆ.

    ಕೇಂದ್ರ ಸರ್ಕಾರ ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

    ಹೀಗೆ ಪರಸ್ಪರ ಒಮ್ಮತ ಮೂಡದೇ ಸಮಸ್ಯೆ ಸಮಸ್ಯೆಯಾಗಿಯೇ ಉಳಿದಿದೆ. ಅಧಿಕೃತವಾಗಿ ಹಾಗೂ ಅನೌಪಚಾರಿಕವಾಗಿ ನಡೆಸಿದ ಮಾತುಕತೆಗಳು ವಿಫಲವಾಗಿವೆ. ರೈತರು ದೆಹಲಿ ಚಲೊ, ಹೆದ್ದಾರಿ ತಡೆ, ಟೋಲ್ ಫ್ಲಾಜಾಗಳ ಬಂದ್, ಬಿಜೆಪಿ ನಾಯಕರ ಮನೆ ಮುಂದೆ ಮುಷ್ಕರ, ಭಾರತ್ ಬಂದ್, ಉಪವಾಸ ಸತ್ಯಾಗ್ರಹಗಳೆಲ್ಲವನ್ನೂ ಶಾಂತವಾಗಿ ನಡೆಸಿದ್ದರೂ ಕೇಂದ್ರ ಸರ್ಕಾರ ತನ್ನ ಹಠಮಾರಿತನದಿಂದ ಹಿಂದೆ ಸರಿದಿಲ್ಲ. ಹಾಗಾಗಿ ಮುಂದೇನಾಗುತ್ತದೆ ಎನ್ನುವುದನ್ನು ಈಗಲೇ ಹೇಳಲು‌ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಕೇಂದ್ರ ಸರ್ಕಾರ ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದಿತ್ತು. ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದಿತ್ತು. ಆದುದರಿಂದ ಸದ್ಯ ದೆಹಲಿಯ ಗಡಿಗಳಲ್ಲೇ ಇರುವ ರೈತರು ಅಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

    ಸಭೆ ಬಳಿಕ ಮಾತನಾಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಥೋಮರ್, 'ಜನವರಿ 8ರಂದು ಮತ್ತೆ ಸಭೆ ಸೇರಿ ಚರ್ಚೆ ನಡೆಸುತ್ತೇವೆ. ಇಂದು ಕೃಷಿ ಕಾನೂನುಗಳನ್ನು ಹಿಂಪಡೆಯುವ ಬಗ್ಗೆ ಚರ್ಚೆ ಆಗಿಲ್ಲ. ರೈತರು ಕೇಂದ್ರ ಸರ್ಕಾರ ಮಧ್ಯಮ ಮಾರ್ಗ ಹುಡಕಲೆಂದು ಬಯಸಿದ್ದಾರೆ. ಎರಡೂ ಕೈ ಕೂಡಿದರೇನೇ ಚಪ್ಪಾಳೆ ತಟ್ಟಲು ಆಗುವುದು' ಎಂದು ಹೇಳಿದ್ದರು.
    Published by:Latha CG
    First published: