Terror Attack: ಸೇನಾ ಟ್ರಕ್​ ಮೇಲೆ ಉಗ್ರರ ದಾಳಿ! ಐವರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದಲ್ಲಿ ಸೇನೆ ಮೇಲೆ ಉಗ್ರರ ದಾಳಿ

ಜಮ್ಮು ಕಾಶ್ಮೀರದಲ್ಲಿ ಸೇನೆ ಮೇಲೆ ಉಗ್ರರ ದಾಳಿ

Terror Attack : ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆ ಮತ್ತು ಕಡಿಮೆ ಗೋಚರತೆಯ ಲಾಭವನ್ನು ಪಡೆದು ಭಯೋತ್ಪಾದಕರು ಗ್ರೆನೇಡ್​ಗಳನ್ನು ಎಸೆದಿದ್ದು ಪರಿಣಾಮ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸೇನಾ ಪ್ರಧಾನ ಕಚೇರಿ, ನಾರ್ದರ್ನ್ ಕಮಾಂಡ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

  • Share this:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir)ಪೂಂಚ್‌ನಲ್ಲಿ (Poonch) ಭಾರತೀಯ ಸೇನೆಯ ಟ್ರಕ್​ ಮೇಲೆ ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ (Terrorists attack) ಐವರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಸೇನಾ ವಾಹನವನ್ನು (Army Truck) ಭಿಂಬರ್ ಗಲಿಯಿಂದ ಪೂಂಚ್​ ಜಿಲ್ಲೆಯ ಸಂಗ್ಯೋಟ್​ಗೆ ಸ್ಥಳಾಂತರಿಸುತ್ತಿದ್ದಾಗ ಮಧ್ಯಾಹ್ನ 3 ಗಂಟೆಗೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಯೋಧನನ್ನು (Soldier) ತಕ್ಷಣ ರಾಜೌರಿಯ ಸೇನಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಶೋಧ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಭಾರತೀಯ ಸೇನೆ ಘೋಷಿಸಿದೆ.


ರಾಷ್ಟ್ರೀಯ ರೈಫಲ್ಸ್​ ಘಟಕದ ಸಿಬ್ಬಂದಿ ಹುತಾತ್ಮ


ಈ ಪ್ರದೇಶದಲ್ಲಿ ಸುರಿದ ಭಾರೀ ಮಳೆ ಮತ್ತು ಕಡಿಮೆ ಗೋಚರತೆಯ ಲಾಭವನ್ನು ಪಡೆದು ಭಯೋತ್ಪಾದಕರು ಗ್ರೆನೇಡ್​ಗಳನ್ನು ಎಸೆದಿದ್ದು ಪರಿಣಾಮ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸೇನಾ ಪ್ರಧಾನ ಕಚೇರಿ, ನಾರ್ದರ್ನ್ ಕಮಾಂಡ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಹುತಾತ್ಮದಾರ ಯೋಧರು ರಾಷ್ಟ್ರೀಯ ರೈಫಲ್ಸ್​ ಘಟಕಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ಆ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಗಾಯಗೊಂಡ ಮತ್ತೊಬ್ಬ ಸೇನಾ ಸಿಬ್ಬಂದಿಯನ್ನು ತಕ್ಷಣ ರಜೌರಿಯ ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ: Jammu Kashmir: ಉಗ್ರರ ನೆಲೆಗೆ ಅಟ್ಯಾಕ್ ಮಾಡಿದ ಭಾರತೀಯ ಸೇನೆ; ಇಬ್ಬರು ಭಯೋತ್ಪಾದಕರ ಬಂಧನ


ಮುಂದುವರಿದ ಶೋಧ ಕಾರ್ಯ


ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಪೂಂಚ್ ಸೆಕ್ಟರ್‌ನಲ್ಲಿ ಉಗ್ರರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮಾಹಿತಿ ನೀಡಿದ್ದಾರೆ. ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಭಾರತೀಯ ಸೇನೆಯು ವೀರ ಯೋಧರನ್ನು ಕಳೆದುಕೊಂಡಿದೆ ಎಂದು ಅವರು ಹೇಳಿದರು. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಭಾರತೀಯ ಸೇನಾ ಪಡೆಗಳು ಪರಿಸ್ಥಿತಿಯನ್ನು ಅವಲೋಕಿಸುತ್ತಿವೆ ಮತ್ತು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ. ಮೇ ತಿಂಗಳಲ್ಲಿ ಶ್ರೀನಗರದಲ್ಲಿ ನಡೆಯಲಿರುವ ಜಿ 20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯನ್ನು ಗಮನದಲ್ಲಿಟ್ಟುಕೊಂಡು ಭಯೋತ್ಪಾದಕ ದಾಳಿ ನಡೆದಿರಬಹುದು ಎನ್ನಲಾಗಿದೆ. ಏತನ್ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಳೆದ ವಾರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು.


ಏತನ್ಮಧ್ಯೆ, ಜೈಶ್ ಬೆಂಬಲಿತ ಭಯೋತ್ಪಾದಕ ಗುಂಪು ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಮೂಲಗಳು ತಿಳಿಸಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

top videos
    First published: