Accident Case| ಜಾರ್ಖಂಡ್‌; ಕಾರು-ಬಸ್ ಮುಖಾಮುಖಿ ಡಿಕ್ಕಿ, ಐವರು ಸ್ಥಳದಲ್ಲೇ ಸಜೀವ ದಹನ!

ಅಪಘಾತದಲ್ಲಿ ನಾಲ್ಕು ಮಂದಿ ವಯಸ್ಕರು ಮತ್ತು ಓರ್ವ ಬಾಲಕ ಮೃತಪಟ್ಟಿದ್ದಾನೆ. ವಯಸ್ಕರ ಪೈಕಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಕಿಗೆ ಹೊತ್ತಿ ಉರಿದ ವಾಹನ.

ಬೆಂಕಿಗೆ ಹೊತ್ತಿ ಉರಿದ ವಾಹನ.

 • Share this:
  ರಾಮಗಢ (ಸೆಪ್ಟೆಂಬರ್​ 15); ಜಾರ್ಖಂಡ್‌ನ ರಾಮಗಢ (Jharkhand-Ramgarh) ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಬಸ್‌ಗೆ ಕಾರು (Bus-Car Accident) ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕಾರು ಬೆಂಕಿಗಾಹುತಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜರಪ್ಪ ಪೊಲೀಸ್ ಠಾಣೆ ವ್ಯಾಪ್ತಿಯ ಮುರಬಂಧದಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬಸ್​ನ ಚಾಲಕ ಕೂಡ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ರಾಮಗಢ-ಗೋಲಾ ಮುಖ್ಯ ರಸ್ತೆಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ವ್ಯಾಗನಾರ್ ಕಾರು ಬಸ್ಸಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ತಿಳಿಸಿದ್ದಾರೆ. ಡಿಕ್ಕಿಯ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಐದು ಜನರು ಸಜೀವ ದಹನವಾಗಿದ್ದಾರೆ ಎಂದು ಹೇಳಿದ್ದಾರೆ.

  ಅಪಘಾತದಲ್ಲಿ ನಾಲ್ಕು ಮಂದಿ ವಯಸ್ಕರು ಮತ್ತು ಓರ್ವ ಬಾಲಕ ಮೃತಪಟ್ಟಿ ದ್ದಾನೆ. ವಯಸ್ಕರ ಪೈಕಿ ಇಬ್ಬರು ಪುರುಷರು ಮತ್ತು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

  ಇದನ್ನೂ ಓದಿ: America vs Afghan| ಅಫ್ಘಾನಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲಿನ ಅಮೆರಿಕದ ಡ್ರೋಣ್ ದಾಳಿಗೆ ಬಳಕೆಯಾಗಲಿದೆಯೇ ಭಾರತ?

  ಮೃತರು ಪಾಟ್ನಾದವರಾಗಿದ್ದು, ಪೊಲೀಸರು ಅವರ ವಿಳಾಸಗಳು ಮತ್ತು ಇತರ ವಿವರಗಳನ್ನು ಕಂಡು ಕೊಳ್ಳಲಿದ್ದಾರೆ. ಅಪಘಾತದ ಕಾರಣವನ್ನು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇತ್ತಿಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿಯ ಮರಿನಾಯಕನಹಳ್ಳಿ ಗೇಟ್ ಬಳಿ ಲಾರಿ ಮತ್ತು ಜೀಪ್ ನಡುವೆ ಭೀಕರ ಅಪಘಾತ ನಡೆದು, 8 ಮಂದಿ ಮೃತಪಟ್ಟಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: