ಲಕ್ನೋ(ಜುಲೈ.19): ಭಾನುವಾರ ಬೆಳಿಗ್ಗೆ ಉತ್ತರಪ್ರದೇಶದ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ಹೈವೇಯಲ್ಲಿ ಬಸ್ - ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ.
ಡಿಕ್ಕಿಯಾದ ನಂತರ ಬಸ್ ಪಲ್ಟಿಯಾಗಿದೆ. ಗಾಯಾಳುಗಳನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ರಕ್ಷಿಸಲಾಗಿದೆ. ನಂತರ ಗಾಯಾಳುಗಳನ್ನು ಹತ್ತಿರದ ಸೌರಿಕ್ ಮತ್ತು ಸೈಫಾಯ್ ಆಸ್ಪತ್ರೆಗೆ ಸೇರಿಸಲಾಗಿದೆ.
ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಲಸೆ ಕಾರ್ಮಿಕರನ್ನು ಹೊತ್ತ ಬಸ್ ಬಿಹಾರದ ದರ್ಭಂಗದಿಂದ ದೆಹಲಿಗೆ ಹೋಗುತ್ತಿತ್ತು ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Kannauj: Five people died, at least 18 injured after a private bus hit another vehicle at Agra - Lucknow Expressway this morning. The injured have been taken to a hospital. The bus was going from Bihar's Darbhanga to Delhi when the accident occured. pic.twitter.com/xg6YYFWYTI
ದರ್ಬಂಗಾದಿಂದ ದೆಹಲಿಯ ಕಡೆ ಹೊರಟಿದ್ದ ಖಾಸಗಿ ಬಸ್ ದೆಹಲಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಹೆದ್ದಾರಿಯಿಂದ ಕೆಳಗೆ ಬಿದ್ದಿವೆ ಎಂದು ಪೊಲೀಸ್ ಅಧಿಕಾರಿ ಅಮರೇಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಅಪಘಾತದ ಮಾಹಿತಿ ಬಂದಾಗ ಪೊಲೀಸರು ಮತ್ತು ಇತರ ಭದ್ರತಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿದರು. ಘಟನೆಯಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ. 25 ಜನರು ಗಾಯಗೊಂಡಿದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿದರ ಬಗ್ಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಇದೆ ಹೆದ್ದಾರಿಯಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ 14 ಜನರು ಸಾವನ್ನಪ್ಪಿ, 31 ಜನರಿಗೆ ಗಂಭೀರ ಗಾಯಗೊಂಡಿದ್ದರು.
Published by:G Hareeshkumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ