HOME » NEWS » National-international » 5 KILLED 34 INJURED AS SPEEDING BUS FALLS INTO 30 FEET DEEP GORGE AT KONDAIBARI GHAT IN MAHARASHTRA LG

ಮಹಾರಾಷ್ಟ್ರದಲ್ಲಿ 30 ಅಡಿ ಕಂದಕಕ್ಕೆ ಬಿದ್ದ ಬಸ್​; 5 ಮಂದಿ ಸಾವು, 34 ಜನರಿಗೆ ಗಾಯ

ಘಟನೆಯಲ್ಲಿ ಬಸ್​ನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನು 34 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ವಿಸರ್ವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

news18-kannada
Updated:October 21, 2020, 11:59 AM IST
ಮಹಾರಾಷ್ಟ್ರದಲ್ಲಿ 30 ಅಡಿ ಕಂದಕಕ್ಕೆ ಬಿದ್ದ ಬಸ್​; 5 ಮಂದಿ ಸಾವು, 34 ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
  • Share this:
ಮುಂಬೈ(ಅ.21): ಮಹಾರಾಷ್ಟ್ರದ ನಂದುರ್ಬರ್​ ಜಿಲ್ಲೆಯ ಬಳಿ ಬಸ್ಸೊಂದು ಕಣಿವೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ 5 ಮಂದಿ ಸಾವನ್ನಪ್ಪಿದ್ದು, ಸುಮಾರು 34 ಜನರು ಗಾಯಗೊಂಡಿದ್ದಾರೆ. ಬಸ್ ತುಂಬಾ ವೇಗವಾಗಿ ಬರುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಇಂದು ಮುಂಜಾನೆ 3.15ರ ಸಮಯದಲ್ಲಿ ಕೊಂಡೈಬರಿ ಘಾಟ್​ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತಕ್ಕೀಡಾದ ಖಾಸಗಿ ಬಸ್ ಮಲ್ಕಪುರದಿಂದ ಗುಜರಾತ್​ನ ಸೂರತ್​​ಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕೊಂಡೈಬರು ಘಾಟ್​​​ಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಸುಮಾರು 30 ಅಡಿ ಆಳಕ್ಕೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೀಮಾ ನದಿ ಪ್ರವಾಹ; ಇಂದು ಸಿಎಂ ಬಿಎಸ್ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ

ಇನ್ನು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
Youtube Video

ಘಟನೆಯಲ್ಲಿ ಬಸ್​ನಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನು 34 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ವಿಸರ್ವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Published by: Latha CG
First published: October 21, 2020, 11:50 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories