ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

ತನ್ನ ಭಾವನ ಜೊತೆಗೆ ಸಂಬಂಧಿಕರ ಮನೆಗೆ ಹೋಗಿದ್ದ ಬಾಲಕಿ ಮನೆಗೆ ವಾಪಾಸ್​ ಬರುವಾಗ ಐವರು ಅಡ್ಡಗಟ್ಟಿದ್ದರು. ಆಕೆಯ ಭಾವನನ್ನು ಅಲ್ಲೇ ಬಿಟ್ಟು ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದರು.

Sushma Chakre | news18
Updated:April 25, 2019, 8:38 PM IST
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
ಸಾಂದರ್ಭಿಕ ಚಿತ್ರ
Sushma Chakre | news18
Updated: April 25, 2019, 8:38 PM IST
ನವದೆಹಲಿ (ಏ. 25): ಅಪ್ರಾಪ್ತೆಯನ್ನು ಕಿಡ್ನಾಪ್​ ಮಾಡಿ ಸಾಮೂಹಿಕ ಅತ್ಯಾಚಾರವೆಸಗಿದ್ದ ಆರೋಪಿಗಳನ್ನು ಅವರೇ ಮಾಡಿದ ಒಂದೇ ಒಂದು ತಪ್ಪಿನಿಂದಾಗಿ ಪೊಲೀಸರು ಪತ್ತೆಹಚ್ಚಿದ್ದಾರೆ. ಹಾಗಾದರೆ, ಆ ತಪ್ಪು ಯಾವುದು? ಎಂದು ಯೋಚಿಸುತ್ತಿದ್ದೀರಾ?

ಮಾರ್ಚ್​ 25ರಂದು 5 ಜನರು ಅಸ್ಸಾಂನ ಆಕಾಶಿಗಂಗಾ ಸಂರಕ್ಷಿತ ಅರಣ್ಯದ ಬಳಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದರು. ಬಳಿಕ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿದ್ದು,  ವಿಡಿಯೋವನ್ನು ಆಧರಿಸಿ ಅಸ್ಸಾಂ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಂಡ ಅತ್ಯಾಚಾರ ಮಾಡುವುದನ್ನು ಚಿತ್ರೀಕರಿಸಿದ ಹೆಂಡತಿ; ಸಂತ್ರಸ್ತೆಯರಿಗೆ ವಿಡಿಯೋ ಲೀಕ್ ಮಾಡುವ ಬೆದರಿಕೆ!

ತನ್ನ ಭಾವನ ಜೊತೆಗೆ ಸಂಬಂಧಿಕರ ಮನೆಗೆ ಹೋಗಿದ್ದ ಬಾಲಕಿ ಮನೆಗೆ ವಾಪಾಸ್​ ಬರುವಾಗ ಐವರು ಅಡ್ಡಗಟ್ಟಿದ್ದರು. ಆಕೆಯ ಭಾವನನ್ನು ಅಲ್ಲೇ ಬಿಟ್ಟು ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಈ ವೇಳೆ ಆ ಐವರಲ್ಲಿ ಒಬ್ಬ ಬಾಕಿ ನಾಲ್ವರು ಅತ್ಯಾಚಾರ ಎಸಗುವಾಗ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಿದ್ದು, ಆ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಆ ವಿಡಿಯೋದ ಬೆನ್ನತ್ತಿದ ಪೊಲೀಸರು ಆ ಬಾಲಕಿಯ ಭಾವ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲಿಸಿಕೊಂಡಿದ್ದರು. ಈ ಬಗ್ಗೆ ಚುರುಕಿನ ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದು, ಇನ್ನೂ ಇಬ್ಬರು ಕಾಣೆಯಾಗಿದ್ದಾರೆ. ಸದ್ಯಕ್ಕೆ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಬಾಕಿ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ.

 
Loading...

First published:April 25, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...
  • I agree to receive emails from NW18

  • I promise to vote in this year's elections no matter what the odds are.

    Please check above checkbox.

  • SUBMIT

Thank you for
taking the pledge

Vote responsibly as each vote
counts and makes a difference

Click your email to know more

Disclaimer:

Issued in public interest by HDFC Life. HDFC Life Insurance Company Limited (Formerly HDFC Standard Life Insurance Company Limited) (“HDFC Life”). CIN: L65110MH2000PLC128245, IRDAI Reg. No. 101 . The name/letters "HDFC" in the name/logo of the company belongs to Housing Development Finance Corporation Limited ("HDFC Limited") and is used by HDFC Life under an agreement entered into with HDFC Limited. ARN EU/04/19/13618
T&C Apply. ARN EU/04/19/13626