ನವದೆಹಲಿ(ಜ.09): ಜಾರ್ಖಂಡ್ನ ಚತ್ರಾ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ 50 ವರ್ಷದ ವಿಧವೆಯ ಆರೋಗ್ಯ ತುಂಬಾ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಆರೋಪಿಗಳು ಸಂತ್ರಸ್ತೆಯ ಖಾಸಗಿ ಭಾಗದೊಳಗೆ ಸ್ಟೀಲ್ ಗ್ಲಾಸ್ನ್ನು ತುರುಕಿದ್ದರು ಎಂಬ ವಿಷಯವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಈ ಘಟನೆ ಗುರುವಾರ ರಾತ್ರಿ ಹಂಟರ್ಗಂಜ್ನ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಕೋಬ್ನಾ ಗ್ರಾಮದಲ್ಲಿ ನಡೆದಿದೆ ಎಂದು ಎಸ್ಪಿ ರಿಷಬ್ ಜಾ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೂವರಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನು ಓರ್ವನಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತರು ಸಂತ್ರಸ್ತೆ ಮನೆಯ ಪಕ್ಕದಲ್ಲೇ ಇದ್ದು, ಆಕೆ ಒಂಟಿಯಾಗಿರುವುದನ್ನು ಗಮನಿಸಿ ಮನೆಗೆ ನುಗ್ಗಿ ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಮಕ್ಕಳ ಸಾವು ಪ್ರಕರಣ; ತನಿಖೆಗೆ ಆದೇಶಿಸಿದ ಸಿಎಂ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಹುಲ್ ಗಾಂಧಿ
ಸದ್ಯ ಸಂತ್ರಸ್ತೆಯನ್ನು ಹಂಟರ್ಗಂಜ್ ಕಮ್ಯುನಿಟಿ ಹೆಲ್ತ್ ಸೆಂಟರ್ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಆರೋಪಿಗಳು ಆಕೆಯ ಖಾಸಗಿ ಭಾಗಕ್ಕೆ ಸ್ಟೀಲ್ ಗ್ಲಾಸ್ನ್ನು ಬಲವಾಗಿ ಹಾಕಿರುವುದರಿಂದ ಸಂತ್ರಸ್ತೆಯ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದಂತೆಯೇ ಈ ಘಟನೆಯೂ ನಡೆದಿದೆ. ಎರಡು ದಿನಗಳ ಹಿಂದೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದರು. ಇದು ನಿರ್ಭಯಾ ಪ್ರಕರಣದಂತೆ ಅತ್ಯಂತ ಕ್ರೂರ ಮತ್ತು ಭಯಾನಕ ಘಟನೆಯಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ