6 Teachers Arrested: ಶಾಲಾ ಬಾಲಕರನ್ನು ಹಲವು ತಿಂಗಳಿಂದ ಲೈಂಗಿಕ ಕೃತ್ಯಕ್ಕೆ ಬಳಸಿದ 6 ಶಿಕ್ಷಕಿಯರ ಬಂಧನ!

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಕಳೆದ ಹಲವು ಸಮಯಗಳಿಂದ ಹತ್ತಾರು ಶಾಲಾ ಬಾಲಕರನ್ನು ಲೈಂಗಿಕ ದುರ್ಬಳಕೆ ಮಾಡಿದ ಆರೋಪದ ಮೇಲೆ 6 ಶಿಕ್ಷಕಿಯರನ್ನು ಬಂಧಿಸಲಾಗಿದೆ. ಶಿಕ್ಷಕಿಯರ ವಿರುದ್ಧ ವಿವಿಧ ದೂರು ಕೇಳಿಬಂದ ಪರಿಣಾಮ ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

  • News18 Kannada
  • 4-MIN READ
  • Last Updated :
  • New Delhi, India
  • Share this:

ನ್ಯೂಯಾರ್ಕ್: ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳನ್ನು ಲೈಂಗಿಕ ತೃಷೆಗೆ ಬಳಸಿದ ಆರೋಪದ ಮೇಲೆ ಆರು ಮಂದಿ ಶಿಕ್ಷಕಿಯರನ್ನು (6 Teachers Arrested) ಅಮೆರಿಕಾದಲ್ಲಿ ಪೊಲೀಸರು (US Police) ಬಂಧನ ಮಾಡಿದ್ದಾರೆ. ಎರಡು ದಿನದ ಅವಧಿಯಲ್ಲಿ ಒಟ್ಟು ಆರು ಮಂದಿ ಮಹಿಳಾ ಶಿಕ್ಷಕರನ್ನು ಜೈಲಿಗೆ ಅಟ್ಟಲಾಗಿದ್ದು, ಕಳೆದ ಅನೇಕ ಸಮಯದಿಂದ ಮಕ್ಕಳನ್ನು ಲೈಂಗಿಕ ದುರ್ಬಳಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ಶಿಕ್ಷಕಿಯರ ಪೈಕಿ 38 ವರ್ಷದ ಡ್ಯಾನ್‌ವಿಲ್ಲೆಯ ಎಲ್ಲೆನ್ ಶೆಲ್ ಎಂಬಾಕೆ ತಾನು ಕೆಲಸ ಮಾಡುತ್ತಿದ್ದ ಶಾಲೆಯಲ್ಲಿ ಇಬ್ಬರು 16 ವರ್ಷದ ಹುಡುಗರೊಂದಿಗೆ ಮೂರು ಬಾರಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಇದು ಆಕೆಯ ವಿರುದ್ಧ ಮೂರನೇ ಬಾರಿ ಕೇಳಿ ಬರುತ್ತಿರುವ ಅತ್ಯಾಚಾರದ ಆರೋಪ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಆಕೆಯನ್ನು ಗ್ಯಾರಾರ್ಡ್ ಕೌಂಟಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ಇದನ್ನೂ ಓದಿ: Crime News: ಯುಕೆಜಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ; ಡಿಎಂಕೆ ಪಕ್ಷದ ಕೌನ್ಸಿಲರ್ ಬಂಧನ


ಶಾಲೆಯಲ್ಲೇ ವಿದ್ಯಾರ್ಥಿಯ ದುರ್ಬಳಕೆ


ವುಡ್‌ಲಾನ್ ಎಲಿಮೆಂಟರಿ ಶಾಲೆಯಲ್ಲಿ ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಎಲ್ಲೆನ್ ಶೆಲ್, ಅದಕ್ಕೂ ಮೊದಲು ಲ್ಯಾಂಕಾಸ್ಟರ್ ಎಲಿಮೆಂಟರಿ ಶಾಲೆಯಲ್ಲಿ ಉದ್ಯೋಗಿಯಾಗಿದ್ದರು. ಎಲ್ಲೆನ್ ಶೆಲ್ ಕೃತ್ಯದ ಬಗ್ಗೆ ಬೋಯ್ಲ್ ಕೌಂಟಿ ಶಾಲೆಯ ಅಧಿಕಾರಿಗಳು ಆಕೆಯ ಪೋಷಕರಿಗೆ ಪತ್ರವೊಂದನ್ನು ಕಳುಹಿಸಿದ್ದು, ಬಂಧನದ ಬಗ್ಗೆ ಎಚ್ಚರಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಲೈಂಗಿಕ ಕೃತ್ಯ ಬೆಳಕಿಗೆ ಬಂದ ನಂತರ ಶಿಕ್ಷಕಿ ಎಲ್ಲೆನ್ ಶೆಲ್ ಅವರನ್ನು ಶಾಲಾ ಸಂಸ್ಥೆ ರಜೆಯ ಮೇಲೆ ಕಳಿಸಿತ್ತು.


ಆರೋಪಿ ಶಿಕ್ಷಕಿಯರು


ಇನ್ನು ಇದೊಂದೇ ಪ್ರಕರಣವಲ್ಲದೇ, ಮಕ್ಕಳನ್ನು ಲೈಂಗಿಕ ದುರುಪಯೋಗ ಮಾಡಿದ ಆರೋಪದ ಮೇಲೆ ಯುಎಸ್‌ನಲ್ಲಿ ಕನಿಷ್ಠ ಆರು ಮಂದಿ ಶಿಕ್ಷಕಿಯರ ಮೇಲೆ ಪ್ರಕರಣಗಳು ದಾಖಲಾಗಿದೆ. ಅರ್ಕಾನ್ಸಾಸ್ ಶಿಕ್ಷಣತಜ್ಞೆ 32 ವರ್ಷದ ಹೀದರ್ ಹೇರ್ ಎಂಬಾಕೆಯ ಮೇಲೆ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪ ಕೇಳಿ ಬಂದಿದೆ.


ಇತ್ತ, ತನ್ನ ಶಾಲಾ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಒಕ್ಲಹೋಮಾದ ಎಮಿಲಿ ಹ್ಯಾನ್‌ಕಾಕ್ (26) ಎಂಬ ಶಿಕ್ಷಕಿಯ ವಿರುದ್ಧ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದು, ಆಕೆಯನ್ನು ಕಳೆದ ಗುರುವಾರ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.


ಸ್ನಾಪ್‌ಚಾಟ್‌ನಲ್ಲಿ ಸಂಭಾಷಣೆ


ಹಾಗೆಯೇ, ಲಿಂಕನ್ ಕೌಂಟಿಯ ಅರೆಕಾಲಿಕ ಶಿಕ್ಷಕಿಯೊಬ್ಬರು 15 ವರ್ಷದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿರುವ ಆರೋಪ ಕೇಳಿ ಬಂದಿದೆ. ಎಮ್ಮಾ ಡೆಲಾನಿ ಎಂಬಾಕೆ ಬದಲಿ ಶಿಕ್ಷಕಿಯಾಗಿ ಹ್ಯಾನ್‌ಕಾಕ್ ವೆಲ್‌ಸ್ಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆಕೆ ಶಾಲೆಯಲ್ಲೇ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಪರ್ಕ ನಡೆಸಿದ್ದಾಳೆ. ಇದಕ್ಕೆ ಪೂರಕವಾಗಿ ಆಕೆ ಸ್ನಾಪ್‌ಚಾಟ್‌ ಆಪ್‌ನಲ್ಲಿ ಸಂಭಾಷಣೆ ನಡೆಸಿರುವ ದಾಖಲೆಗಳೂ ಸಿಕ್ಕಿವೆ.


ಇದನ್ನೂ ಓದಿ: Crime News: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯನ್ನು ಕರೆದೊಯ್ದು ಸಾಮೂಹಿಕ ಅತ್ಯಾಚಾರ!


ಇನ್ನೊಂದೆಡೆ, ಅಯೋವಾದ ಡೆಸ್ ಮೊಯಿನ್ಸ್‌ನಲ್ಲಿರುವ ಕ್ಯಾಥೋಲಿಕ್ ಹೈಸ್ಕೂಲ್‌ನಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿರುವ ಕ್ರಿಸ್ಟನ್ ಗ್ಯಾಂಟ್ (36) ಎಂಬಾಕೆ ಹದಿ ಹರೆಯದ ವಿದ್ಯಾರ್ಥಿಯೊಂದಿಗೆ ಶಾಲೆಯ ಒಳಗೆ ಮತ್ತು ಹೊರಗೆ 5ಕ್ಕೂ ಹೆಚ್ಚು ಬಾರಿ ಲೈಂಗಿಕ ಸಂಪರ್ಕ ನಡೆಸಿದ್ದು, ಈಕೆಯನ್ನು ಶುಕ್ರವಾರ ಬಂಧಿಸಲಾಗಿದೆ.


ಆರೋಪಿ ಶಿಕ್ಷಕಿಯರು


ಜೇಮ್ಸ್ ಮ್ಯಾಡಿಸನ್ ಹೈಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಕರ್ತವ್ಯ ಮಾಡುತ್ತಿದ್ದ 33 ವರ್ಷದ ಅಲಿಹ್ ಖೇರದ್‌ಮಂಡ್ ಎಂಬಾಕೆಯ ವಿರುದ್ಧವೂ ಲೈಂಗಿಕ ದುರುಪಯೋಗದ ಪ್ರಕರಣ ದಾಖಲಾಗಿದ್ದು, ಹಲವಾರು ತಿಂಗಳುಗಳ ಕಾಲ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಪರ್ಕ ಹೊಂದಿರುವ ಆರೋಪ ಕೇಳಿ ಬಂದಿದೆ.


ಪೆನ್ಸಿಲ್ವೇನಿಯಾದಲ್ಲಿ ಜಾವೆಲಿನ್ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದ ಶಿಕ್ಷಕಿಯ ವಿರುದ್ಧವೂ ಇಂತಹದ್ದೇ ಆರೋಪ ಕೇಳಿ ಬಂದಿದ್ದು, ತನ್ನ ಬಳಿ ಜಾವೆಲಿನ್ ತರಬೇತಿಗೆ ಬರುತ್ತಿದ್ದ 17 ವರ್ಷದ ಹುಡುಗನ ಜೊತೆ ಹಲವು ಬಾರಿ ಲೈಂಗಿಕ ಸಂಪರ್ಕ ನಡೆಸಿರುವುದಾಗಿ ದೂರು ದಾಖಲಾಗಿದೆ.


 ಇನ್ನು 26 ವರ್ಷದ ಹನ್ನಾ ಮಾರ್ತ್ ಎಂಬ ಶಿಕ್ಷಕಿಯನ್ನು ಪೊಲೀಸರು ಬಂಧನ ಮಾಡಿದ್ದು, ನಾರ್ಥಾಂಪ್ಟನ್ ಏರಿಯಾ ಹೈಸ್ಕೂಲ್‌ನ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್‌ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧದಲ್ಲಿ ತೊಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಬಂಧಿಸಲಾಗಿದೆ.

top videos
    First published: