NLC Boiler Explosion: ತಮಿಳುನಾಡಿನಲ್ಲಿ ಬಾಯ್ಲರ್​ ಸ್ಫೋಟ; 6 ಜನ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಸ್ಫೋಟಗೊಂಡ ಬಾಯ್ಲರ್​ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದಾಗ್ಯೂ ಇದು ಹೇಗೆ ಸ್ಫೋಟಗೊಂಡಿತು ಎನ್ನುವ ಪ್ರಶ್ನೆ ಕಾಡಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

news18-kannada
Updated:July 1, 2020, 12:52 PM IST
NLC Boiler Explosion: ತಮಿಳುನಾಡಿನಲ್ಲಿ ಬಾಯ್ಲರ್​ ಸ್ಫೋಟ; 6 ಜನ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ
ಸ್ಫೋಟಗೊಂಡ ಬಾಯ್ಲರ್​
  • Share this:
ಚೆನ್ನೈ (ಜು.1): ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿರುವ ಉಷ್ಣ ವಿದ್ಯುತ್​ ಸ್ಥಾವರದಲ್ಲಿ ಬಾಯ್ಲರ್​ ಸ್ಫೋಟಗೊಂಡ ಪರಿಣಾಮ 6ಕ್ಕೂ ಜೆಚ್ಚು ಜನರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಕಡಲೂರಿನಲ್ಲಿರುವ ಸರ್ಕಾರಿ ಸ್ವಾಮ್ಯದ ನೇವೆಲಿ ಲಿಗ್ನೈ​ಟ್​ ಪ್ಲಾಂಟ್​ನಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆ ವೇಳೆ ಸಾಕಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ. ಕಡಲೂರು ತಮಿಳುನಾಡು ರಾಜಧಾನಿ ಚೆನ್ನೈನಿಂದ 180 ಕಿ.ಮೀ. ದೂರದಲ್ಲಿದೆ.

ಸ್ಫೋಟಗೊಂಡ ಬಾಯ್ಲರ್​ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದಾಗ್ಯೂ ಇದು ಹೇಗೆ ಸ್ಫೋಟಗೊಂಡಿತು ಎನ್ನುವ ಪ್ರಶ್ನೆ ಮೂಡಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.


ಕಳೆದ ಎರಡು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾಯ್ಲರ್​ ಸ್ಫೋಟವಾಗಿದೆ. ಮೇ ತಿಂಗಳಲ್ಲಿ ಈ ಪ್ಲಾಂಟ್​ನಲ್ಲಿ ಬಾಯ್ಲರ್​ ಸ್ಫೋಟಗೊಂಡು 6 ಜನರಿಗೆ ಗಂಭೀರ ಗಾಯಗಳಾಗಿದ್ದವು. ಕಾರ್ಖಾನೆಯಿಂದ ಭಾರೀ ಪ್ರಮಾಣದ ಹೊಗೆ ಬರುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
First published: July 1, 2020, 12:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading