ಲಕ್ನೋ(ಮೇ.31): ಉತ್ತರ ಪ್ರದೇಶದ (Uttara Pradesh) ಬರೇಲಿ ಜಿಲ್ಲೆಯಲ್ಲಿ ಇಂದು ಟ್ರಕ್‌ಗೆ ಆಂಬ್ಯುಲೆನ್ಸ್ (Ambulance) ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದಾರೆ. ತಪಾಸಣೆಯ ನಂತರ ಆಂಬುಲೆನ್ಸ್‌ನಲ್ಲಿ ದೆಹಲಿಯಿಂದ (Delhi) ಹಿಂದಿರುಗುತ್ತಿದ್ದ ಪಿಲ್ಭಿತ್‌ನ ಕುಟುಂಬದ ಆರು ಮಂದಿ ಬಲಿಪಶುಗಳಲ್ಲಿ ಸೇರಿದ್ದಾರೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ದೆಹಲಿ-ಲಖನೌ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಜಾನೆ ಅಪಘಾತ ಸಂಭವಿಸಿದೆ. ಆಂಬ್ಯುಲೆನ್ಸ್ ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಟ್ರಕ್‌ಗೆ (Truck) ಡಿಕ್ಕಿ ಹೊಡೆದು ಚಾಲಕ ಮತ್ತು ವಾಹನದಲ್ಲಿದ್ದ (Vehicle) ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು.
ಸಂತ್ರಸ್ತರೆಲ್ಲರನ್ನು ಗುರುತಿಸಲಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ನಂತರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಂತಾಪ ವ್ಯಕ್ತಪಡಿಸಿದ ಸಿಎಂ ಯೋಗಿ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
ಇದನ್ನೂ ಓದಿ: Delhi Weather: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ, ಆಲಿಕಲ್ಲು ಬಿದ್ದು ವ್ಯಕ್ತಿ ಸಾವು! ಇಲ್ನೋಡಿ ಫೋಟೋಸ್
ಇತ್ತೀಚೆಗೆ ಬೀದರ್ನಿಂದ ಹೋದ ಯಾತ್ರಿಗಳ ಸಾವು
ಭಾನುವಾರ ಬೆಳಗ್ಗೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ಟ್ರಕ್‌ಗೆ ವ್ಯಾನ್ ಡಿಕ್ಕಿ ಹೊಡೆದು ಬೀದರ್ ನಗರದ ಎಂಟು ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ ವ್ಯಾನ್ ಚಾಲಕ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಲಖಿಂಪುರ ಖೇರಿ ಮತ್ತು ಮೋತಿಪುರ್ ನಡುವೆ ಇರುವ ನೌನಿಹಾಲ್ ಪ್ರದೇಶದ ಖೇರಿ-ನನ್ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಚಾರ್ಧಾಮ್ ತೀರ್ಥಯಾತ್ರೆಗೆ ತೆರಳಿದ್ದ ಕುಟುಂಬ
ಬೀದರ್ ನಗರದ ಎಲ್ಲಾ 16 ಜನರು ಚಾರ್ಧಾಮ್ ತೀರ್ಥಯಾತ್ರೆಗೆ ತೆರಳುತ್ತಿದ್ದರು ಮತ್ತು ಅಯೋಧ್ಯೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅವರು ಭಾನುವಾರ ಸಂಜೆ ಹಿಂತಿರುಗಬೇಕಿತ್ತು ಎಂದು ಅವರ ಕುಟುಂಬದ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.
ಇದನ್ನೂ ಓದಿ: Rajyasabha Election: ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್
ಮೃತರನ್ನು ಶಿವಕುಮಾರ್ ಪೂಜಾರಿ (28), ಜಗದಾಂಬ (52), ಮನ್ಮಥ (36), ಅನಿಲ್ (30), ಸಂತೋಷ್ (38), ಶಶಿಕಲಾ (38), ಸರಸ್ವತಿ ಮತ್ತು ಶಿವಾನಿ (30) ಎಂದು ಗುರುತಿಸಲಾಗಿದೆ. ಭೂಮಿಕಾ (15) ಎಂಬುವರಿಗೆ ಗಂಭೀರ ಗಾಯಗಳಾಗಿವೆ.
ಮೃತರ ಕುಟುಂಬದ ಮೂವರು ಸದಸ್ಯರು ಮೃತದೇಹಗಳನ್ನು ಮರಳಿ ತರಲು ಅಪಘಾತ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದ್ದರು. ಬಹ್ರೈಚ್ ಆಡಳಿತವು ಪಾರ್ಥಿವ ಶರೀರವನ್ನು ಕಳುಹಿಸಲು ವ್ಯವಸ್ಥೆ ಮಾಡಿತ್ತು.
ಉತ್ತರ ಪ್ರದೇಶ ಸರ್ಕಾರವು ಗಾಯಾಳುಗಳನ್ನು ಹೈದರಾಬಾದ್‌ಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ರಸ್ತೆ ಮೂಲಕ ಬೀದರ್‌ಗೆ ತರಲಾಗಿತ್ತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಪ್ರಸ್ತಾವನೆ ಕಳುಹಿಸುವಂತೆ ಬೀದರ್ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ